ETV Bharat / city

ಬಿಬಿಎಂಪಿಯಲ್ಲಿ ಕೈ ಜತೆ ಗೆಳೆತನ ಮುಂದುವರಿಕೆ ಬಗ್ಗೆ ಜೆಡಿಎಸ್‌ ಒಲುವು.. ಕಾಂಗ್ರೆಸ್‌ ಒಪ್ಪಿದ್ರೇ ಮೈತ್ರಿ ಅಭಾದಿತ?

ಈಗಾಗಲೇ ಬಿಬಿಎಂಪಿ ಮೇಯರ್ ಚುನಾವಣೆ ಸಂಬಂಧ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಸಂಬಂಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಬಿಬಿಎಂಪಿ ಜೆಡಿಎಸ್ ಕಾರ್ಪೊರೇಟರ್​ಗಳು ಚರ್ಚೆ ನಡೆಸಿದ್ದಾರೆ.

ಜೆಡಿಎಸ್
author img

By

Published : Sep 28, 2019, 6:59 AM IST

ಬೆಂಗಳೂರು :ಈಗಾಗಲೇ ಬಿಬಿಎಂಪಿ ಮೇಯರ್ ಚುನಾವಣೆ ಸಂಬಂಧ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಕುರಿತಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಬಿಬಿಎಂಪಿ ಜೆಡಿಎಸ್ ಕಾರ್ಪೊರೇಟರ್​ಗಳು ಚರ್ಚೆ ನಡೆಸಿದ್ದಾರೆ.

ಜೆಪಿ ನಗರದಲ್ಲಿರುವ ಮಾಜಿ ಸಿಎಂ ಹೆಚ್‌ಡಿಕೆ ಅವರ ನಿವಾಸದಲ್ಲಿ ನಿನ್ನೆ ಮಧ್ಯಾಹ್ನ ಸುದೀರ್ಘ ಚರ್ಚೆ ನಡೆದಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನು ಮುಂದುವರಿಸಬೇಕೇ, ಬೇಡವೇ? ಹಾಗೂ ಮೇಯರ್ ಚುನಾವಣೆಯಲ್ಲಿ ತಮ್ಮ ನಿಲುವಿನ ಬಗ್ಗೆ ಕುಮಾರಸ್ವಾಮಿ ಅವರ ಬಳಿ ಬಿಬಿಎಂಪಿ ಜೆಡಿಎಸ್ ಕಾರ್ಪೊರೇಟರ್​ಗಳು ಚರ್ಚೆ ನಡೆಸಿದ್ದಾರೆ. ಈ ಸಭೆಯಲ್ಲಿ ದಾಸರಹಳ್ಳಿ ಕ್ಷೇತ್ರದ ಜೆಡಿಎಸ್ ಶಾಸಕ ಮಂಜುನಾಥ್, ಬೆಂಗಳೂರು ನಗರ ಅಧ್ಯಕ್ಷ ಆರ್. ಪ್ರಕಾಶ್ , ಉಪ ಮೇಯರ್ ಭದ್ರೇಗೌಡ ಸೇರಿದಂತೆ ಜೆಡಿಎಸ್​ನ ಎಲ್ಲಾ ಬಿಬಿಎಂಪಿ ಸದಸ್ಯರು ಹಾಜರಿದ್ದರು.

ಕಾಂಗ್ರೆಸ್ ಒಪ್ಪಿದರೆ ದೋಸ್ತಿ ಮುಂದುವರಿಕೆ? :

ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ದೊಸ್ತಿಗೆ ಒಪ್ಪಿದರೆ ಮಾತ್ರ ಚುನಾವಣೆ ಎದುರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎನ್ನಲಾಗಿದೆ. ಮೈತ್ರಿ ಮುಂದುವರೆಸುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ಜೊತೆ ಚರ್ಚೆ ನಡೆಸಲು ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರಿಗೆ ಕುಮಾರಸ್ವಾಮಿ ಅವರು ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Intro:ಬೆಂಗಳೂರು : ರಾಜ್ಯದ ಉಪ ಚುನಾವಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದ ಬೆನ್ನಲ್ಲೇ ಬಿಬಿಎಂಪಿ ಮೇಯರ್ ಚುನಾವಣೆ ಸಂಬಂಧ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಬಿಬಿಎಂಪಿ ಮೇಯರ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಕಾದು ನೋಡುವ ಬಗ್ಗೆ ನಿರ್ಣಯ ಕೈಗೊಂಡಿದೆ.
Body:ಜೆಪಿ ನಗರದಲ್ಲಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ಇಂದು ಮಧ್ಯಾಹ್ನ ಸುದೀರ್ಘ ಚರ್ಚೆ ನಡೆದಿದೆ. ಬಿಬಿಎಂಪಿಯಲ್ಲಿರುವ ಕಾಂಗ್ರೆಸ್ –ಜೆಡಿಎಸ್ ಮೈತ್ರಿಯನ್ನು ಮುಂದುವರಿಸಬೇಕೇ, ಬೇಡವೇ? ಹಾಗೂ ಮೇಯರ್ ಚುನಾವಣೆಯಲ್ಲಿ ತಮ್ಮ ನಿಲುವಿನ ಬಗ್ಗೆ ಕುಮಾರಸ್ವಾಮಿ ಅವರ ಬಳಿ ಬಿಬಿಎಂಪಿ ಜೆಡಿಎಸ್ ಕಾರ್ಪೊರೇಟರ್ ಗಳು ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ ದಾಸರಹಳ್ಳಿ ಕ್ಷೇತ್ರದ ಜೆಡಿಎಸ್ ಶಾಸಕ ಮಂಜುನಾಥ್, ಬೆಂಗಳೂರು ನಗರ ಅಧ್ಯಕ್ಷ ಆರ್. ಪ್ರಕಾಶ್ , ಉಪಮೇಯರ್ ಭದ್ರೇಗೌಡ ಸೇರಿದಂತೆ ಜೆಡಿಎಸ್ ನ ಎಲ್ಲಾ ಬಿಬಿಎಂಪಿ ಸದಸ್ಯರು ಹಾಜರಿದ್ದರು.
ಒಪ್ಪಿದರೆ ದೋಸ್ತಿ ಮುಂದುವರಿಕೆ : ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರು ದೊಸ್ತಿಗೆ ಒಪ್ಪಿದರೆ ಮಾತ್ರ ಚುನಾವಣೆ ಎದರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದುಬಂದಿದೆ.
ಮೈತ್ರಿ ಮುಂದುವರಿಸುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ಜೊತೆ ಚರ್ಚೆ ನಡೆಸಲು ರಾಜ್ಯಸಭಾ ಸದಸ್ಯ ಕುಪೆಂದ್ರ ರೆಡ್ಡಿ ಅವರಿಗೆ ಕುಮಾರಸ್ವಾಮಿ ಅವರು ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.