ETV Bharat / city

ಲೋಕಸಭೆ, ವಿಧಾನಸಭೆ ಚುನಾವಣೆಗಳು ಏಕಕಾಲಕ್ಕೆ ನಡೆದಲ್ಲಿ ಅಭಿವೃದ್ಧಿಯ ವೇಗ ಹೆಚ್ಚಲಿದೆ: ಸಿಎಂ ಯಡಿಯೂರಪ್ಪ - Lok Sabha and assembly elections

ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಏಕಕಾಲಕ್ಕೆ ನಡೆದಲ್ಲಿ ಅಭಿವೃದ್ಧಿಯ ವೇಗ ಹೆಚ್ಚಲಿದೆ. ಈ ಬಗ್ಗೆ ವ್ಯಾಪಕ ಚರ್ಚೆ ನಡೆದು ಭಾರತದಲ್ಲಿ ಒಂದೇ ಬಾರಿಗೆ ಚುನಾವಣೆ ನಡೆಯುವ ಪದ್ಧತಿ ಅನುಷ್ಠಾನಕ್ಕೆ ಬರಲಿ. ಅನಗತ್ಯ ಖರ್ಚು-ವೆಚ್ಚಗಳು ಮತ್ತು ಮಾನವ ದಿನಗಳ ಉಳಿತಾಯ ಇದರಿಂದ ಸಾಧ್ಯವಾಗಲಿದೆ ಎಂದು ಸಿಎಂ ಒಂದು ದೇಶ ಒಂದು ಚುನಾವಣೆ ಪ್ರಸ್ತಾಪವನ್ನು ಸಮರ್ಥಿಸಿಕೊಂಡರು.

ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ
author img

By

Published : Mar 4, 2021, 4:07 PM IST

ಬೆಂಗಳೂರು: ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳು ನಡೆದಲ್ಲಿ ಆಡಳಿತ ಯಂತ್ರದ ಸುಗಮ ಕಾರ್ಯನಿರ್ವಹಣೆ ಸಾಧ್ಯವಾಗಲಿದೆ. ಈ ಚುನಾವಣೆಗಳಿಂದ ಕೆಲವು ವ್ಯತ್ಯಾಸಗಳು ಆಗಬಹುದು. ಆದರೆ, ಒಟ್ಟಾರೆ ದೇಶದ ಪ್ರಗತಿಯ ದೃಷ್ಟಿಯಿಂದ ಇದು ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ವಿಧಾನಸಭೆಯಲ್ಲಿ ಇಂದು ' ಒಂದು ದೇಶ, ಒಂದು ಚುನಾವಣೆ' ಕುರಿತ ಚರ್ಚೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪ್ರತಿಭಟನೆಯ ನಡುವೆ ಸ್ಪೀಕರ್ ಭಾಷಣ ಮುಗಿದ ತಕ್ಷಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.

ಒಂದು ದೇಶ ಒಂದು ಚುನಾವಣೆ ಎಂಬುದು ಪ್ರಗತಿಪರ ಆಲೋಚನೆ. ದೇಶದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಏಕಕಾಲಕ್ಕೆ ನಡೆದಲ್ಲಿ ಅಭಿವೃದ್ಧಿಯ ವೇಗ ಹೆಚ್ಚಲಿದೆ. ಈ ಬಗ್ಗೆ ವ್ಯಾಪಕ ಚರ್ಚೆ ನಡೆದು ಭಾರತದಲ್ಲಿ ಒಂದೇ ಬಾರಿಗೆ ಚುನಾವಣೆ ನಡೆಯುವ ಪದ್ಧತಿ ಅನುಷ್ಠಾನಕ್ಕೆ ಬರಲಿ. ಅನಗತ್ಯ ಖರ್ಚು, ವೆಚ್ಚಗಳು ಮತ್ತು ಮಾನವ ದಿನಗಳ ಉಳಿತಾಯ ಇದರಿಂದ ಸಾಧ್ಯವಾಗಲಿದೆ ಎಂದು ಸಿಎಂ ಹೇಳಿದರು.

ಎಲ್ಲಾ ರಾಜಕೀಯ ಪಕ್ಷಗಳು, ರಾಜ್ಯ ಸರ್ಕಾರಗಳು ಸಂಸತ್ತಿನ ಉಭಯ ಸದನಗಳಲ್ಲಿ ಹಾಗೂ ರಾಜ್ಯದ ವಿಧಾನಮಂಡಲಗಳಲ್ಲಿ ಚಿಂತನ-ಮಂಥನ ನಡೆಸಿದರೆ ಮಾತ್ರ ಒಂದು ರಾಷ್ಟ್ರ ಒಂದು ಚುನಾವಣೆ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಈ ನಿಯಮ ಜಾರಿಗೆ ಬಂದರೆ ಕೆಲವು ರಾಜಕೀಯ ಹೊಂದಾಣಿಕೆ ಅನಿವಾರ್ಯವಾಗುವುದು. ಲೋಕಸಭೆ- ವಿಧಾನಸಭೆಗಳ ಅವಧಿಯಲ್ಲಿ ಏರಿಳಿತಗಳಾಗಬಹುದು. ಇವೆಲ್ಲ ಪ್ರಾರಂಭಿಕ ಅಡಚಣೆಗಳಾಗಿದ್ದು, ಇವೆಲ್ಲವನ್ನೂ ಮೀರಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದರು.

ಒಂದು ರಾಷ್ಟ್ರ ಒಂದು ಚುನಾವಣೆ ಜಾರಿಗೆ ತರುವುದು ದೊಡ್ಡ ಸವಾಲು ಎನ್ನುವುದರಲ್ಲಿ ಅನುಮಾನವೇ ಇಲ್ಲ. ವಿಸ್ತೃತ ಚರ್ಚೆ ಮೂಲಕ ಸಾಧಕ-ಬಾಧಕಗಳನ್ನು ತಿಳಿದರೆ ಸ್ಪಷ್ಟತೆ ಮೂಡಲಿದೆ. ಏಕಕಾಲದಲ್ಲಿ ಚುನಾವಣೆಗಳು ನಡೆದಲ್ಲಿ ಆಡಳಿತ ಯಂತ್ರದ ಸುಗಮ-ದಕ್ಷ ಕಾರ್ಯನಿರ್ವಹಣೆಗೆ ಅನುಕೂಲವಾಗಲಿದೆ.

ಕಾಲಕಾಲಕ್ಕೆ ಖಾಲಿಯಾಗುವ ಶಾಸಕರು, ಮತ್ತಿತರ ಸ್ಥಾನಗಳಿಸಬೇಕು. ಉಪಚುನಾವಣೆ ಇಲ್ಲದೆ ತುಂಬುವ ವ್ಯವಸ್ಥೆಗೆ ನಾಂದಿ ಹಾಡಬೇಕಾಗಿದೆ. ಸ್ಥಳೀಯ ಸಮಸ್ಯೆಗಳು ಮತ್ತು ಸ್ಥಳೀಯ ಮತದಾರರ ಹಿತಕ್ಕೆ ಯಾವುದೇ ಧಕ್ಕೆಯಾಗದಂತೆ ಚುನಾವಣೆ ನಡೆಸುವುದು ಮುಖ್ಯ. ಆಡಳಿತ ಸುಧಾರಣೆಯ ದಿಕ್ಕಿನಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಮಹತ್ವದ ಹೆಜ್ಜೆಯಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ.. ಮೋದಿ ಸರ್ಕಾರ ಸಾರ್ವಜನಿಕ ಆಸ್ತಿಗಳನ್ನು ಕಡಿಮೆ ಮೌಲ್ಯಕ್ಕೆ ಆಪ್ತರಿಗೆ ಮಾರುತ್ತಿದೆ: ಸೋನಿಯಾ

ಇತ್ತೀಚಿನ ದಿನಗಳಲ್ಲಿ ಚುನಾವಣೆ ಯಶಸ್ಸು ಹಣಬಲದ ಮೇಲೆ ನಿಂತಿರುವುದು ದುರದೃಷ್ಟಕರ. ವ್ಯಕ್ತಿತ್ವ, ಚರಿತ್ರೆ ಹಾಗೂ ಅಭ್ಯರ್ಥಿಗಳ ವರ್ಚಸ್ಸು ಮತ್ತು ವಿಶ್ವಾಸಾರ್ಹತೆಯನ್ನು ಅವಲಂಬಿಸಬೇಕು. ಪಾರದರ್ಶಕ ಚುನಾವಣೆಗಳು ನಡೆಯುವುದರಿಂದ ಪಕ್ಷ, ಅಭ್ಯರ್ಥಿ ಹಾಗೂ ಮತದಾರರ ಮೇಲೆ ಸಕಾರಾತ್ಮಕವಾಗಿ ಪರಿಣಾಮ ಬೀರಿ ದೇಶದಲ್ಲಿ ಮಹತ್ವದ ಬದಲಾವಣೆ ತರಲಿದೆ ಎಂದು ಹೇಳಿದರು.

ಆಳವಾದ ಅಧ್ಯಯನ ಮತ್ತು ಸಮಾಲೋಚನೆ, ಸವಿಸ್ತಾರವಾದ ಚರ್ಚೆ ನಡೆಯಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರಿರುವ ನಮಗೆ ಚುನಾವಣೆಯಲ್ಲಿ ಏಕರೂಪ ವ್ಯವಸ್ಥೆ ಜಾರಿಗೆ ತರುವುದು ಕಷ್ಟವೇನಲ್ಲ. ಈ ನಿಟ್ಟಿನಲ್ಲಿ ಕರ್ನಾಟಕ ವಿಧಾನಮಂಡಲವು ಸಂಕ್ಷಿಪ್ತ ನಿರ್ಣಯ ಕೈಗೊಂಡು ಶಿಫಾರಸು ಮಾಡಲಿ ಎಂದು ಸಿಎಂ ಆಶಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.