ETV Bharat / city

ಮರ್ಯಾದೆ ಇದ್ದರೆ ವಿಶ್ವಾಸಮತ ಸಾಬೀತು ಮಾಡಿ: ಎಸ್.ಆರ್.ವಿಶ್ವನಾಥ್ ವಾಗ್ದಾಳಿ

author img

By

Published : Jul 23, 2019, 4:02 PM IST

ಮೈತ್ರಿ ಸರ್ಕಾರದ ಶಾಸಕರು ಸ್ಪೀಕರ್ ಆದೇಶಕ್ಕೆ ಬದ್ದರಾಗಿ ಸಂಜೆ 6 ಗಂಟೆಯೊಳಗೆ ವಿಶ್ವಾಸ ಮತಯಾಚನೆ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ. ಅವರು ನುಡಿದಂತೆ ನಡೆದರೆ ಕಿಂಚಿತ್ತಾದರೂ ಗೌರವ ಇರುತ್ತದೆ ಎಂದು ಸಿಎಂಗೆ ಶಾಸಕ ಎಸ್.ಆರ್.ವಿಶ್ವನಾಥ್ ಸಲಹೆ ನೀಡಿದ್ದಾರೆ.

ಶಾಸಕ ಎಸ್.ಆರ್.ವಿಶ್ವನಾಥ್

ಬೆಂಗಳೂರು: ಮೈತ್ರಿ ಸರ್ಕಾರದ ನಾಯಕರಿಗೆ ಮರ್ಯಾದೆ ಇದ್ದರೆ, ಇಂದು ಸಂಜೆ 6 ಗಂಟೆಯೊಳಗೆ ವಿಶ್ವಾಸಮತ ಸಾಬೀತುಪಡಿಸಬೇಕು. ಇಲ್ಲವಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಸಿ.ಎಂ.ಕುಮಾರಸ್ವಾಮಿ ವಿರುದ್ಧ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

ಶಾಸಕ ಎಸ್.ಆರ್.ವಿಶ್ವನಾಥ್ ಜನುಮದಿನದ ಅಂಗವಾಗಿ ಯಲಹಂಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಲಯನ್ಸ್ ಕ್ಲಬ್ ಹಾಗೂ ನಾರಾಯಣ ಹೃದಯಾಲಯ ವತಿಯಿಂದ ಆಯೋಜಿಸಿದ್ದ ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೈತ್ರಿ ಸರ್ಕಾರದ ಶಾಸಕರು ಸ್ಪೀಕರ್ ಆದೇಶಕ್ಕೆ ಬದ್ದರಾಗಿ 6 ಗಂಟೆಯೊಳಗೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ. ಅವರು ನುಡಿದಂತೆ ನಡೆದರೆ ಕಿಂಚಿತ್ತಾದರೂ ಗೌರವ ಇರುತ್ತದೆ ಎಂದು ಸಲಹೆ ನೀಡಿದರು.

ವಿಶ್ವಾಸಮತ ಸಾಬೀತು ಪಡಿಸುವಂತೆ ಶಾಸಕರ ಆಗ್ರಹ

ಸುರಪುರ ಶಾಸಕ ರಾಜುಗೌಡ ಮಾತನಾಡಿ, ಮೈತ್ರಿ ಸರ್ಕಾರದ ಶಾಸಕರು ಬಹುಮತ ಸಾಬೀತು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಧರಣಿ, ವಿಶ್ವಾಸಮತ ಯಾಚನೆ ಮಾಡಲು ಸಮಯ ಮುಂದೂಡಿಕೆ ಮಾಡುತ್ತಿದ್ದಾರೆ. ಇಂದು ವಿಶ್ವಾಸಮತ ಯಾಚನೆ ಮಾಡಬೇಕು. ಇಲ್ಲವಾದರೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಗರಂ ಆದ್ರು.

Intro:ಮರ್ಯಾದೆ ಇದ್ದರೆ ವಿಶ್ವಾಸಮತ ಸಾಬೀತು ಪಡಿಸಿ: ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್

ಬೆಂಗಳೂರು: ಮೈತ್ರಿ ಸರ್ಕಾರದ ನಾಯಕರಿಗೆ ಮರ್ಯಾದೆ ಇದ್ದರೆ ಇಂದು 6ಗಂಟೆಯೊಳಗಾಗಿ ವಿಶ್ವಾಸ ಮತ ಸಾಬೀತುಪಡಿಸಿ ಇಲ್ಲವಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಸಿ.ಎಂ.ಕುಮಾರಸ್ವಾಮಿ ವಿರುದ್ಧ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

ಶಾಸಕ ಎಸ್.ಆರ್.ವಿಶ್ವನಾಥ್ ಜನುಮ ದಿನದ ಅಂಗವಾಗಿ ಯಲಹಂಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಲಯನ್ಸ್ ಕ್ಲಬ್ ಹಾಗೂ ನಾರಾಯಣ ಹೃದಯಾಲಯವತಿಯಿಂದ ಆಯೋಜಿಸಿದ್ದ ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,ಮೈತ್ರಿ ಸರ್ಕಾರದ ಶಾಸಕರು ಸ್ಪೀಕರ್ ಆದೇಶಕ್ಕೆ ಬದ್ದರಾಗಿ 6ಗಂಟೆಯೊಳಗೆ ವಿಸ್ವಾಸ ಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ. ಅವರು ನುಡಿದಂತೆ ನಡೆದರೆ ಕಿಂಚಿತ್ತಾದರೂ ಗೌರವ ಇರುತ್ತದೆ ಎಂದು ಸಲಹೆ ನೀಡಿದರು.
ಕಾಂಗ್ರೆಸ್ ಜೆಡಿಎಸ್ ಮೈತ್ರಿ ನಾಯಕರಿಗೆ ಅಧಿಕಾರದ ದಾಹ ಹೆಚ್ಚಾಗಿದೆ ಎಂದುಕೂಲಿಕಾರ್ಮಿಕರಾದಿಯಾಗಿ,ಮಾತನಾಡಿಕೊಳ್ಳುತ್ತಿದ್ದು, ಈ ಕೂಡಲೇ ಅಧಿಕಾರದಿಂದ ಕೆಳಗಿಳಿಯಬೇಕೆಂದು ಆಗ್ರಹಿಸುತ್ತಿದ್ದಾರೆ. ಇನ್ನು, ಬೀದಿ, ಬೀದಿಯಲ್ಲಿ ಉಗಿಯುತ್ತಿದ್ದಾರೆ. ಬಹುಮತ ಸಾಬೀತು ಪಡಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಹೊರ ನಡೆಯಬೇಕು ಎಂದರು.

ಸುರಪುರ ಶಾಸಕ ರಾಜುಗೌಡ ಮಾತನಾಡಿ, ಮೈತ್ರಿ ಸರ್ಕಾರದ ಶಾಸಕರು ಬಹುಮತ ಸಾಬೀತು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಕಾಲಾಹರಣ ಮಾಡುತ್ತಿದ್ದಾರೆ. ಧರಣಿ, ವಿಶ್ವಾಸ ಮತ ಯಾಚನೆ ಮಾಡಲು ಸಮಯ ಮುಂಡೂಡಿಕೆ ಮಾಡುತ್ತಾ ಸದನದ ಇತಿಹಾಸದಲ್ಲೆ ಹೊಸ ಸೃಷ್ಟಿ ಮಾಡುತ್ತಿರುವುದು ನಾಚಿಕೆಗೇಡಿನ ವಿಷಯ .ಅವರ ಇಂದು ವಿಶ್ವಾಸಮತ ಯಾಚನೆ ಮಾಡಬೇಕು. ಇಲ್ಲವಾದರೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

Body:ರಕ್ತದಾನ ಶಿಬಿರದಲ್ಲಿ ನೂರಾರು ನಾಗರಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ತಮ್ಮ ಹೆಸರನ್ನು ನೊಂದಾಯಿಸಿಕೊಂಡು ರಕ್ತದಾನ ಮಾಡಿದರು.ಇದೇ ಸಂದರ್ಭದಲ್ಲ ಸುರಪುರ ಶಾಸಕ ರಾಜುಗೌಡ ರಕ್ತದಾನ ಮಾಡಿದ್ದು ಯುವಕರಿಗೆ ಸ್ಫೂರ್ತಿಯಾಯಿತು.

Conclusion:ಯಲಹಂಕ ಕ್ಷೇತ್ರ ಬಿಜೆಪಿ ಅಧ್ಯಕ್ಷ ದಿಬ್ಬೂರು ಜಯಣ್ಣ, ಪ್ರಧಾನ ಕಾರ್ಯದರ್ಶಿ ಡಾ.ಎನ್.ಶಶಿಕುಮಾರ್, ಪಾಲಿಕೆ ಮಾಜಿ ಸದಸ್ಯ ಮುನಿರಾಜು, ಯಲಹಂಕ ಕ್ಷೇತ್ರ ಕಾರ್ಯಾಲಯ ಕಾರ್ಯದರ್ಶಿ ಮಧುಸೂಧನ್, ಯುವ ಮೋರ್ಚಾ ಮುಖಂಡರಾದ ಎಸ್.ಜಿ.ಪ್ರಶಾಂತ್ ರೆಡ್ಡಿ, ಪವನ್ ಕುಮಾರ್ ಸೇರಿ ಹಲವಾರು ಮುಖಂಡರು ಪಾಲ್ಗೊಂಡಿದ್ದರು.
________
ಬೈಟ್೧: ಎಸ್.ಆರ್.ವಿಶ್ವನಾಥ್, ಯಲಹಂಕ ಶಾಸಕ

ಬೈಟ್೨: ರಾಜುಗೌಡ, ಸುರಪುರ ಶಾಸಕ
____________
ವಿಶುವಲ್ಸ್ mojoದಲ್ಲಿ ಕಳುಹಿಸಲಾಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.