ETV Bharat / city

ಯುವಕರನ್ನು ಸೆಳೆಯಲು ಐಸಿಸ್‌ ಸಂಚು: ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಸಿದ ಎನ್​ಐಎ - ದೋಷಾರೋಷಣಾ ಪಟ್ಟಿ

ಇಸ್ಲಾಮಿಕ್‌ ಸ್ಟೇಟ್‌ ಆಫ್‌ ಇರಾಕ್‌ ಆ್ಯಂಡ್‌ ಸಿರಿಯಾವು ಭಾರತದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಯುವಕರನ್ನು ಸೆಳೆಯಲು ಪ್ರಯತ್ನಿಸಿದೆ ಎಂಬ ವಿಚಾರವನ್ನು ರಾಷ್ಟ್ರೀಯ ತನಿಖಾ ದಳ ತನ್ನ ದೋಷಾರೋಷಣಾ ಪಟ್ಟಿಯಲ್ಲಿ ತಿಳಿಸಿದೆ.

ಉಗ್ರ ಚಟುವಟಿಕೆಗೆ ಯುವಕರನ್ನು ಸೆಳೆಯಲು ಐಸಿಸ್‌ ಸಂಚು

author img

By

Published : May 17, 2022, 4:08 PM IST

ಬೆಂಗಳೂರು: ರಾಷ್ಟ್ರೀಯ ಪೌರತ್ವ ನೋಂದಣಿ ಹಾಗೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಯುವಕರನ್ನು ಐಸಿಸ್‌ ಉಗ್ರ ಸಂಘಟನೆ ಪರ ಕೆಲಸ ಮಾಡುವಂತೆ ಸೆಳೆಯಲು ಪ್ರಯತ್ನಿಸಿತ್ತು ಎಂದು ರಾಷ್ಟ್ರೀಯ ತನಿಖಾ ದಳ(ಎನ್ಐಎ) ನಗರದ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪಣೆಯಲ್ಲಿ ತಿಳಿಸಿದೆ ಎನ್ನಲಾಗ್ತಿದೆ.

ರಾಜ್ಯದಲ್ಲಿ ಐಸಿಸ್‌ (ಇಸ್ಲಾಮಿಕ್‌ ಸ್ಟೇಟ್‌ ಆಫ್‌ ಇರಾಕ್‌ ಅಂಡ್‌ ಸಿರಿಯಾ) ಉಗ್ರ ಚಟುವಟಿಕೆಗಳನ್ನು ನಡೆಸುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಈ ಕುರಿತಂತೆ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ.

ಎನ್ಐಎ ದೋಷಾರೋಪಣೆ ವಿವರ: ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಹಮ್ಮದ್‌ ತಕ್ವೀರ್‌ ಅಹ್ಮದ್‌ ಸೇರಿದಂತೆ ನಾಲ್ವರು ಆರೋಪಿಗಳನ್ನು ಎನ್‌ಐಎ ಬಂಧಿಸಿದೆ. ವಿಚಾರಣೆ ವೇಳೆ ಅವರ ಇಮೇಲ್‌, ಸಾಮಾಜಿಕ ಜಾಲತಾಣಗಳ ದತ್ತಾಂಶಗಳನ್ನು ಪರಿಶೀಲನೆ ನಡೆಸಿದಾಗ ಎನ್‌ಆರ್‌ಸಿ, ಸಿಎಎ ವಿರುದ್ಧದ ಹೋರಾಟಗಳಲ್ಲಿ ಭಾಗವಹಿಸುವ ಯುವಕರನ್ನು ಐಸಿಸ್ ಉಗ್ರ ಸಂಘಟನೆಗೆ ಸೆಳೆಯಲು ಯತ್ನಿಸಿತ್ತು ಬೆಳಕಿಗೆ ಬಂದಿದೆ.

ಮಹಮ್ಮದ್‌ ತಕ್ವೀರ್‌ ಹಾಗೂ ತಂಡ ಐಸಿಸ್‌ ಪರವಾಗಿ ರಾಜ್ಯದಲ್ಲಿ ಕೆಲಸ ಮಾಡಿದ್ದು, ಧರ್ಮದ ಹೆಸರಿನಲ್ಲಿ ನಡೆಸುತ್ತಿದ್ದ ಸಭೆಗಳಲ್ಲಿ ಭಾಗಿಯಾಗುತ್ತಿದ್ದ ಯುವಕರನ್ನು ಐಸಿಸ್‌ ಸೇರಲು ಪ್ರೇರೇಪಿಸಲಾಗುತ್ತಿತ್ತು. ಐಸಿಸ್‌ಗೆ ದೇಣಿಗೆ ಸಂಗ್ರಹ ಮಾಡುವ ಕಾಯಕದಲ್ಲಿ ತೊಡಗಿಸಿಕೊಂಡ ಹಲವು ಯುವಕರನ್ನು ಟರ್ಕಿ ಗಡಿಯ ಮೂಲಕ ಐಸಿಸ್‌ ಸೇರಲು ಸಿರಿಯಾಗೆ ಕಳುಹಿಸಿಕೊಡಲಾಗಿದೆ. 2019ರಲ್ಲಿ ಕೇಂದ್ರ ಸರ್ಕಾರದ ಎನ್‌ಆರ್‌ಸಿ, ಸಿಎಎ ಜಾರಿ ವಿರೋಧಿಸಿ ಹೋರಾಟಗಳು ನಡೆದ ವೇಳೆ ಇಲ್ಲಿ ಭಾಗಿಯಾಗಿದ್ದ ಯುವಕರನ್ನು ಐಸಿಸ್ ಸೇರುವಂತೆ ಪ್ರೇರೇಪಿಸಲಾಗಿತ್ತು ಎಂದು ಎನ್‌ಐಎ ದೋಷಾರೋಪಣೆಯಲ್ಲಿ ವಿವರಿಸಿದೆ.

ಇದನ್ನೂ ಓದಿ: ಮೌಂಟ್​ ಎವರೆಸ್ಟ್​ ಏರಿದ ತೆಲಂಗಾಣದ 24 ವರ್ಷದ ಯುವತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.