ETV Bharat / city

ಕೆಪಿಸಿಸಿಗೆ ಯಾಕೆ ಬೇಕು 4 ಕಾರ್ಯಾಧ್ಯಕ್ಷ ಸ್ಥಾನ?: ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಹೆಚ್.​ಕೆ.ಪಾಟೀಲ್ ತಿರುಗೇಟು - ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಹೆಚ್​ಕೆ ಪಾಟೀಲ ವಿರೋಧ

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ, ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಸಿಎಲ್​ಪಿ ನಾಯಕ ಸ್ಥಾನ ಪ್ರತ್ಯೇಕವಾಗಲಿ. ಕೆಪಿಸಿಸಿಗೆ ನಾಲ್ಕು ಕಾರ್ಯಾಧ್ಯಕ್ಷ ಸ್ಥಾನದ ಅವಶ್ಯಕತೆ ಇಲ್ಲ ಅನ್ನೋದು ಹಿರಿಯ ಕಾಂಗ್ರೆಸ್ ನಾಯಕ/ ಸಚಿವ ಹೆಚ್.​ಕೆ. ಪಾಟೀಲ್ ಅಭಿಪ್ರಾಯ.

HK_patil_Reaction
ಹೆಚ್​ಕೆ ಪಾಟೀಲ್ ತಿರುಗೇಟು
author img

By

Published : Jan 21, 2020, 1:37 PM IST

ಬೆಂಗಳೂರು: ಕೆಪಿಸಿಸಿಗೆ ನಾಲ್ಕು ಕಾರ್ಯಾಧ್ಯಕ್ಷ ಸ್ಥಾನದ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್​ ಹಿರಿಯ ನಾಯಕ, ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾಲ್ವರು ಕಾರ್ಯಾಧ್ಯಕ್ಷರು ಯಾಕೆ ಬೇಕು ಅಂತಿದ್ದಾರೋ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಪ್ರಸ್ತಾಪಕ್ಕೆ ನೇರವಾಗಿಯೇ ವಿರೋಧ ವ್ಯಕ್ತಪಡಿಸಿದರು. ಜೊತೆಗೆ ಈಗ ಇರುವ ಒಂದು ಕಾರ್ಯಾಧ್ಯಕ್ಷ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾ‌ನವನ್ನೇ ಮುಂದುವರೆಸಲಿ ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ವಿಳಂಬ ವಿಚಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಅಧ್ಯಕ್ಷ ಸ್ಥಾನದ ಆಯ್ಕೆ ಈಗಾಗಲೇ ವಿಳಂಬವಾಗಿದೆ. ಕೂಡಲೇ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಆಗಬೇಕು. ಪಕ್ಷದ ಹಿತದೃಷ್ಟಿಯಿಂದ ಅಧ್ಯಕ್ಷರ ಆಯ್ಕೆ ಮುಖ್ಯ ಎಂದು ಹೇಳಿದರು.

ಹೆಚ್​.ಕೆ.ಪಾಟೀಲ್ ತಿರುಗೇಟು

ಜಿಲ್ಲಾ ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಚುನಾವಣೆ ಬರುತ್ತಿದೆ. ಹೀಗಾಗಿ ಪಕ್ಷ ಸಂಘಟನೆಯಾಗಬೇಕು. ಕೂಡಲೇ ಕೆಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಹೈಕಮಾಂಡ್​​ಗೆ ಒತ್ತಾಯಿಸಿದರು.

ಕೇಂದ್ರದಲ್ಲಿ ಯುಪಿಎ ಅವಧಿಯಲ್ಲಿ ಸೋನಿಯಾ ಗಾಂಧಿ ಅವರನ್ನೂ ಸೇರಿದಂತೆ ಹುದ್ದೆ ಹಂಚಿಕೆ ಆಗಿತ್ತು. ಮಹಾರಾಷ್ಟ್ರದಲ್ಲೂ ಹಿಂದೆ ಸಿಎಲ್​​ಪಿ ಮತ್ತು ವಿರೋಧ ಪಕ್ಷ ನಾಯಕ ಸ್ಥಾನ ಹಂಚಿಕೆ ಆಗಿತ್ತು. ಮಹಾರಾಷ್ಟ್ರ ಮತ್ತು ಯುಪಿಎ ಮಾದರಿಯಲ್ಲೇ ರಾಜ್ಯದಲ್ಲೂ ಸ್ಥಾನ ಹಂಚಿಕೆ ಆಗಲಿ. ನಮ್ಮದು ರಾಷ್ಟ್ರೀಯ ಪಕ್ಷ. ದೇಶಕ್ಕೆ ಒಂದೇ ಮಾದರಿ ಇರಬೇಕು ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

ನೀವೂ ಸಹ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿನಾ? ಹೈಕಮಾಂಡ್ ಕೊಟ್ಟರೆ ಕೆಲಸ ಮಾಡುತ್ತೀರಾ? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಹೆಚ್.ಕೆ.ಪಾಟೀಲ್, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಸ್ಟಷ್ಟಪಡಿಸಿದರು.

Intro:ಬೆಂಗಳೂರು : ಕೆಪಿಸಿಸಿಗೆ ನಾಲ್ಕು ಕಾರ್ಯಾಧ್ಯಕ್ಷ ಸ್ಥಾನ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸಚಿವ ಎಚ್.ಕೆ. ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.Body:ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಾಕೆ ನಾಲ್ಕು ಕಾರ್ಯಾಧ್ಯಕ್ಷ ಬೇಕು ಅಂತಿದ್ದಾರೋ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಪ್ರಸ್ತಾಪಕ್ಕೆ ನೇರವಾಗಿಯೇ ವಿರೋಧ ವ್ಯಕ್ತಪಡಿಸಿದರು.
ಈಗ ಇರುವ ಒಂದು ಕಾರ್ಯಾಧ್ಯಕ್ಷ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾ‌ನ ಮುಂದುವರೆಸಲಿ. ಆದರೆ ನಾಲ್ಕು ಕಾರ್ಯಾಧ್ಯಕ್ಷ ಸ್ಥಾನ ಅವಶ್ಯಕತೆ ಇಲ್ಲ ಎಂದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ ವಿಳಂಬ ವಿಚಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಅಧ್ಯಕ್ಷ ಸ್ಥಾನದ ಆಯ್ಕೆ ಈಗಾಗಲೇ ವಿಳಂಬ ಆಗಿದೆ. ಕೂಡಲೇ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಆಗಬೇಕು. ಪಕ್ಷದ ಹಿತದೃಷ್ಟಿಯಿಂದ ಅಧ್ಯಕ್ಷರ ಆಯ್ಕೆ ಮುಖ್ಯ ಎಂದು ಹೇಳಿದರು.
ಜಿಲ್ಲಾ ಪಂಚಾಯತಿ ಮತ್ತು ಗ್ರಾಮ ಪಂಚಾಯ್ತಿ ಚುನಾವಣೆ ಬರುತ್ತಿದೆ. ಹೀಗಾಗಿ ಪಕ್ಷ ಸಂಘಟನೆ ಮುಖ್ಯ. ಕೂಡಲೇ ಕೆಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡಬೇಕು ಎಂದು ಹೈಕಮಾಂಡ್ ಗೆ ಒತ್ತಾಯಿಸಿದರು.
ವಿಪಕ್ಷ ನಾಯಕ ಮತ್ತು ಸಿಎಲ್ ಪಿ ನಾಯಕ ಹುದ್ದೆ ಪ್ರತ್ಯೇಕವಾಗಲಿ. ಸಮ್ಮಿಶ್ರ ಸರ್ಕಾರ ಇದ್ದಾಗ ಹುದ್ದೆ ವಿಭಾಗವಾಗಿತ್ತು. ಕೇಂದ್ರದಲ್ಲಿ ಯುಪಿಎ ಅವಧಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಸೇರಿದಂತೆ ಹುದ್ದೆ ಹಂಚಿಕೆ ಆಗಿತ್ತು. ಮಹಾರಾಷ್ಟ್ರದಲ್ಲೂ ಹಿಂದೆ ಸಿಎಲ್ ಪಿ ಮತ್ತು ವಿಪಕ್ಷ ಸ್ಥಾನ ಹಂಚಿಕೆ ಆಗಿತ್ತು. ಮಹಾರಾಷ್ಟ್ರ ಮತ್ತು ಯುಪಿಎ ಮಾದರಿಯಲ್ಲೇ ರಾಜ್ಯದಲ್ಲೂ ಸ್ಥಾನ ಹಂಚಿಕೆ ಆಗಲಿ. ನಮ್ಮದು ರಾಷ್ಟ್ರೀಯ ಪಕ್ಷ. ದೇಶಕ್ಕೆ ಒಂದೇ ಮಾದರಿ ಇರಬೇಕು.
ರಾಜ್ಯದಲ್ಲೂ ವಿಪಕ್ಷ ಮತ್ತು ಸಿಎಲ್ ಪಿ ಸ್ಥಾನ ಪ್ರತ್ಯೇಕವಾಗಲಿ ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.
ನೀವು ಸಹ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿನಾ, ಹೈಕಮಾಂಡ್ ಕೊಟ್ಟರೆ ಮಾಡುತ್ತಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಎಚ್.ಕೆ. ಪಾಟೀಲ್ , ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.