ಬೆಂಗಳೂರು: ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ವಿದ್ಯಾರ್ಥಿಗಳನ್ನ ಹೊರತುಪಡಿಸಿ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರು ಮಾತ್ರ ಭಾಗಿಯಾಗುವಂತೆ ಸೂಚನೆ ನೀಡಲಾಗಿದೆ.
ಕೊರೊನಾ ಮಹಾಮಾರಿ ಭೀತಿಯ ಹಿನ್ನೆಲೆಯಲ್ಲಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ರಾಜ್ಯಾದ್ಯಂತ ಎಲ್ಲಾ ಶಿಕ್ಷಕರು ತಮ್ಮ ಶಾಲೆಗಳಲ್ಲಿ ಹಾಜರಾಗಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸರಳವಾಗಿ ಶಿಷ್ಟಾಚಾರದೊಂದಿಗೆ ಆಚರಿಸುವಂತೆ ತಿಳಿಸಲಾಗಿದೆ.