ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜು ಅವರಿಗೆ ಭೂಮಾಪನ ಹಾಗೂ ಭೂ ದಾಖಲೆಗಳ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಇನ್ನು ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತ ಕೆ.ಎ.ದಯಾನಂದ ಅವರಿಗೆ ಬಿಬಿಎಂಪಿ ವಿಶೇಷ ಆಯುಕ್ತ (ಆಡಳಿತ) ಹುದ್ದೆಯ ಸಮಪ್ರಭಾರ ನೀಡಿ ಆದೇಶಿಸಿದೆ.