ಬೆಂಗಳೂರು : ಸೋನಿಯಾ ಗಾಂಧಿ ಅವರಿಗೆ ಇಡಿ ವಿಚಾರಣೆ ನೆಪದಲ್ಲಿ ನೀಡುತ್ತಿರುವ ಕಿರುಕುಳ ಹಾಗೂ ಅಗತ್ಯ ವಸ್ತುಗಳ ಮೇಲೆ ಜಿಎಸ್ ಟಿ ಹೇರಿಕೆ ವಿರೋಧಿಸಿ ಪ್ರತಿಭಟನೆ ಮಾಡುವ ವಿಚಾರವಾಗಿ ಮತ್ತು ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಮುಂದಿನ ತಿಂಗಳು ನಡೆಸಲಿರುವ ಸ್ವಾತಂತ್ರ್ಯ ನಡಿಗೆ ಸ್ವರೂಪದ ಬಗ್ಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಮಹತ್ವದ ಸಭೆ ನಡೆಸಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಹಿರಿಯ ಮುಖಂಡರು ಹಾಗೂ ಶಾಸಕರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಎಐಸಿಸಿ ಕಾರ್ಯದರ್ಶಿಗಳಾದ ಮಯೂರ್ ಜಯಕುಮಾರ್, ರೋಜಿ ಎಂ ಜಾನ್, ಅಭಿಷೇಕ್ ದತ್, ಶ್ರೀಧರ್ ಬಾಬು, ಪಿ ಸಿ ವಿಷ್ಣುನಾಥ್, ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್, ಯು.ಟಿ. ಖಾದರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಧ್ರುವನಾರಾಯಣ್ ಮತ್ತಿತರರು ಭಾಗವಹಿಸಿದ್ದರು.
ಸೋನಿಯಾ ಗಾಂಧಿ ಇಡಿ ವಿಚಾರಣೆಯನ್ನು ಖಂಡಿಸುವ ಜೊತೆಗೆ ಸಾಕಷ್ಟು ವಿಚಾರಗಳನ್ನು ಮುಂದಿಟ್ಟು ಹೋರಾಟ ನಡೆಸಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದು ಈ ಸಂಬಂಧ ಮುಂಬರುವ ದಿನಗಳಲ್ಲಿ ಕಾರ್ಯತಂತ್ರ ಹೆಣೆಯುವ ಬಗ್ಗೆ ಸುದೀರ್ಘ ಚರ್ಚೆ ಇಂದಿನ ಸಭೆಯಲ್ಲಿ ನಡೆದಿದೆ.
ಇದನ್ನೂ ಓದಿ : ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಿಸಲು ಸರ್ಕಾರ ನಿರ್ಧಾರ: ಸಚಿವ ಬಿ.ಸಿ ನಾಗೇಶ್