ETV Bharat / city

ಬಿಜೆಪಿ ಸರ್ಕಾರಕ್ಕೆ ನೂರು ದಿನದ ಸಂಭ್ರಮ: ಪ್ರತಿಪಕ್ಷಗಳಿಗೆ ಆಹಾರವಾಗುತ್ತಾ ಬಿಎಸ್​ವೈ ಆಡಿಯೋ?

ಬಿಎಸ್​ವೈ ಅವರ ಆಡಿಯೋ ಸೋರಿಕೆಯನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡಿರುವ ಜೆಡಿಎಸ್ ಹಾಗೂ ಕಾಂಗ್ರೆಸ್, ಸುಪ್ರೀಂಕೋರ್ಟ್ ಮೊರೆ ಹೋಗಲು ಮುಂದಾಗಿವೆ. ಅನರ್ಹ ಶಾಸಕರ ಕುರಿತು ಯಡಿಯೂರಪ್ಪನವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋವನ್ನು ಸೋಮವಾರ ಸುಪ್ರೀಂಕೋರ್ಟ್​ಗೆ ಸಾಕ್ಷಿಯಾಗಿ ನೀಡಲಿದ್ದೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಹ ಹೇಳಿಕೆ ನೀಡಿರುವುದು ಬಿಎಸ್​ವೈಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಪ್ರತಿಪಕ್ಷಗಳಿಗೆ ಆಹಾರವಾಗುತ್ತಾ ಬಿಎಸ್​ವೈ ಆಡಿಯೋ?
author img

By

Published : Nov 2, 2019, 6:48 PM IST

ಬೆಂಗಳೂರು: ಒಂದೆಡೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೂರು ದಿನದ ಸಂಭ್ರಮ. ಇನ್ನೊಂದೆಡೆ ಉಪ ಚುನಾವಣೆ ಹತ್ತಿರವಾಗುತ್ತಿರುವ ವೇಳೆಯಲ್ಲೇ ಯಡಿಯೂರಪ್ಪನವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದೀಗ ಪ್ರತಿಪಕ್ಷಗಳಿಗೆ ಆಹಾರವಾಗಿದೆ.

ಬಿಎಸ್​ವೈ ಅವರ ಆಡಿಯೋ ಸೋರಿಕೆಯನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡಿರುವ ಜೆಡಿಎಸ್ ಹಾಗೂ ಕಾಂಗ್ರೆಸ್, ಸುಪ್ರೀಂಕೋರ್ಟ್ ಮೊರೆ ಹೋಗಲು ಮುಂದಾಗಿವೆ.
ಅನರ್ಹ ಶಾಸಕರ ಕುರಿತು ಮಾತನಾಡಿರುವ ಯಡಿಯೂರಪ್ಪನವರ ಆಡಿಯೋವನ್ನು ಸೋಮವಾರ ಸುಪ್ರೀಂಕೋರ್ಟ್​ಗೆ ಸಾಕ್ಷಿಯಾಗಿ ನೀಡಲಿದ್ದೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಹ ಹೇಳಿಕೆ ನೀಡಿರುವುದು ಬಿಎಸ್​ವೈಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಮುಂದಿನ ವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆಯ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದ್ದು, ಆಡಿಯೋವನ್ನು ಸಾಕ್ಷಿಯನ್ನಾಗಿ ಪರಿಗಣಿಸಬೇಕೆಂದು ಸುಪ್ರೀಂಕೋರ್ಟ್​ಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಮನವಿ ಮಾಡಲು ತೀರ್ಮಾನಿಸಿವೆ.

ನೆರೆಯಿಂದಾಗಿ ಹಲವು ಜಿಲ್ಲೆಗಳ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಇದು ನೂರು ದಿನ ಪೂರೈಸಿರುವ ಬಿಜೆಪಿ ಸರ್ಕಾರಕ್ಕೆ ದೊಡ್ಡ ಪೆಟ್ಟು ನೀಡಿದೆ. ಇದನ್ನೇ ಅಸ್ತ್ರವಾಗಿ ಬಳಸಿಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪ್ರವಾಸ ಮಾಡಿ ಜನರ ಸಮಸ್ಯೆಗಳನ್ನು ಆಲಿಸಿ ಸರ್ಕಾರಕ್ಕೆ ಪರೋಕ್ಷವಾಗಿ ಮಾತಿನ ಏಟು ಕೊಡುತ್ತಿದ್ದಾರೆ. ರಾಜ್ಯ ಸರ್ಕಾರ ಮಾಡಿರುವ ಪರಿಹಾರ ಕಾರ್ಯ ಜಾಹೀರಾತಿನಲ್ಲಿ ಕಾಣುತ್ತಿದೆಯೇ ಹೊರತು ವಾಸ್ತವವಾಗಿ ಸಮಾಧಾನ ತಂದಿಲ್ಲ. ಜನರ ಬದುಕು ಸಂಕಷ್ಟದಲ್ಲಿದೆ. ನೆರೆ ಸಂತ್ರಸ್ತರ ಪುನರ್ವಸತಿ ಕಾರ್ಯ ತುರ್ತಾಗಿ ನಡೆಯಬೇಕಿದೆ ಎಂದಿದ್ದಾರೆ.

ಬಿಜೆಪಿ ಸರ್ಕಾರ ಕಳೆದ ನೂರು ದಿನಗಳಲ್ಲಿ ಯಾವ ಯಾವ ಇಲಾಖೆಗೆ ಎಷ್ಟು ಹಣ ಬಿಡುಗಡೆ ಮಾಡಿದೆ ಎಂಬುದನ್ನು ಬಹಿರಂಗಪಡಿಸಬೇಕೆಂದು ಹೆಚ್​ಡಿಕೆ ಒತ್ತಾಯಿಸಿದ್ದಾರೆ.

ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಕೆಲ ದಿನಗಳ ಹಿಂದೆ ಪ್ರತಿಭಟನೆ ಸಹ ನಡೆಸಿತ್ತು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗಿತ್ತು. ಇನ್ನು ಹೆಚ್.ಡಿ.ಕುಮಾರಸ್ವಾಮಿ ಸದನದ ಒಳಗೆ ಸರ್ಕಾರದ ವಿಫಲತೆ ಬಿಡಿಸಿಟ್ಟು ಕೆಲವು ಸಲಹೆಗಳನ್ನೂ ನೀಡಿದ್ದರು.

ಸರ್ಕಾರ ಬೀಳಿಸಲು ಮುಂದಾಗುವುದಿಲ್ಲವೆಂದು ಹೇಳಿರುವ ಕುಮಾರಸ್ವಾಮಿ, ತಮ್ಮದೇ ಶೈಲಿಯಲ್ಲಿ ನೂರು ದಿನ ಪೂರೈಸಿರುವ ಬಿಜೆಪಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

Intro:ಬೆಂಗಳೂರು : ಒಂದೆಡೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೂರು ದಿನದ ಸಂಭ್ರಮ. ಇನ್ನೊಂದೆಡೆ ಉಪಚುನಾವಣೆ ಹತ್ತಿರವಾಗುತ್ತಿರುವ ವೇಳೆಯಲ್ಲೇ ಯಡಿಯೂರಪ್ಪನವರು ಮಾಡಿಕೊಂಡಿರುವ ಎಡವಟ್ಟು ಪ್ರತಿಪಕ್ಷಗಳಿಗೆ ಆಹಾರವಾಗಿದೆ. Body:ಬಿಎಸ್ ವೈ ಅವರ ಆಡಿಯೋ ಸೋರಿಕೆಯನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೊರೆ ಹೋಗಲು ಮುಂದಾಗಿವೆ.
ಅನರ್ಹ ಶಾಸಕರ ಕುರಿತು ಮಾತನಾಡಿರುವ ಯಡಿಯೂರಪ್ಪನವರ ಆಡಿಯೋವನ್ನು ಸೋಮವಾರ ಸುಪ್ರೀಂಕೋರ್ಟ್ ಗೆ ಸಾಕ್ಷಿಯಾಗಿ ನೀಡಲಿದ್ದೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಇದರ ಬೆನ್ನಲ್ಲೇ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಹ ಹೇಳಿಕೆ ನೀಡಿರುವುದು ಬಿಎಸ್ ವೈ ಗೆ ನುಂಗಲಾರದ ತುತ್ತಾಗಿದೆ.
ಮುಂದಿನವಾರ ಅನರ್ಹ ಶಾಸಕರ ಅರ್ಜಿ ವಿಚಾರಣೆಯ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದ್ದು, ಆಡಿಯೋವನ್ನು ಸಾಕ್ಷಿಯನ್ನಾಗಿ ಪರಿಗಣಿಸಬೇಕೆಂದು ಸುಪ್ರೀಂಕೋರ್ಟ್ ಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಮನವಿ ಮಾಡಲು ತೀರ್ಮಾನಿಸಿವೆ.
ನೆರೆಯಿಂದಾಗಿ ಹಲವು ಜಿಲ್ಲೆಗಳ ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಇದು ನೂರು ದಿನಗಳ ಬಿಜೆಪಿ ಸರ್ಕಾರಕ್ಕೆ ದೊಡ್ಡಪೆಟ್ಟು ನೀಡಿದೆ. ಇದನ್ನೇ ಅಸ್ತ್ರವಾಗಿ ಬಳಸಿಕೊಂಡಿರುವ ಹೆಚ್.ಡಿ.ಕುಮಾರಸ್ವಾಮಿ ಅವರು, ಪ್ರವಾಹಪೀಡಿತ ಪ್ರದೇಶಗಳಲ್ಲಿ ಪ್ರವಾಸ ಮಾಡಿ ಜನರ ಸಮಸ್ಯೆಗಳನ್ನು ಆಲಿಸಿ ಸರ್ಕಾರಕ್ಕೆ ಪರೋಕ್ಷವಾಗಿ ಮಾತಿನ ಏಟು ಕೊಡುತ್ತಿದ್ದಾರೆ. ರಾಜ್ಯ ಸರ್ಕಾರ ಮಾಡಿರುವ ಪರಿಹಾರ ಕಾರ್ಯ ಜಾಹೀರಾತಿನಲ್ಲಿ ಕಾಣುತ್ತಿದೆಯೇ ಹೊರತು ವಾಸ್ತವವಾಗಿ ಸಮಾಧಾನ ತಂದಿಲ್ಲ. ಜನರ ಬದುಕು ಸಂಕಷ್ಟದಲ್ಲಿದೆ. ನೆರೆ ಸಂತ್ರಸ್ತರ ಪುನರ್ವಸತಿ ಕಾರ್ಯ ತುರ್ತಾಗಿ ನಡೆಯಬೇಕೆಂದಿದ್ದಾರೆ.
ಬಿಜೆಪಿ ಸರ್ಕಾರ ಕಳೆದ ನೂರು ದಿನಗಳಲ್ಲಿ ಯಾವ ಯಾವ ಇಲಾಖೆಗೆ ಎಷ್ಟು ಹಣ ಬಿಡುಗಡೆ ಮಾಡಿದೆ ಎಂಬುದನ್ನು ಬಹಿರಂಗಪಡಿಸಬೇಕೆಂದು ಹೆಚ್ ಡಿಕೆ ಒತ್ತಾಯಿಸಿದ್ದಾರೆ.
ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಫಲ ಆಗಿವೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೇಲಸ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಕೆಲ ದಿನಗಳ ಹಿಂದೆ ಪ್ರತಿಭಟನೆ ಸಹ ನಡೆಸಿತ್ತು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಮಾಡುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗಿತ್ತು. ಇನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ಸದನದ ಒಳಗೆ ಸರ್ಕಾರದ ವಿಫಲತೆಗಳನ್ನು ಬಿಡಿಸಿಟ್ಟು ಕೆಲವು ಸಲಹೆಗಳನ್ನೂ ಸಹ ನೀಡಿದ್ದರು.
ಸರ್ಕಾರ ಬೀಳಿಸಲು ಮುಂದಾಗುವುದಿಲ್ಲವೆಂದು ಹೇಳಿರುವ ಕುಮಾರಸ್ವಾಮಿ ಅವರು, ತಮ್ಮದೇ ಶೈಲಿಯಲ್ಲಿ ನೂರುದಿನ ಪೂರೈಸಿರುವ ಬಿಜೆಪಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.