ETV Bharat / city

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿದೇಶಿ ಚಿತ್ರತಂಡಗಳನ್ನು ಆಹ್ವಾನಿಸಿ: ಸಿಎಂ ಸಲಹೆ

author img

By

Published : Sep 30, 2021, 9:45 PM IST

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ವಿಶ್ವ ಮಟ್ಟದಲ್ಲಿ ಜನಪ್ರಿಯವಾಗಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.

cm
cm

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ವಿದೇಶಿ ಚಿತ್ರಗಳ ಪ್ರದರ್ಶನದೊಂದಿಗೆ, ಆ ಚಿತ್ರತಂಡದವರನ್ನೂ ಆಹ್ವಾನಿಸುವ ಮೂಲಕ ಚಿತ್ರೋತ್ಸವವನ್ನು ಜನಪ್ರಿಯಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರು ಹಾಗೂ ಅಧಿಕಾರಿಗಳೊಂದಿಗೆ ಅಕಾಡೆಮಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಿಎಂ ಚರ್ಚಿಸಿದರು. ನಂತರ ಮಾತನಾಡಿದ ಸಿಎಂ, ಕನ್ನಡ ಚಿತ್ರರಂಗ ಬೆಳೆದು ಬಂದ ಬಗ್ಗೆ ಒಂದು ಕಿರುಚಿತ್ರ ನಿರ್ಮಿಸಿ, ಚಿತ್ರೋತ್ಸವದಲ್ಲಿ ಪ್ರದರ್ಶಿಸಿ, ನಮ್ಮ ಚಿತ್ರರಂಗದ ಸಾಧನೆಯನ್ನು ಜಗತ್ತಿನ ಮುಂದಿಡಬೇಕು, ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ್, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ವಾರ್ತಾ ಇಲಾಖೆ ಆಯುಕ್ತ ಜಿ. ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.