ETV Bharat / city

ಕೆಂಪು ವಲಯ ಹೊರತುಪಡಿಸಿ ಹೆದ್ದಾರಿ ಕಾಮಗಾರಿಗಳ ಅನುಷ್ಠಾನ: ಕಾರಜೋಳ ಘೋಷಣೆ - ಸಾಮಾಜಿಕ ಅಂತರ, ಮಾಸ್ಕ್​ ಕಡ್ಡಾಯ

ರಾಜ್ಯ ಸರ್ಕಾರವು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ 8,100 ಕೋಟಿ ರೂ. ವೆಚ್ಚದ 2020-21ನೇ ಸಾಲಿನ ಪ್ರಸ್ತಾವನೆಗಳನ್ನು ಶೀಘ್ರವಾಗಿ ಮಂಜೂರು ಮಾಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದರು.

Implementation of highway works other than the red zone
ಕೇಂದ್ರ ಸಚಿವರೊಂದಿಗೆ ವಿಡಿಯೋ ಸಂವಾದ
author img

By

Published : Apr 28, 2020, 4:51 PM IST

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಪೂರಕ ನಿರ್ದೇಶನಗಳನ್ನು ಅನುಸರಿಸಿ ಕೇಂದ್ರ ಸರ್ಕಾರವು ಮಂಜೂರು ಮಾಡಿದ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ (ಕೆಂಪು ವಲಯವನ್ನು ಹೊರತುಪಡಿಸಿ ಉಳಿದ ವಲಯಗಳು) ಎಂದು ಲೋಕೋಪಯೋಗಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ತಿಳಿಸಿದರು.

ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಎಲ್ಲಾ ರಾಜ್ಯಗಳ ಲೋಕೋಪಯೋಗಿ ಹಾಗೂ ಸಾರಿಗೆ ಸಚಿವರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡ ನಂತರ ಡಿಸಿಎಂ ಮಾತನಾಡಿದರು. ನೀರು ಸಂಗ್ರಹಕ್ಕೆ ಅನುಕೂಲವಾಗುವಂತೆ ಮಹಾರಾಷ್ಟ್ರದ ಮಾದರಿಯ ಬ್ರಿಡ್ಜ್ ಕೆಳಭಾಗದಲ್ಲಿ ವಿಯರ್ ನಿರ್ಮಾಣ ಕಾಮಗಾರಿಗಳನ್ನು ಈಗಾಗಲೇ ಪ್ರಾರಂಭಿಸಲಾಗಿದೆ ಎಂದರು.

ಕೊರೊನಾ ವೈರಸ್ ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನಗಳನ್ನು ಅಳವಡಿಸಿಕೊಂಡು, ರಸ್ತೆ ನಿರ್ಮಾಣ ಕಾಮಗಾರಿಗಳು, ಕಟ್ಟಡ ಕಾರ್ಮಿಕರು, ಸಿಬ್ಬಂದಿ ವರ್ಗದವರು, ವಾಹನ ಚಾಲಕರು, ಸಹಾಯಕರು ಮಾಸ್ಕ್, ಸ್ಯಾನಿಟೈಸರ್​ ಉಪಯೋಗಿಸುವಂತೆ ಕ್ರಮಕೈಗೊಳ್ಳಲಾಗಿದೆ. ಕಾಮಗಾರಿ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು.

ಸರಕು ಸಾಗಣೆ, ಕೃಷಿ, ತೋಟಗಾರಿಕೆ ಉತ್ಪನ್ನಗಳ ಸಾಗಣೆ ವಾಹನಗಳಿಗೆ ಮುಕ್ತವಾಗಿ ಸಂಚರಿಸುವಂತೆ ಕ್ರಮಕೈಗೊಳ್ಳಲಾಗಿದೆ. ರೈತರಿಗೆ, ಕೃಷಿ ಕಾರ್ಮಿಕರಿಗೆ ಯಾವುದೇ ಅಡತಡೆ ಮಾಡದಂತೆ ಪೂರಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರವು ಶಕ್ತಿ ಮೀರಿ ಶ್ರಮಿಸುತ್ತಿದೆ ಎಂದು ಅವರು ವಿವರಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.