ETV Bharat / city

ಆಜಾದಿ ಕಾ ಅಮೃತ್​ ಮಹೋತ್ಸವ್​.. ಜಿಲ್ಲೆಗಳಲ್ಲಿ ಆಚರಣೆ ಹೀಗಿತ್ತು

ಕೋವಿಡ್​ ಸಾಂಕ್ರಾಮಿಕದ ನಡುವೆಯೂ ಇಂದು ಎಲ್ಲೆಡೆ ಧ್ವಜಾರೋಹಣ ಸೂಕ್ತ ಮತ್ತು ಸರಳ ರೀತಿಯಲ್ಲಿ ನೆರವೇರಿದೆ.

independence day celebration in state
75ನೇ ಸ್ವಾತಂತ್ಯ ದಿನಾಚರಣೆ
author img

By

Published : Aug 15, 2021, 11:22 AM IST

Updated : Aug 15, 2021, 5:23 PM IST

ಇಂದು ದೇಶದ ಜನತೆ ಸ್ವಾತಂತ್ರ್ಯ ದಿನದ ಅಮೃತ್​ ಮಹೋತ್ಸವ ಆಚರಿಸುತ್ತಿದ್ದಾರೆ. 75ನೇ ಸ್ವಾತಂತ್ಯ ದಿನದ ಅಂಗವಾಗಿ ಕೋವಿಡ್​ ಸಾಂಕ್ರಾಮಿಕದ ನಡುವೆಯೂ ಎಲ್ಲೆಡೆ ಧ್ವಜಾರೋಹಣ ಸರಾಗವಾಗಿ ನೆರವೇರಿಸಲಾಗಿದೆ.

ಚಿತ್ರದುರ್ಗ :

ಚಿತ್ರದುರ್ಗ ನಗರದ ಪೊಲೀಸ್ ಕವಾಯಿತು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಧ್ವಜಾರೋಹಣ ನೇರವೆರಿಸಿ, ಭಾಷಣ ಮಾಡಿದರು. ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಸ್ಕೌಟ್ಸ್​​ & ಗೈಡ್ಸ್, ಗೃಹರಕ್ಷಕ ದಳ ಸೇರಿದಂತೆ ವಿವಿಧ ಇಲಾಖೆಯವರಿಂದ ಆಕರ್ಷಕ ಪಥ ಸಂಚಲನ ನಡೆಸಲಾಯ್ತು.

ಸ್ವಾತಂತ್ರ್ಯ ದಿನದ ಭಾಷಣ ಮಾಡಿದ ಸಚಿವರು, ಒಲಿಂಪಿಕ್ ಕ್ರೀಡೆಯಲ್ಲಿ ಭಾಗವಹಿಸಿ ಬಂಗಾರ ಪದಕ ಸೇರಿದಂತೆ 7 ಪದಕಗಳನ್ನು ಮುಡಿಗೇರಿಸಿಕೊಂಡವರಿಗೆ ಅಭಿನಂದನೆ ಸಲ್ಲಿಸಿದರು. ಇನ್ನೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಲಾಯಿತು.

ದೇವನಹಳ್ಳಿ:

ಪಟ್ಟಣದ ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಕಾರ್ಯಕ್ರಮ ಅಯೋಜನೆ ಮಾಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಧ್ವಜಾರೋಹಣ ನೆರವೇರಿಸಿ ರಾಷ್ಟ್ರ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು. ಪೊಲೀಸ್ ಇಲಾಖೆಯ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪರೇಡ್ ವೀಕ್ಷಣೆ ನಡೆಸಿದ ಸಚಿವರು ಗೌರವ ರಕ್ಷೆ ಸ್ವೀಕರಿಸಿದರು.

75ನೇ ಸ್ವಾತಂತ್ಯ ದಿನಾಚರಣೆ

ಕಾರ್ಯಕ್ರಮದಲ್ಲಿ ಕೊರೊನಾ ಸೋಂಕು‌ ಹರಡದಂತೆ ತಡೆಯಲು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ, ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಮಾಸ್ಕ್ ಧರಿಸುವಂತೆ ತಿಳಿಸಲಾಯಿತು. ಕುರ್ಚಿಗಳನ್ನು ಅಂತರ ಕಾಯ್ದುಕೊಂಡು ಹಾಕಲಾಗಿತ್ತು.

ಚಿಕ್ಕಮಗಳೂರು :

ನಗರದ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ಧ್ವಜಾರೋಹಣವನ್ನು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್, ಗೃಹರಕ್ಷಕ, ಅರಣ್ಯ, ಅಗ್ನಿಶಾಮಕ ದಳದಿಂದ ಪಥ ಸಂಚಲನ ನಡೆಯಿತು. ಈ ವೇಳೆ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್, ಶಾಸಕ ಸಿ.ಟಿ. ರವಿ, ಎಂ.ಎಲ್.ಸಿ. ಭೋಜೆಗೌಡ ಸೇರಿ ಹಲವರು ಪಾಲ್ಗೊಂಡಿದ್ದರು.

ಬಿಬಿಎಂಪಿ:

ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿ ಇಂದು ಆಡಳಿತಗಾರರು ರಾಕೇಶ್ ಸಿಂಗ್, ಮುಖ್ಯ ಆಯುಕ್ತ ಗೌರವ್ ಗುಪ್ತಾ ಧ್ವಜಾರೋಹಣ ನೆರವೇರಿಸಿದರು. ಇದೇ ವೇಳೆ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಕೋವಿಡ್ ಸಂಕಷ್ಟ ಕಾಲದಲ್ಲಿ ಹಗಲು ರಾತ್ರಿ ಎನ್ನದೇ ಕೆಲಸ ನಿರ್ವಹಿಸಿರುವ ವೈದ್ಯರು ಹಾಗೂ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳಿಗೆ ಆಡಳಿತಗಾರರಾದ ರಾಕೇಶ್ ಸಿಂಗ್ ಹಾಗೂ ಆಯುಕ್ತ ಗೌರವ್ ಗುಪ್ತಾ ಸನ್ಮಾನ ಮಾಡಿದರು.

ಮಂಡ್ಯ:

ಮಂಡ್ಯ ಜಿಲ್ಲಾಡಳಿತದ ವತಿಯಿಂದ ನಡೆದ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರಿಂದ ಧ್ವಜಾರೋಹಣ ನೆರವೇರಿಸಲಾಯಿತು. ನಂತರ ಮಾತನಾಡಿದ ಸಚಿವರು, ಸ್ವಾತಂತ್ರ್ಯಕ್ಕಾಗಿ ಅರ್ಪಣಾ ಮನೋಭಾವದಿಂದ ಹೋರಾಟ ಮಾಡಿದ ಮಹಾನ್​ ನಾಯಕರನ್ನು ನಾವೆಲ್ಲರು ನೆನೆಯಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ಮದ್ದೂರಿನ ಶಿವಪುರದಲ್ಲಿ ನಡೆದ ಧ್ವಜ ಸತ್ಯಾಗ್ರಹ ಹೋರಾಟವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನನಗೆ ಜವಾಬ್ದಾರಿ ಕೊಟ್ಟಿದ್ದಾರೆ. ನನಗೆ ನೀಡಿರುವ ಖಾತೆಯಲ್ಲಿ ಕೆಲಸ ಮಾಡಲು ಬದ್ಧನಾಗಿದ್ದೇನೆ. ಜಿಲ್ಲೆಯ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು. ಸಿಎಂ ಕೃಷಿಕರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿವೇತನ ಸೇರಿದಂತೆ ಹಿರಿಯ ನಾಗರಿಕರಿಗೆ, ವಿಧವೆಯರಿಗೆ, ಅಂಗವಿಕಲರ ಪಿಂಚಣಿ ಹೆಚ್ಚಿಸುವ ಮೂಲಕ ಬದುಕು ಬೆಳಗಿಸುವ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಂಡ್ಯ ಜಿಲ್ಲೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಈವರೆಗೆ ಒಟ್ಟು 2,63,000 ರೈತ ಫಲಾನುಭವಿಗಳಿಗೆ ಒಟ್ಟು ರೂ. 50.43 ಕೋಟಿ ಸಹಾಯಧನ ಪಾವತಿಸಲಾಗಿದೆ. ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ ರೂ. 33.64 ಕೋಟಿ ವೆಚ್ಚದಲ್ಲಿ 19,511 ರೈತರಿಗೆ ವಿವಿಧ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ ಎಂದರು.

ದಾವಣಗೆರೆ:

75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ದಾವಣಗೆರೆ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ತೆರೆದ ವಾಹನದಲ್ಲಿ ಕವಾಯತು ತಂಡಗಳನ್ನು ವೀಕ್ಷಣೆ ಮಾಡಿದರು. ಬಳಿಕ ಪೊಲೀಸ್ ತಂಡ, ಅಗ್ನಿಶಾಮಕ ತಂಡ, ಗೃಹರಕ್ಷಕ ದಳದಿಂದ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು. ಬಳಿಕ ದೇಶದ ಸ್ವಾತಂತ್ರ್ಯಕ್ಕಾಗಿ ವೀರಮರಣವನ್ನಪ್ಪಿದ ಸ್ವಾತಂತ್ರ್ಯ ಹೋರಾಟಗಾರನನ್ನು ನೆನೆದ ಸಚಿವರು ತ್ಯಾಗ ಬಲಿದಾನವನ್ನು ಜನರಿಗೆ ಭಾಷಣದ ಮೂಲಕ ತಿಳಿಸಿದರು.

independence-day-celebration-in-state
ಸ್ವಾತಂತ್ರ್ಯ ದಿನಾಚರಣೆ

ಭಾರತ್ ಎಲೆಕ್ಟ್ರಾನಿಕ್ಸ್​ನಿಂದ ಸ್ವಾತಂತ್ರ್ಯ ದಿನಾಚರಣೆ:

ಬೆಂಗಳೂರಿನ ಜಾಲಹಳ್ಳಿಯಲ್ಲಿರುವ ಭಾರತದ ನವರತ್ನ ರಕ್ಷಣಾ ಸಂಸ್ಥೆಯಾದ ಭಾರತ್ ಎಲೆಕ್ಟ್ರಾನಿಕ್ಸ್​ನ ಜಾಲಹಳ್ಳಿ ಘಟಕದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಸಂಸ್ಥೆಯ ನಿರ್ದೇಶಕ ವಿನಯ ಕುಮಾರ್ ಕತ್ಯಾಲ್ ಧ್ವಜಾರೋಹಣ ಮಾಡಿದರು. ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕ ಆರ್.ಪಿ. ಮೋಹನ್ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು, ಪ್ರಧಾನ ವ್ಯವಸ್ಥಾಪಕರು, ಇತರರು ಹಾಜರಿದ್ದರು.

ಇದನ್ನೂ ಓದಿ: ನೆಲ-ಜಲದ ವಿಷಯದಲ್ಲಿ ರಾಜಿ ಇಲ್ಲ, ಶೀಘ್ರವೇ ಮೇಕೆದಾಟು ಯೋಜನೆ ಆರಂಭ: ಸಿಎಂ ಬೊಮ್ಮಾಯಿ

Last Updated : Aug 15, 2021, 5:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.