ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಕಾರ್ಯನಿರ್ವಹಿಸುತ್ತಿರುವ ಐಪಿಎಸ್ ಅಧಿಕಾರಿಗಳ ಪೈಕಿ ಐವರು ಎಡಿಜಿಪಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರನ್ನು ರೈಲ್ವೆ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಪ್ರಶಾಂತ್ ಕುಮಾರ್ ಠಾಕೂರ್ ಅವರನ್ನು ಲೋಕಾಯುಕ್ತ ಎಡಿಜಿಪಿಯಾಗಿ, ಎಸ್ ಮೂರ್ತಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮಕ್ಕೆ , ಕೆ.ರಾಮಚಂದ್ರರಾವ್ ಅವರನ್ನು ಮೆಟ್ರೊ ಪಾಲಿಟನ್ ಟಾಸ್ಕ್ ಫೋರ್ಸ್ ಹಾಗೂ ಅರುಣ್ ಜೀ ಚಕ್ರವರ್ತಿ ಅವರನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.