ಬೆಂಗಳೂರು: ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯವು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭಗೊಂಡಿದ್ದು, ಮೈದಾನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಈಗಾಗಲೇ ಮೊಹಾಲಿ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಹಾಗೂ 222 ರನ್ಗಳ ಅಂತರದಿಂದ ಜಯಿಸಿರುವ ರೋಹಿತ್ ಪಡೆ ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಅಹರ್ನಿಶಿ ಟೆಸ್ಟ್ ಪಂದ್ಯವಾಗಿದ್ದು, ಸುಮಾರು ಎರಡುವರೆ ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಪಂದ್ಯ ಆಯೋಜನೆಗೊಂಡಿದೆ.
ಪಂದ್ಯದ ಹಿನ್ನೆಲೆಯಲ್ಲಿ ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ 10 ಎಸಿಪಿಗಳು, 34 ಇನ್ಸ್ಪೆಕ್ಟರ್ಗಳು, ಪಿಎಸ್ಐ, ಕಾನ್ಸ್‌ಟೇಬಲ್ಸ್, ಕೆಎಸ್ಆರ್ಪಿ ಮತ್ತು ಸಿಎಆರ್ ತುಕಡಿಗಳು ಸೇರಿ ಇಂದಿನಿಂದ ಐದು ದಿನ 700 ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಕೋವಿಡ್ ಇಳಿಮುಖ ಹಿನ್ನೆಲೆಯಲ್ಲಿ ಸಂಪೂರ್ಣ ಪ್ರಮಾಣದಲ್ಲಿ ವೀಕ್ಷಕರಿಗೆ ಅವಕಾಶ ನೀಡಲಾಗಿದೆ. ವಾರಾಂತ್ಯ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಹೆಚ್ಚು ಕ್ರಿಕೆಟ್ ಪ್ರೇಮಿಗಳು ಆಗಮಿಸುವ ಸಾಧ್ಯತೆಯಿದೆ. ಸಂಚಾರ ದಟ್ಟಣೆಯಾಗದಂತೆ ಟ್ರಾಫಿಕ್ ಪೊಲೀಸರು ಬದಲಿ ಮಾರ್ಗಗಳ ವ್ಯವಸ್ಥೆ ಮಾಡಿದ್ದಾರೆ.
ಇದನ್ನೂ ಓದಿ: ವನಿತೆಯರ ವಿಶ್ವಕಪ್ ಕ್ರಿಕೆಟ್ : ಅಬ್ಬರಿಸಿ ನೆಲಕಚ್ಚಿದ ವೆಸ್ಟ್ಇಂಡೀಸ್, ಭಾರತಕ್ಕೆ 155 ರನ್ಗಳ ಭರ್ಜರಿ ಗೆಲುವು!