ETV Bharat / city

ಡಿಕೆಶಿ ವಿರುದ್ಧ ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ; ತನಿಖಾ ವರದಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಈಗಾಗಲೇ ಅಕ್ರಮ ಹಣ ಸಾಗಾಣೆ ಆರೋಪದಡಿ ಇಡಿ ವಶದಲ್ಲಿರುವ ಡಿಕೆಶಿ ವಿರುದ್ಧ ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಕೇಳಿ ಬಂದಿದೆ. ಈ ಸಂಬಂಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ಇಂದು ನಡೆಯಿತು.

ಡಿಕೆಶಿ ವಿರುದ್ಧ ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ
author img

By

Published : Oct 10, 2019, 11:52 PM IST

ಬೆಂಗಳೂರು: ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಮಾಡಿರುವ ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ತನಿಖಾ ದೃಷ್ಟಿಯಿಂದ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಬಿ.ಎಸ್. ನಾರಾಯಣಸ್ವಾಮಿ ಮತ್ತು ಸಾಮಾಜಿಕ ಕಾರ್ಯಕರ್ತ ಎ.ಸಿ. ಶಿವರಾಜು ಡಿಕೆಶಿ ಪ್ರಕರಣವನ್ನ ಸಿಬಿಐಗೆ ನೀಡಬೇಕೆಂದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ಇಂದು ಈ ಅರ್ಜಿ ವಿಚಾರಣೆ ನಡೆಯಿತು.

ಅರ್ಜಿದಾರರ ಪರ ವಾದಿಸಿದ ವಕೀಲರು, ಕರ್ನಾಟಕ ಅರಣ್ಯ ಕಾಯಿದೆಯನ್ನು ಉಲ್ಲಂಘಿಸಿ ಡಿ.ಕೆ. ಶಿವಕುಮಾರ್ ಕಲ್ಲು ಗಣಿಗಾರಿಕೆ ನಡೆಸಿ ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟವನ್ನುಂಟು ಮಾಡಿದ್ದಾರೆ. ಈ ಪ್ರಕರಣ ಬಹಳ ಗಂಭೀರವಾಗಿದ್ದು, ಸಿಬಿಐ ತನಿಖೆಗೆ ನಿಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಈ ವೇಳೆ ನ್ಯಾಯಾಲಯ ಡಿಕೆ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಲು ಸೂಚಿಸಿ, ವಿಚಾರಣೆಯನ್ನು ಮುಂದೂಡಿದೆ.

Intro:ಡಿಕೆಶಿ ವಿರುದ್ಧ ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ
ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಲು ಸರಕಾರಕ್ಕೆ ಹೈಕೋರ್ಟ್ ಸೂಚನೆ.

ಬೆಂಗಳೂರು

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಮಾಡಿರುವ ಅಕ್ರಮ ಕಲ್ಲುಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ದೃಷ್ಟಿಯಿಂದ ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಬಿ.ಎಸ್.ನಾರಾಯಣಸ್ವಾಮಿ ಮತ್ತು ಸಾಮಾಜಿಕ ಕಾರ್ಯಕರ್ತ ಎ.ಸಿ.ಶಿವರಾಜು ಪ್ರಕರಣವನ್ನ ಸಿಬಿಐ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ಇಂದು ನಡೆಯಿತು.

ಅರ್ಜಿದಾರರ ಪರ ವಾದಿಸಿದ ವಕೀಲರು ಕರ್ನಾಟಕ ಅರಣ್ಯ ಕಾಯಿದೆಯನ್ನು ಉಲ್ಲಂಘಿಸಿ ಡಿ.ಕೆ.ಶಿವಕುಮಾರ್ ಕಲ್ಲು ಗಣಿಗಾರಿಕೆ ನಡೆಸಿ ಕೋಟ್ಯಂತರ ರೂ.ನಷ್ಟವನ್ನ ಮಾಡಿದ್ದಾರೆ. ಈ ಪ್ರಕರಣ ಬಹಳ ಗಂಭೀರವಾಗಿದ್ದು ಈ ಪ್ರಕರಣವನ್ನು ಸಿಬಿಐ ತನಿಖೆಗೆ ನಿಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ಈ ವೇಳೆ ನ್ಯಾಯಾಲಯ ಡಿಕೆ ವಿರುದ್ಧ ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಲು ಸೂಚಿಸಿ, ವಿಚಾರಣೆಯನ್ನು ಮುಂದೂಡಿಕೆ ಮಾಡಿದೆBody:KN_BNG_09_DK_7204498Conclusion:KN_BNG_09_DK_7204498

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.