ETV Bharat / city

ಐಎಂಎ ವಂಚನೆ ಪ್ರಕರಣ: ಹೈಕೋರ್ಟ್​ಗೆ​ ತನಿಖಾ ಪ್ರಗತಿ ವರದಿ ಸಲ್ಲಿಕೆ - ಹೈಕೋರ್ಟ್​

ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಇಲ್ಲಿಯವರೆಗೆ ನಡೆಸಿರುವ ತನಿಖೆಯ ಪ್ರಗತಿ ವರದಿಯನ್ನು ಹೈಕೋರ್ಟ್​ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆ ಮಾಡಲಾಗಿದ್ದು, ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಹೈಕೋರ್ಟ್
author img

By

Published : Aug 1, 2019, 7:26 PM IST

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಇಲ್ಲಿಯವರೆಗೆ ನಡೆಸಿರುವ ತನಿಖೆಯ ಪ್ರಗತಿ ವರದಿಯನ್ನು ಹೈಕೋರ್ಟ್​ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆ ಮಾಡಲಾಗಿದೆ.

ಐಎಂಎ ವಂಚನೆ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಮತ್ತು ನ್ಯಾಯಮೂರ್ತಿ ಹೆಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆಯಿತು.

ಈ ವೇಳೆ ನ್ಯಾಯಲಯಕ್ಕೆ ಸರ್ಕಾರದ ಅಡ್ವಕೇಟ್ ಜನರಲ್ ಪ್ರಭುಲಿಂಗ್ ನಾವಡಗಿಯವರು ಇಲ್ಲಿಯವರೆಗೆ ನಡೆದಿರುವ ತನಿಖಾ ವರದಿಯನ್ನ ನೀಡಿ, ಎಸ್ಐಟಿ ಏಜೆನ್ಸಿಯಿಂದಲು ತನಿಖೆಯಾಗುತ್ತಿದೆ. ಹಲವಾರು ವ್ಯಕ್ತಿಗಳನ್ನ ಬಂಧಿಸಿದ್ದಾರೆ ಎಂದು ತಿಳಿಸಿದರು.

ತನಿಖಾ ವರದಿಯನ್ನ ಪರಿಶೀಲಿಸಿದ ಹೈಕೋರ್ಟ್, ತನಿಖೆಯಲ್ಲಿ ಕೆಲವು ಕ್ರಮ ಕೈಗೊಳ್ಳಲಾಗಿದೆ. ಹಾಗಾಗಿ ಸದ್ಯದ ಸ್ಥಿತಿಯಲ್ಲಿ ಸಿಬಿಐಗೆ ಪ್ರಕರಣ ವಹಿಸುವ ಅಗತ್ಯವಿಲ್ಲ. ತನಿಖೆಯಲ್ಲಿ ಸ್ವಲ್ಪ ಪ್ರಗತಿಯಾಗಿರುವುದು ಗಮನಿಸಿದ್ದೇವೆ. ಪ್ರಗತಿಯ ವಿವರವನ್ನು ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ. ಎಸ್ಐಟಿಗೆ ಸ್ವಲ್ಪ ಕಾಲಾವಕಾಶ ನೀಡೋಣ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್.ಒಕಾ ಅಭಿಮತ ವ್ಯಕ್ತಪಡಿಸಿದರು.

ಇನ್ನು ತನಿಖಾ ಪ್ರಗತಿ ವರದಿಯನ್ನ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್​ಗೆ ನೀಡಿ, ಮುಂದಿನ ಆದೇಶದವರೆಗೆ ಲಕೋಟೆ ತೆರೆಯದಂತೆ ಸೂಚನೆ ನೀಡಿ ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿಕೆ ಮಾಡಲಾಗಿದೆ.

Intro:ಐಎಂಎ ಬಹುಕೋಟಿ ಹಗರಣ
ಎಸ್‌ಐಟಿ ತನಿಖೆಯ ಪ್ರಗತಿ ವರದಿ ನೀಡಲು ಸರಕಾರಕ್ಕೆ ಹೈಕೋರ್ಟ್ ಆದೇಶ

ಐಎಂಎ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಇಲ್ಲಿಯವರೆಗೆ ನಡೆಸಿರುವ ತನಿಖೆಯ ಪ್ರಗತಿಯನ್ನ ಹೈಕೋರ್ಟ್ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆ ಮಾಡಿದೆ.

ಐಎಂಎ ವಂಚನೆ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯಪೀಠದಲ್ಲಿ ನಡೆಯಿತು.

ಈ ವೇಳೆ ನ್ಯಾಯಲುಕ್ಕೆ ಸರ್ಕಾರದ ಅಡ್ವಕೇಟ್ ಜನರಲ್ ಪ್ರಭುಲಿಂಗ್ ನಾವಡ್ಗಿ ಎಸ್ಐಟಿ ಏಜೆನ್ಸಿಯಿಂದಲೂ ತನಿಖೆಯಾಗುತ್ತಿದೆ, ಹಾಗೆ ಹಲವಾರು ವ್ಯಕ್ತಿಗಳನ್ನ ಬಂಧಿಸಿದ್ದಾರೆ ಎಂದು ಇಲ್ಲಿಯವರೆಗೆ ನಡೆದಿರುವ ತನಿಖಾವರದಿಯನ್ನನೀಡಿದ್ರು

ತನಿಖಾ ವರದಿಯನ್ನ ಪರಿಶೀಲಿಸಿದ ಹೈಕೋರ್ಟ್ ತನಿಖೆಯಲ್ಲಿ ಕೆಲವು ಕ್ರಮ ಕೈಗೊಳ್ಳಲಾಗಿದೆ, ಹಾಗಾಗಿ ಸದ್ಯದ ಸ್ಥಿತಿಯಲ್ಲಿ ಸಿಬಿಐಗೆ ಪ್ರಕರಣ ವಹಿಸುವ ಅಗತ್ಯವಿಲ್ಲ ,ತನಿಖೆಯಲ್ಲಿ ಸ್ವಲ್ಪ ಪ್ರಗತಿಯಾಗಿರುವುದು ಗಮನಿಸಿದ್ದೇವೆ, ಪ್ರಗತಿಯ ವಿವರವನ್ನು ಈಗ ಬಹಿರಂಗಪಡಿಸಲು ಸಾಧ್ಯವಿಲ್ಲ ಎಸ್ಐಟಿ ಗೆ ಸ್ವಲ್ಪ ಕಾಲಾವಕಾಶ ನೀಡೋಣ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಒಕಾ ಅಭಿಮತ ವ್ಯಕ್ತಪಡಿಸಿ ತನಿಖಾ ಪ್ರಗತಿ ವರದಿಯನ್ನ ಮುಚ್ಚಿದ ಲಕೋಟೆಯಲ್ಲಿಡಲು ಹೈ ಕೋರ್ಟ್ ರಿಜಿಸ್ಟ್ರಾರ್ ಜನರಲ್ಗೆ ನಿರ್ದೇಶನ ನೀಡಿ ಮುಂದಿನ ಆದೇಶದವರೆಗೆ ಲಕೋಟೆ ತೆರೆಯದಂತೆ ಸೂಚನೆ ನೀಡಿವಿಚಾರಣೆ ಆಗಸ್ಟ್ 20 ಕ್ಕೆ ಮುಂದೂಡಿಕೆ ಮಾಡಿದೆ.
Body:KN_BNG_08_IMA_7204498Conclusion:KN_BNG_08_IMA_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.