ETV Bharat / city

PSI ಅಕ್ರಮ ನೇಮಕಾತಿಗೆ ಸಂಬಂಧಿಸಿದ ಮಾಹಿತಿ, ದಾಖಲೆಗಳನ್ನ ಸಿಐಡಿಗೆ ಒದಗಿಸಲು ನಾನೇ ಪ್ರಿಯಾಂಕ್‌ ಖರ್ಗೆ ಬಳಿ ವಿನಂತಿಸಿದ್ದೆ.. ಆರಗ

ಈಗಲಾದರೂ ಖರ್ಗೆಯವರು ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳಿಗೆ, ತಮ್ಮ ಬಳಿಯಿರುವ ದಾಖಲೆ ಹಾಗೂ ಮಾಹಿತಿಯನ್ನು ಹಂಚಿಕೊಳ್ಳಬೇಕು. ಹಾಗೂ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನೂ ಕಾನೂನು ಪ್ರಕ್ರಿಯೆಗಳಿಗೆ ಒಳಪಡಿಸಲು ಸಹಕರಿಸಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ..

Home Minister Araga Jnanendra
ಗೃಹ ಸಚಿವ ಆರಗ ಜ್ಞಾನೇಂದ್ರ
author img

By

Published : Apr 25, 2022, 10:15 AM IST

ಬೆಂಗಳೂರು : ಪಿಎಸ್​ಐ ಹುದ್ದೆಗಳ ಅಕ್ರಮ ನೇಮಕಾತಿ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ನೋಟಿಸ್ ನೀಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಅಕ್ರಮಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದೆ ಎನ್ನಲಾದ ಒಂದು ಆಡಿಯೋ ರೆಕಾರ್ಡ್ ಅನ್ನು ಪ್ರಿಯಾಂಕ್ ಖರ್ಗೆಯವರು ಇತ್ತೀಚೆಗೆ ಬಿಡುಗಡೆ ಮಾಡಿದ್ದಾರೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದರೂ, ಹುದ್ದೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಸಿಐಡಿ ತನಿಖೆಗೆ ನಾನೇ ಸ್ವತಃ ಆಸಕ್ತಿ ತೋರಿಸಿದೆ. ಮುಖ್ಯಮಂತ್ರಿಗಳ ಜೊತೆ ಸಮಾಲೋಚಿಸಿ ತನಿಖೆಗೆ ಆದೇಶ ನೀಡಿದ್ದೆ ಎಂದಿದ್ದಾರೆ.

ಇಂತಹ ಕೃತ್ಯಗಳಿಂದ ಬಡ ಕುಟುಂಬದಿಂದ ಬಂದಂಥ ಪ್ರಾಮಾಣಿಕ ಹಾಗೂ ಪ್ರತಿಭಾವಂತ ಆಕಾಂಕ್ಷಿಗಳು ಮೂಲೆ ಗುಂಪಾದರೆ, ಸಮಾಜಕ್ಕೆ ಆಗುವ ನಷ್ಟ ಅಪಾರ. ಹಾಗಾಗಿ, ಶಾಸಕ ಪ್ರಿಯಾಂಕ್ ಖರ್ಗೆಯವರಿಗೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿರುವ ಸಿಐಡಿ ತನಿಖೆಗೆ ಸಹಾಯವಾಗುವಂತೆ ಸಿಐಡಿ ಪೊಲೀಸರಿಗೆ, ತಮ್ಮ ಬಳಿ ಇರಬಹುದಾದ ಸಾಕ್ಷ್ಯಗಳನ್ನು ಒದಗಿಸಿ, ತಮ್ಮ ಹೊಣೆಗಾರಿಕೆಯನ್ನು ನಿಭಾಯಿಸುವಂತೆ ವಿನಂತಿಸಿದ್ದೆ ಎಂದು ಹೇಳಿದ್ದಾರೆ.

ಈಗಲಾದರೂ ಖರ್ಗೆಯವರು ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳಿಗೆ, ತಮ್ಮ ಬಳಿಯಿರುವ ದಾಖಲೆ ಹಾಗೂ ಮಾಹಿತಿಯನ್ನು ಹಂಚಿಕೊಳ್ಳಬೇಕು. ಹಾಗೂ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರನ್ನೂ ಕಾನೂನು ಪ್ರಕ್ರಿಯೆಗಳಿಗೆ ಒಳಪಡಿಸಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ತನಿಖೆಯು ನಿಷ್ಪಕ್ಷಪಾತವಾಗಿ ನಡೆಯುತ್ತಿದೆ. ಅಕ್ರಮದಲ್ಲಿ ಭಾಗಿಯಾಗಿರುವವರು ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ. ಯಾವುದೇ ರಾಜಕೀಯ ಲಾಭ ಮಾಡಿಕೊಳ್ಳುವ ಹುನ್ನಾರ ನಡೆಸದೆ, ಅಕ್ರಮ ಎಸಗಿದವರನ್ನು ಕಾನೂನಿನ ಬಲೆಗೆ ತರಲು ಮುಂದಾಗಬೇಕು ಎಂದು ಗೃಹ ಸಚಿವರು ಮಾಧ್ಯಮಗಳ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಿಎಸ್ಐ ಅಕ್ರಮ: ರುದ್ರಗೌಡ ಪಾಟೀಲ್, ಮಲ್ಲಿಕಾರ್ಜುನ ಪಾಟೀಲ್‌ಗೆ 13 ದಿನ ಸಿಐಡಿ ಕಸ್ಟಡಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.