ಬೆಂಗಳೂರು: ಕೊರೊನಾ ಸಂಕಷ್ಟದಲ್ಲಿ ಸಿಲುಕಿರುವ ಜನತೆಗೆ ಇಎಂಐನಿಂದ ತಾತ್ಕಾಲಿಕ ರಿಲೀಫ್ ನೀಡಿದ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರವನ್ನು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ವಾಗತಿಸಿದ್ದಾರೆ.
ಕೊರೊನಾ ಪಿಡುಗಿನ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗಿರುವ ಬಡವರು, ಮಧ್ಯಮ ವರ್ಗದವರು, ಕೂಲಿಕಾರರು, ಕಾರ್ಮಿಕರ ನೆರವಿಗೆ ಅನುಕೂಲವಾಗುವ ದೃಷ್ಟಿಯಿಂದ ಬ್ಯಾಂಕುಗಳ ಸಾಲಕ್ಕೆ ಕಟ್ಟಬೇಕಿರುವ ಇಎಂಐಗೆ ಮೂರು ತಿಂಗಳ ಕಾಲಾವಕಾಶ ನೀಡಿರುವ ರಿಸರ್ವ್ ಬ್ಯಾಂಕಿನ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ.
ಈ ಜನಪರ ಕ್ರಮ ಕೈಗೊಂಡಿದ್ದಕ್ಕಾಗಿ ರಿಸರ್ವ್ ಬ್ಯಾಂಕಿನ ಗವರ್ನರ್, ಪ್ರಧಾನಮಂತ್ರಿಗಳಿಗೆ ಮತ್ತು ಕೇಂದ್ರದ ಆರ್ಥಿಕ ಮಂತ್ರಿಯವರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.