ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆ ಪೊಲೀಸರು ಪ್ರತಿದಿನ ಜಾಗೃತಿ ಮೂಡಿಸಿದರೂ ಕೂಡ ಮಾರುಕಟ್ಟೆ, ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬೀಳುತ್ತಿದ್ದಾರೆ. ಈ ಹಿನ್ನೆಲೆ ಇನ್ಸ್ಪೆಕ್ಟರ್ ಲಿಂಗರಾಜು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳ ಮೂಲಕ ಸಿಲಿಕಾನ್ ಸಿಟಿ ಜನತೆಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಅನಗತ್ಯವಾಗಿ ರಸ್ತೆಯಲ್ಲಿ ಓಡಾಡಬಾರದು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಕೊರೊನಾ ವೈರಸ್ ಬಹಳ ಅಪಾಯಾಕಾರಿಯಾಗಿದೆ. ಇದರಿಂದ ನಾವು ಹೊರಗಡೆ ಬರಬೇಕಾದರೆ ಬಹಳಷ್ಟು ಜಾಗೃತಿ ಅವಶ್ಯಕ ಇದೆ ಎಂದು ತಿಳಿಸಿದ್ದಾರೆ. ಈಗಾಗಲೇ ಸರ್ಕಾರ, ಆರೋಗ್ಯ ಇಲಾಖೆ, ಪೊಲೀಸರು ಜಾಗೃತಿ ಮೂಡಿಸುತ್ತಿದ್ದು, ಪೊಲೀಸರು ಪ್ರತಿದಿನ ರೌಂಡ್ಸ್ ಹೊಡೆಯುತ್ತಿದ್ದಾರೆ. ಹೀಗಾಗಿ ಮನೆಯಿಂದ ಯಾರೂ ಹೊರಗೆ ಬರಬೇಡಿ ಎಂದು ವಿಡಿಯೋ ಮೂಲಕ ಮನವಿ ಮಾಡಿ ಎಚ್ಚರಿಕೆ ಸಂದೇಶ ಕೊಟ್ಟಿದ್ದಾರೆ.