ETV Bharat / city

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಂದು ಭಾರಿ ಮಳೆ: ಯೆಲ್ಲೋ ಅಲರ್ಟ್

ಬೆಂಗಳೂರಿನಲ್ಲಿಂದು ಮೋಡಕವಿದ ವಾತಾವರಣ ಇರಲಿದ್ದು, ಮಳೆಯಾಗುವ ನಿರೀಕ್ಷೆ ಇದೆ.

IMD issues yellow alert
IMD issues yellow alert
author img

By

Published : Oct 27, 2021, 12:42 AM IST

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದಿದೆ.

ದಕ್ಷಿಣ ಕನ್ನಡ, ಉಡುಪಿ , ಉತ್ತರ ಕನ್ನಡ, ಶಿವಮೊಗ್ಗ , ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯ ಕೆಲವು ಭಾಗದಲ್ಲಿ ಹೆಚ್ಚು ಮಳೆ ಬೀಳಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರಿನಲ್ಲಿ ಒಣಹವೆ ಇರಲಿದೆ. ರಾಜ್ಯದಲ್ಲಿ ಇಂದು ಈಶಾನ್ಯ ಮಾರುತಗಳು ಪ್ರವೇಶವಾಗಿದ್ದು, ಹಿಂಗಾರು ಮಳೆ ಇಂದು ಸುರಿಯಲಿದೆ. ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಗೆ ಕಾರಣವಾಗಲಿವೆ ಎಂದು ಮಾಹಿತಿ ನೀಡಿದೆ. ಕರಾವಳಿಯಲ್ಲಿ ಸಾಧಾರಣ ಮಳೆ ಸುರಿಸುತ್ತವೆ. ಉತ್ತರ ಒಳನಾಡಿನ ಜಿಲ್ಲೆಗಳ ಮೇಲೆ ಅಷ್ಟೊಂದು ಪ್ರಭಾವ ಬೀರುವುದಿಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.

ಸಿಎಂ ಬೊಮ್ಮಾಯಿ, ನಿಮಗೆ ಧಮ್​ ಇದ್ರೆ ಒಂದೇ ವೇದಿಕೆ ಮೇಲೆ ಬಹಿರಂಗ ಚರ್ಚೆಗೆ ಬನ್ನಿ: ಸಿದ್ದು ಸವಾಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.