ETV Bharat / city

ಎನ್.ಆರ್. ರಮೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ವಿಧಾನಸಭೆ ಉಪಾಧ್ಯಕ್ಷ - ವಿಧಾನಸಭೆ ಉಪಾಧ್ಯಕ್ಷ ಎಂ. ಕೃಷ್ಣಾರೆಡ್ಡಿ ಕುರಿತ ಸುದ್ದಿ

ಯಾವುದೇ ದಾಖಲೆ ಇಲ್ಲದೇ ಆರೋಪ ಮಾಡಿರುವ ಎನ್.ಆರ್.ರಮೇಶ್ ವಿರುದ್ಧ ಕ್ರಿಮಿನಲ್ ಕೇಸು ಹಾಕುವುದರ ಜೊತೆಗೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ವಿಧಾನಸಭೆ ಉಪಾಧ್ಯಕ್ಷ ಎಂ. ಕೃಷ್ಣಾರೆಡ್ಡಿ ಎಚ್ಚರಿಕೆ ನೀಡಿದರು.

ವಿಧಾನಸಭೆ ಉಪಾಧ್ಯಕ್ಷ ಎಂ. ಕೃಷ್ಣಾರೆಡ್ಡಿ
author img

By

Published : Nov 16, 2019, 1:34 PM IST

ಬೆಂಗಳೂರು: ಭೂಗಳ್ಳರಿಗೆ ನಾನು ಸಹಕಾರ ಮಾಡುತ್ತಿದ್ದೇನೆಂದು ಬಿಜೆಪಿ ವಕ್ತಾರ ಎನ್. ಆರ್. ರಮೇಶ್ ಮಾಡಿರುವ ಆರೋಪ ರಾಜಕೀಯ ಪ್ರೇರಿತವಾದುದ್ದು. ಅವರೊಬ್ಬ ಹುಚ್ಚ, ಅಜ್ಞಾನಿ ಎಂದು ವಿಧಾನಸಭೆ ಉಪಾಧ್ಯಕ್ಷ ಎಂ. ಕೃಷ್ಣಾರೆಡ್ಡಿ ಕಿಡಿಕಾರಿದ್ದಾರೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ದಾಖಲೆ ಇಲ್ಲದೇ ಆರೋಪ ಮಾಡಿರುವ ಎನ್.ಆರ್.ರಮೇಶ್ ವಿರುದ್ಧ ಕ್ರಿಮಿನಲ್ ಕೇಸು ಹಾಕುವುದರ ಜೊತೆಗೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದರು. ಸರ್ಕಾರಿ ಸ್ವತ್ತನ್ನು ಕಬಳಿಸಲು ಯತ್ನಿಸುತ್ತಿರುವ ಸರ್ಕಾರಿ ನೆಲಗಳ್ಳರಿಗೆ ತಾವು ಸಹಕಾರ ನೀಡಿದ್ದೇನೆ ಎಂದು ಎನ್.ಆರ್.ರಮೇಶ್ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾದುದು. ಕಪೋಲ ಕಲ್ಪಿತವಾದುದು ಹಾಗೂ ದುರುದ್ದೇಶದಿಂದ ಕೂಡಿದೆ ಎಂದು ಹೇಳಿದರು.

ವಿಧಾನಸಭೆ ಉಪಾಧ್ಯಕ್ಷ ಎಂ. ಕೃಷ್ಣಾರೆಡ್ಡಿ

ಸಾಂವಿಧಾನಿಕ ಹುದ್ದೆಯಲ್ಲಿರುವವರ ಮೇಲೆ ಆರೋಪ ಮಾಡುವಾಗ ಜವಾಬ್ದಾರಿ ಇರಬೇಕು. ರಾಜಕೀಯ ಪ್ರೇರಿತವಾಗಿ ಮಾತನಾಡಬಾರದು. ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ರಕ್ಷಿಸುವಲ್ಲಿ ವಿಧಾನಸಭೆಯ ಅರ್ಜಿಗಳ ಸಮಿತಿ ತನ್ನ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದೆ. ಈ ಅರ್ಜಿ ವಿಷಯದ ಕುರಿತು ನಾನು ಯಾವುದೇ ಬಿಬಿಎಂಪಿ ಅಧಿಕಾರಿಗಳ ಮೇಲೆ ಒತ್ತಡ ಹಾಕಿಲ್ಲ. ತಿಮ್ಮಪ್ಪ ಎಂಬುವರು ಅರ್ಜಿಯನ್ನು ಸಮಿತಿಗೆ ಸಲ್ಲಿಸಿದ್ದರು. ಸದನದಲ್ಲಿ ಅದನ್ನು ಮಂಡಿಸಿ ಒಪ್ಪಿಗೆಯನ್ನು ಪಡೆಯಲಾಗಿತ್ತು ಎಂದರು.

ಭವಾನಿ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಗೆ ಸರ್ವೆ ನಂಬರ್ 125, 126ರ ಜಾಗದಲ್ಲಿ ಎರಡು ಪಾರ್ಕ್ ಅಭಿವೃದ್ಧಿಪಡಿಸಲು ಬಿಡಿಎಯಿಂದ ಬಿಬಿಎಂಪಿಗೆ ಹಸ್ತಾಂತರ ಆಗಿರುತ್ತದೆ. ಪ್ರಸ್ತುತ ಬಿಬಿಎಂಪಿಯವರು ಮೂರು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುತ್ತಿದ್ದಾರೆ. ಯಾವುದೇ ಸೊಸೈಟಿ ಆದರೂ ನಿಯಮ ಉಲ್ಲಂಘನೆ ಮಾಡುವಂತಿಲ್ಲ ಎಂದು ಹೇಳಿದರು.

ತಮ್ಮ ವಿರುದ್ಧದ ಆರೋಪ ಉಪಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಹುನ್ನಾರವೇ..? ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೃಷ್ಣಾರೆಡ್ಡಿ, ಏನೋ ಷಡ್ಯಂತ್ರ ನಡೆಯುತ್ತಿದೆ. ಅಂತಹ ಸಂದರ್ಭ ಬಂದರೆ ನಾನು ರಾಜೀನಾಮೆ ನೀಡಲು ಸಿದ್ಧ. ಆದರೆ ಎರಡು ದಿನದಲ್ಲಿ ಸೂಕ್ತ ದಾಖಲೆ ಸಲ್ಲಿಸದಿದ್ದರೆ ರಮೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ. ಅವರ ವಿರುದ್ಧ ಹಕ್ಕುಚ್ಯುತಿ ಅರ್ಜಿಯನ್ನು ಸಭಾಧ್ಯಕ್ಷರಿಗೆ ನೀಡಲಿದ್ದೇನೆ ಎಂದು ಹೇಳಿದರು.

Intro:ಬೆಂಗಳೂರು : ಭೂಗಳ್ಳರಿಗೆ ನಾನು ಸಹಕಾರ ಮಾಡುತ್ತಿದ್ದೇನೆಂದು ಬಿಜೆಪಿ ವಕ್ತಾರ ಎನ್. ಆರ್. ರಮೇಶ್ ಮಾಡಿರುವ ಆರೋಪ ರಾಜಕೀಯ ಪ್ರೇರಿತವಾದುದ್ದು. ಅವರೊಬ್ಬ ಹುಚ್ಚ, ಅಜ್ಞಾನಿ ಎಂದು ವಿಧಾನಸಭೆ ಉಪಾಧ್ಯಕ್ಷ ಎಂ. ಕೃಷ್ಣಾರೆಡ್ಡಿ ಕಿಡಿಕಾರಿದ್ದಾರೆ.Body:ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ದಾಖಲೆ ಇಲ್ಲದೇ ಆರೋಪ ಮಾಡಿರುವ ಎನ್.ಆರ್.ರಮೇಶ್ ವಿರುದ್ಧ ಕ್ರಿಮಿನಲ್ ಕೇಸು ಹಾಕುವುದರ ಜೊತೆಗೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದರು.
ಸರ್ಕಾರಿ ಸ್ವತ್ತನ್ನು ಕಬಳಿಸಲು ಯತ್ನಿಸುತ್ತಿರುವ ಸರ್ಕಾರಿ ನೆಲಗಖ್ಳರಿಗೆ ತಾವು ಸಹಕಾರ ನೀಡಿದ್ದೇನೆ ಎಂದು ಎನ್.ಆರ್.ರಮೇಶ್ ನನ್ನ ವಿರುದ್ಧ ಮಾಡಿರುವ ಆರೋಪಗಳು ಸತ್ಯಕ್ಕೆ ದೂರವಾದುದು. ಕಪೋಲ ಕಲ್ಪಿತವಾದುದು ಹಾಗೂ ದುರುದ್ದೇಶದಿಂದ ಕೂಡಿದೆ ಎಂದು ಹೇಳಿದರು.
ಸಾಂವಿಧಾನಿಕ ಹುದ್ದೆಯಲ್ಲಿರುವವರ ಮೇಲೆ ಆರೋಪ ಮಾಡುವಾಗ ಜವಾಬ್ದಾರಿ ಇರಬೇಕು. ರಾಜಕೀಯ ಪ್ರೇರಿತವಾಗಿ ಮಾತನಾಡಬಾರದು ಎಂದರು.
ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ರಕ್ಷಿಸುವಲ್ಲಿ ವಿಧಾನಸಭೆಯ ಅರ್ಜಿಗಳ ಸಮಿತಿ ತನ್ನ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದೆ ಎಂದು ಕೃಷ್ಣಾರೆಡ್ಡಿ ಹೇಳಿದರು.
ಈ ಅರ್ಜಿ ವಿಷಯದ ಕುರಿತು ನಾನು ಯಾವುದೇ ಬಿಬಿಎಂಪಿ ಅಧಿಕಾರಿಗಳ ಮೇಲೆ ಒತ್ತಡ ಹಾಕಿಲ್ಲ. ತಿಮ್ಮಪ್ಪ ಎಂಬುವರು ಅರ್ಜಿಯನ್ನು ಸಮಿತಿಗೆ ಸಲ್ಲಿಸಿದ್ರು. ಸದನದಲ್ಲಿ ಅದನ್ನು ಮಂಡಿಸಿ ಒಪ್ಪಿಗೆಯನ್ನು ಪಡೆಯಲಾಗಿತ್ತು. ಭವಾನಿ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಗೆ ಸರ್ವೆ ನಂಬರ್ 125, 126 ರ ಜಾಗದಲ್ಲಿ ಎರಡು ಪಾರ್ಕ್ ಅಭಿವೃದ್ಧಿಪಡಿಸಲು ಬಿಡಿಎಯಿಂದ ಬಿಬಿಎಂಪಿಗೆ ಹಸ್ತಾಂತರ ಆಗಿರುತ್ತದೆ. ಪ್ರಸ್ತುತ ಬಿಬಿಎಂಪಿಯವರು ಮೂರು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿಪಡಿಸಲಾಗುತ್ತಿದೆ. ಯಾವುದೇ ಸೊಸೈಟಿ ಆದರೂ ನಿಯಮ ಉಲ್ಲಂಘನೆ ಮಾಡುವಂತಿಲ್ಲ ಎಂದು ಹೇಳಿದರು.
ಷಡ್ಯಂತ್ರ : ನನ್ನ ವಿರುದ್ಧ ಷಡ್ಯಂತ್ರ ಮಾಡ್ತಿದ್ದಾರೆ. ಯಾವುದೇ ದಾಖಲೆ ಇಲ್ಲದೇ ಆರೋಪ ಮಾಡುತ್ತಿರುವ ಎನ್. ಆರ್. ರಮೇಶ್ ಒಬ್ಬ ಹುಚ್ಚ, ಮೂರ್ಖ, ಅಜ್ಞಾನಿ, ಅಯೋಗ್ಯ ಎಂದು ಕಿಡಿಕಾರಿದರು.
ಉಪಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವ ಹುನ್ನಾರವೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೃಷ್ಣಾರೆಡ್ಡಿ ಅವರು, ಏನೋ ಷಡ್ಯಂತ್ರ ನಡೆಯುತ್ತಿದೆ. ಅಂತಹ ಸಂದರ್ಭ ಬಂದರೆ ನಾನು ರಾಜೀನಾಮೆ ನೀಡಲು ಸಿದ್ದ ಎಂದರು.
ಎರಡು ದಿನದಲ್ಲಿ ಸೂಕ್ತ ದಾಖಲೆ ಸಲ್ಲಿಸದಿದ್ದರೆ ರಮೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ. ಅವರ ವಿರುದ್ಧ ಹಕ್ಕುಚ್ಯುತಿ ಅರ್ಜಿಯನ್ನು ಸಭಾಧ್ಯಕ್ಷರಿಗೆ ನೀಡಲಿದ್ದೇನೆ ಎಂದು ಹೇಳಿದರು.
Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.