ETV Bharat / city

ರಾಜ್ಯ ಸರ್ಕಾರದ ಸಮವಸ್ತ್ರ ನೀತಿ ಆದೇಶದಿಂದ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಬಿತ್ತಾ ಬ್ರೇಕ್? - ಹಿಜಾಬ್ ಕೇಸರಿ ಶಾಲು ವಿವಾದ

ಪ್ರಕರಣ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದ್ದು, ಫೆಬ್ರವರಿ 8 ರಂದು ಅರ್ಜಿ ವಿಚಾರಣೆ ನಡೆಯಲಿದೆ. ಕೋರ್ಟ್ ಮುಂದೆ ಸರ್ಕಾರ ತನ್ನ ನಿಲುವು ವ್ಯಕ್ತಪಡಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದು, ಕರ್ನಾಟಕ ಶಿಕ್ಷಣ ಕಾಯ್ದೆ, ನಿಯಮಗಳ ಕುರಿತು ಮಾಹಿತಿ ಪಡೆದರು..

is hijab saffron shawl issue ended by state govt uniform rule
ರಾಜ್ಯ ಸರ್ಕಾರದ ಸಮವಸ್ತ್ರ ನೀತಿ ಆದೇಶದಿಂದ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಬಿತ್ತಾ ಬ್ರೇಕ್
author img

By

Published : Feb 6, 2022, 5:15 PM IST

ಬೆಂಗಳೂರು : ಹಿಜಾಬ್, ಕೇಸರಿ ಶಾಲು ವಿವಾದ ರಾಜ್ಯದೆಲ್ಲೆಡೆ ವಿಸ್ತರಿಸುವ ಸುಳಿವು ಸಿಗುತ್ತಿದ್ದಂತೆ ಎಚ್ಚೆತ್ತ ರಾಜ್ಯ ಸರ್ಕಾರ ಹೈಕೋರ್ಟ್ ತೀರ್ಪಿಗೂ ಮುನ್ನವೇ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸುವ ಮೂಲಕ ಮುನ್ನೆಚ್ಚರಿಕೆ ವಹಿಸುವಲ್ಲಿ ಸಫಲವಾಗಿದೆ.

ರಾಜ್ಯದ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಹಿಜಾಬ್-ಕೇಸರಿ ಶಾಲು ವಿವಾದಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ. ಕರಾವಳಿ ಭಾಗದ ಉಡುಪಿ, ಕುಂದಾಪುರದಲ್ಲಿ ಆರಂಭಗೊಂಡ ವಿವಾದ ನಂತರ ನಿಧಾನವಾಗಿ ಚಿಕ್ಕಮಗಳೂರು, ಬೆಳಗಾವಿ, ದಾವಣಗೆರೆ ಜಿಲ್ಲೆಗೂ ವ್ಯಾಪಿಸಿದೆ.

ವಿವಾದ ವಿದ್ಯಾರ್ಥಿ ಸಂಘಟನೆಗಳ ನಂತರ ರಾಜಕೀಯ ಹಿತಾಸಕ್ತಿ ಪಡೆದುಕೊಂಡು ರಾಜಕೀಯ ನಾಯಕರಿಂದ ಆರೋಪ-ಪ್ರತ್ಯಾರೋಪಗಳು ಶುರುವಾಗಿವೆ. ಈ ವಿವಾದ ತೀವ್ರ ರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಸರ್ಕಾರ ರಾಜ್ಯದಲ್ಲಿ ಸಮವಸ್ತ್ರ ನೀತಿಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ಸರ್ಕಾರದ ಈ ಆದೇಶದಿಂದಾಗಿ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಾಗಿದೆ. ಖಾಸಗಿ ಶಾಲಾ-ಕಾಲೇಜುಗಳಲ್ಲಿ ಆಡಳಿತ ಮಂಡಳಿ ನಿರ್ಧರಿಸುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಿ ಬರಬೇಕಿದೆ.

ಹಿಜಾಬ್, ಕೇಸರಿ ಶಾಲು ಸೇರಿದಂತೆ ಬೇರೆ ಉಡುಪು ಧರಿಸಿ ಬಂದಲ್ಲಿ ಅವರನ್ನು ಶಾಲಾ-ಕಾಲೇಜುಗಳ ತರಗತಿಗೆ ಸೇರಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹಾಗಾಗಿ, ರಾಜ್ಯದ ಇತರೆ ಶಾಲಾ-ಕಾಲೇಜುಗಳಿಗೆ ಹಿಜಾಬ್, ಕೇಸರಿ ಶಾಲು ವಿವಾದ ಹಬ್ಬದಂತೆ ತಡೆಯುವಲ್ಲಿ ಸರ್ಕಾರ ಸಫಲವಾಗಿದೆ.

ಪ್ರಕರಣ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದ್ದು, ಫೆಬ್ರವರಿ 8 ರಂದು ಅರ್ಜಿ ವಿಚಾರಣೆ ನಡೆಯಲಿದೆ. ಕೋರ್ಟ್ ಮುಂದೆ ಸರ್ಕಾರ ತನ್ನ ನಿಲುವು ವ್ಯಕ್ತಪಡಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದು, ಕರ್ನಾಟಕ ಶಿಕ್ಷಣ ಕಾಯ್ದೆ, ನಿಯಮಗಳ ಕುರಿತು ಮಾಹಿತಿ ಪಡೆದರು.

ಸಮವಸ್ತ್ರ ಕಡ್ಡಾಯ ಕುರಿತು ಕೇರಳ, ಬಾಂಬೆ ಹೈಕೋರ್ಟ್, ಅಪೆಕ್ಸ್ ಕೋರ್ಟ್ ಗಳ ತೀರ್ಪುಗಳ ಕುರಿತು ಪರಾಮರ್ಶೆ ನಡೆಸಿದ್ದು, ಶೈಕ್ಷಣಿಕ ವ್ಯವವಸ್ಥೆಯಲ್ಲಿ ಸಮಾನತೆಯ ಪ್ರತೀಕವಾಗಿ ಸಮವಸ್ತ್ರ ಕಡ್ಡಾಯಗೊಳಿಸುವ ನಿಲುವನ್ನೇ ಪ್ರತಿಪಾದಿಸುವ ನಿರ್ಧಾರಕ್ಕೆ ಸರ್ಕಾರ ಬಂದಿದೆ.

ಇದನ್ನೂ ಓದಿ: ಸರ್ಕಾರಿ ಶಾಲೆಗಳಲ್ಲಿ ನಿಗದಿಪಡಿಸಿದ ಸಮವಸ್ತ್ರ ಬಳಕೆ ಕಡ್ಡಾಯಗೊಳಿಸಿ ಸರ್ಕಾರದ ಖಡಕ್​ ಆದೇಶ

ಅದರಂತೆ ನಿನ್ನೆಯೇ ರಾಜ್ಯಾದ್ಯಂತ ಎಲ್ಲ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಸಮವಸ್ತ್ರ ಕಡ್ಡಾಯದ ಅಗತ್ಯತೆ ಬಗ್ಗೆ ಸರ್ಕಾರ ತನ್ನ ನಿಲುವನ್ನು ಹೈಕೋರ್ಟ್​ಗೆ ತಿಳಿಸಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.