ETV Bharat / city

ಜವಾದ್ ಚಂಡಮಾರುತದ ಎಫೆಕ್ಟ್.. ಕರ್ನಾಟಕದಾದ್ಯಂತ ಡಿ.6ರವರೆಗೆ ಭಾರಿ ಮಳೆ.. - IMD predicts heavy rainfall

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ..

IMD predicts heavy rainfall in  Karnataka
ಸಾಂದರ್ಭಿಕ ಚಿತ್ರ
author img

By

Published : Dec 3, 2021, 4:37 PM IST

ಬೆಂಗಳೂರು : ನಾಳೆ (ಶನಿವಾರ) ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಚ೦ಡಮಾರುತ ಆರ್ಭಟಿಸಲಿದೆ. ಇದರ ಪರಿಣಾಮವಾಗಿ ಇಂದಿನಿಂದ 4 ದಿನ ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಾದ್ಯಂತ ಡಿಸೆಂಬರ್ 6ರವರೆಗೂ ಮಳೆ ಮುಂದುವರಿಯಲಿದೆ. ಇಂದು ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಇದರಿಂದಾಗಿ ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಆಂಧ್ರಪ್ರದೇಶ, ಒಡಿಶಾಗೆ ಅಪ್ಪಳಿಸಲಿದೆ ಜವಾದ್ ಚಂಡಮಾರುತ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.