ETV Bharat / city

ಲಂಚ ಪ್ರಕರಣ: ಐಎಎಸ್‌ ಅಧಿಕಾರಿ ಮಂಜುನಾಥ್ ಜಾಮೀನು ಅರ್ಜಿ ತಿರಸ್ಕಾರ

ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಜಾಮೀನು ಅರ್ಜಿ ತಿರಸ್ಕಾರ ಮಾಡಿದೆ.

ಹೈಕೋರ್ಟ್
High court
author img

By

Published : Aug 4, 2022, 6:40 AM IST

ಬೆಂಗಳೂರು: ಭೂ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಲಂಚ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿರುವ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಜೆ ಮಂಜುನಾಥ್‌ ಅವರಿಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್‌ ನಿರಾಕರಿಸಿದೆ.

ನ್ಯಾಯಮೂರ್ತಿ ನಟರಾಜನ್ ನೇತೃತ್ವದ ಹೈಕೋರ್ಟ್ ಏಕಸದಸ್ಯ ಪೀಠವು ಬುಧವಾರ ಆರೋಪಿತ ಅಧಿಕಾರಿ ಮಂಜುನಾಥ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ, ಜಾಮೀನು ತಿರಸ್ಕರಿಸಿ ಆದೇಶ ಹೊರಡಿಸಿದೆ. ಅರ್ಜಿದಾರರಾದ ಮಂಜುನಾಥ್ ಅವರಿಗೆ ಜಾಮೀನು ನೀಡುವುದಕ್ಕೆ ಎಸಿಬಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಭ್ರಷ್ಟಾಚಾರ ನಿಗ್ರಹ ದಳ ಪರವಾಗಿ ವಾದಿಸಿದ ಎಸ್ ಪಿ ಪಿ ಮನಮೋಹನ್ ಅವರು ಲಂಚ ಪ್ರಕರಣದಲ್ಲಿ ಮೊದಲನೇ ಆರೋಪಿ ಮಹೇಶ್‌ಗೆ ಡಿಫಾಲ್ಟ್‌ ಜಾಮೀನು ಸಿಕ್ಕಿದೆ.

ಮಂಜುನಾಥ್‌ ಅವರಿಗೆ ಜಾಮೀನು ನೀಡದಂತೆ ಆಕ್ಷೇಪಣೆ ಸಲ್ಲಿಸಲಾಗಿದೆ.‌ ಆರೋಪಿತ ಅಧಿಕಾರಿ ಅವರು ಇತರ ಆರೋಪಿಗಳ ಜೊತೆ ಮೇ 18ರಂದು ಸಮಾಲೋಚನೆ ನಡೆಸಿರುವ ಆಡಿಯೋ ಕ್ಲಿಪ್‌ ಇದೆ. ತನಿಖೆ ಪ್ರಗತಿಯಲ್ಲಿದೆ, ಈ ಹಂತದಲ್ಲಿ ಜಾಮೀನು ನೀಡಿದರೆ ತನಿಖೆಗೆ ತೊಂದರೆಯಾಗಲಿದೆ ಎಂದು ವಾದಿಸಿದ್ದರು.

ಅರ್ಜಿದಾರ ಮಂಜುನಾಥ್ ಪರ ವಾದಿಸಿದ ಹಿರಿಯ ನ್ಯಾಯವಾದಿ ಹೆಚ್ ಎಸ್ ಚಂದ್ರಮೌಳಿ, ಕಳೆದ ಜುಲೈ 4ರಂದು ಜೆ ಮಂಜುನಾಥ್‌ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ. ಪರಪ್ಪನ ಅಗ್ರಹಾರದಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್‌ ಅವರು ಯಾವುದೇ ತರಹದ ಲಂಚಕ್ಕೆ ಬೇಡಿಕೆ ಇಟ್ಟಿಲ್ಲ ಮತ್ತು ಸ್ವೀಕರಿಸಿಲ್ಲ. ಜಿಲ್ಲಾಧಿಕಾರಿಯು ಜಿಲ್ಲಾ ದಂಡಾಧಿಕಾರಿಯೂ ಸಹ ಆಗಿದ್ದು, ಭೂವಿವಾದಕ್ಕೆ ಸಂಬಂಧಿಸಿದ ಸಾವಿರಾರು ಪ್ರಕರಣಗಳು ಅವರ ಮುಂದಿರುತ್ತವೆ. ಇವುಗಳ ಕುರಿತು ಕ್ರಮವಾಗಿ ಆದೇಶ ಮಾಡಲಾಗುತ್ತದೆ ಎಂದು ವಾದಿಸಿದ್ದರು. ಜೊತೆಗೆ ಉಪತಹಶೀಲ್ದಾರ್‌ ಮಹೇಶ್‌ ಮತ್ತು ಎರಡನೇ ಆರೋಪಿ ಚಂದ್ರು ಹಾಗೂ ಅರ್ಜಿದಾರರಾದ ಮಂಜುನಾಥ್‌ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಹೈಕೋರ್ಟ್ ಗಮನಕ್ಕೆ ತಂದಿದ್ದರು.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ ಲಕ್ಷ್ಮಿನಾರಾಯಣ ಭಟ್‌ ಅವರು ಕಳೆದ ಜುಲೈ 11ರಂದು ಮಂಜುನಾಥ್‌ ಅವರ ಜಾಮೀನು ಅರ್ಜಿ ವಜಾಗೊಳಿಸಿದ್ದರು.

ಇದನ್ನೂ ಓದಿ: ಐಎಎಸ್ ಅಧಿಕಾರಿ ಮಂಜುನಾಥ್ ಜಾಮೀನು ಅರ್ಜಿ: ಆಕ್ಷೇಪಣೆ ಸಲ್ಲಿಸಲು ಎಸಿಬಿಗೆ ಹೈಕೋರ್ಟ್ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.