ಬೆಂಗಳೂರು : ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿ ಘೋಷಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಹುಸಂಖ್ಯಾತರು, ಅಲ್ಪ ಸಂಖ್ಯಾತರು ಎಲ್ಲಾ ರಾಜ್ಯದಲ್ಲಿ ಇದ್ದಾರೆ.
ಜಮ್ಮು ಕಾಶ್ಮೀರ ಹಾಗೂ ಪಂಜಾಬ್‌ನಲ್ಲಿ ಹಿಂದೂಗಳು ಅಲ್ಪಸಂಖ್ಯಾತರು. ಅವರಿಗೆ ಅಲ್ಪಸಂಖ್ಯಾತ ಸ್ಥಾನಮಾನ ಕೊಡುವ ಅಧಿಕಾರ ಆ ರಾಜ್ಯ ಸರ್ಕಾರಗಳಿಗೆ ಇದೆ. ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವ ತಳಮಟ್ಟದ ಜನರಿಗೆ ತಲುಪಬೇಕು ಎಂದು ಆಗ್ರಹಿಸಿದರು.
ಈ ಸಂಬಂಧ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರ ಸ್ವಾಗತಿಸುತ್ತೇನೆ. ಇದು ಈ ಹಿಂದೆಯೇ ಆಗಬೇಕಿತ್ತು. ಈಗ ಆಗಿದೆ. ಅದಕ್ಕೆ ನನ್ನ ಸ್ವಾಗತ ಇದೆ ಎಂದರು.
ಇದನ್ನೂ ಓದಿ: ಹಿಜಾಬ್ ವಿಚಾರದಲ್ಲಿ ಆದೇಶ ಉಲ್ಲಂಘಿಸಿದರೆ ಕ್ರಮ: ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ