ETV Bharat / city

ಮಂಚನಬೆಲೆ ಡ್ಯಾಂ, ದೇವರಗುಡ್ಡ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆಗೆ ಬ್ರೇಕ್: ಹೈಕೋರ್ಟ್​ಗೆ ಮಾಹಿತಿ

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮ, ರಾಮನಗರ ಜಿಲ್ಲೆಯ ಮಂಚನಬೆಲೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಿಪ್ಪಗೊಂಡನಹಳ್ಳಿ ಜಲಾಶಯದ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲಾಗಿದೆ ಎಂದು ಹೈಕೋರ್ಟ್​ಗೆ ಸರ್ಕಾರ ಮಾಹಿತಿ ನೀಡಿದೆ.

high court
high court
author img

By

Published : Aug 25, 2021, 5:33 AM IST

ಬೆಂಗಳೂರು: ರಾಮನಗರ ಜಿಲ್ಲೆಯ ಮಂಚನಬೆಲೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಿಪ್ಪಗೊಂಡನಹಳ್ಳಿ ಜಲಾಶಯದ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಕಲ್ಲು ಗಣಿಗಾರಿಕೆಯನ್ನು ನಿಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಈ ಕುರಿತು ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾ. ಸತೀಶ್ ಚಂದ್ರ ಶರ್ಮ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಎರಡು ಜಲಾಯಶಗಳ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಕೈಗೊಂಡಿರುವ ಕ್ರಮಗಳ ವರದಿಯನ್ನು ಸರ್ಕಾರ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಪರ ವಕೀಲರು ಪೀಠಕ್ಕೆ ಸಲ್ಲಿಸಿದರು.

ವರದಿ ಪರಿಶೀಲಿಸಿದ ಪೀಠ, ಸರ್ಕಾರ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ಸಲ್ಲಿಸಿರುವುದರಿಂದ ಹೆಚ್ಚಿನ ನಿರ್ದೇಶನಗಳನ್ನು ನೀಡುವ ಅಗತ್ಯವಿಲ್ಲ. ಆದರೆ, ಭವಿಷ್ಯದಲ್ಲಿ ಜಲಾಶಯಗಳ ಸುತ್ತ ಮತ್ತೆ ಅಕ್ರಮ ಗಣಿಗಾರಿಕೆ ಮತ್ತು ಕಲ್ಲು ಗಣಿಗಾರಿಕೆ ನಡೆಸದಂತೆ ಸರ್ಕಾರ ಖಾತರಿಪಡಿಸಬೇಕು ಎಂದು ನಿರ್ದೇಶಿಸಿತು. ಅಲ್ಲದೇ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಪ್ರತಿ ತಿಂಗಳು ಸ್ಥಳಕ್ಕೆ ಭೇಟಿ ನೀಡಿ ಸ್ಥಿತಿಗತಿ ಪರಿಶೀಲಿಸಬೇಕು. ಒಂದೊಮ್ಮೆ ಅಕ್ರಮ ಗಣಿಗಾರಿಕೆ ಬೆಳಕಿಗೆ ಬಂದರೆ ತಪ್ಪಿತಸ್ಥರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕು ಎಂದು ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ ಹಾಗೂ ರಾಮನಗರ ಗಡಿಭಾಗದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿದ್ದು, ತಿಪ್ಪಗೊಂಡನಹಳ್ಳಿ ಹಾಗೂ ಮಂಚನಬೆಲೆ ಜಲಾಶಯಗಳು ಕಲುಷಿತಗೊಂಡಿವೆ. ಕುಡಿಯುವ ನೀರಿನ ಮೂಲಗಳಾಗಿದ್ದ ಜಲಾಶಯಗಳು ಮಲಿನಗೊಂಡಿವೆ. ಅಕ್ರಮ ಕಲ್ಲು ಗಣಿಗಾರಿಕೆ ತಡೆಯುವಲ್ಲಿ ಅಧಿಕಾರಿಗಳು ವಿಫರಾಗಿದ್ದಾರೆ. ಹೀಗಾಗಿ, ಅಕ್ರಮ ಕಲ್ಲುಗಣಿಗಾರಿಕೆ ತಡೆಯುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿದಾರರು ಕೋರಿದ್ದರು.

ದೇವರಗುಡ್ಡದಲ್ಲಿ ಅಕ್ರಮ ಗಣಿಗಾರಿಕೆ ಬಂದ್:

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿ ನಡೆಸಲಾಗುತ್ತಿದ್ದ ಅಕ್ರಮ ಗಣಿಗಾರಿಕೆಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಈ ಕುರಿತು ದೇವರಗುಡ್ಡ ಗ್ರಾಮದ ಸಂತೋಷ್ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದರು. ವಿವಾದಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ತಡೆದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿ, ಆ ಕುರಿತ ವರದಿಯನ್ನು ಪೀಠಕ್ಕೆ ಸಲ್ಲಿಸಿದರು.

ವರದಿ ಪರಿಗಣಿಸಿದ ಪೀಠ, ಭವಿಷ್ಯದಲ್ಲಿ ಆ ಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ, ಅರ್ಜಿಯನ್ನು ಇತ್ಯರ್ಥಪಡಿಸಿ ಆದೇಶಿಸಿತು. ದೇವರಗುಡ್ಡ ಗ್ರಾಮದಲ್ಲಿ ಅವ್ಯಾಹತವಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ, ಜಿಲ್ಲಾಡಳಿತ ಮತ್ತು ಗಣಿ ಹಾಗೂ ಭೂವಿಜ್ಞಾನ ಇಲಾಖೆ ಕ್ರಮ ಕೈಗೊಳ್ಳುತ್ತಿಲ್ಲ. ಆದ್ದರಿಂದ ಈ ಭಾಗದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ತಡೆಯಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.