ಬೆಂಗಳೂರು: ತಾವು ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಂಡಿದ್ದಾಗಿ ಮಾಧ್ಯಮಗಳಲ್ಲಿ ಬಂದ ವರದಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೆಲವು ಪತ್ರಿಕೆಗಳ ವರದಿಯಂತೆ ನಾನು ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಂಡಿಲ್ಲ, ಅದು ದೇಹದ ಉಷ್ಣಾಂಶ ಪರೀಕ್ಷೆ ಅಷ್ಟೆ ಎಂದಿದ್ದಾರೆ. ಜ್ವರ, ಶೀತ, ಕೆಮ್ಮು ಇದ್ದವರು ತಕ್ಷಣ ವೈದ್ಯರ ಬಳಿ ಹೋಗಿ. ಅನುಮಾನ ಬಂದರೆ ಆರೋಗ್ಯ ಇಲಾಖೆ ಸಂಪರ್ಕಿಸಿ. ಸರಿಯಾದ ಕ್ರಮದಲ್ಲಿ ಕೊರೊನಾ ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಜಾಗೃತಿ ಸಂದೇಶವನ್ನು ಕೂಡ ಅವರು ಈ ಸಂದರ್ಭದಲ್ಲಿ ನೀಡಿದ್ದಾರೆ.
ನಿನ್ನೆ ವಿಧಾನಸಭೆ ಕಲಾಪದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ವಿಧಾನಸೌಧದ ಕೆಂಗಲ್ ಪ್ರವೇಶದ್ವಾರದಲ್ಲಿ ಸಿದ್ದರಾಮಯ್ಯ ಥರ್ಮಲ್ ಸ್ಕ್ರೀನಿಂಗ್ ಯಂತ್ರದ ಮೂಲಕ ದೇಹದ ಉಷ್ಣಾಂಶದ ಪರೀಕ್ಷೆ ಮಾಡಿಸಿಕೊಂಡಿದ್ದರು.