ETV Bharat / city

ಪೋಕ್ಸೋ ಪ್ರಕರಣಗಳ ಆರೋಪಿಗಳಿಗೆ ಜಾಮೀನು ನೀಡುವ ಮುನ್ನ ಸಂತ್ರಸ್ತರ ವಾದ ಆಲಿಸುವುದು ಕಡ್ಡಾಯ : ಹೈಕೋರ್ಟ್ ಆದೇಶ - ಪೋಕ್ಸೋ ಪ್ರಕರಣಗಳ ಆರೋಪಿಗಳಿಗೆ ಜಾಮೀನು ನೀಡುವ ಮುನ್ನ ಸಂತ್ರಸ್ತರ ವಾದ ಆಲಿಸುವುದು ಕಡ್ಡಾಯ: ಹೈಕೋರ್ಟ್ ಆದೇಶ

ಪೋಕ್ಸೋ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಆರೋಪಿಗೆ ಜಾಮೀನು ನೀಡುವ ಮುನ್ನ ಈ ಕುರಿತು ಸಂತ್ರಸ್ತ ಮಗುವಿನ ಪೋಷಕರಿಗೆ ಮಾಹಿತಿ ನೀಡಬೇಕು ಹಾಗೂ ಅವರ ವಾದವನ್ನು ಆಲಿಸಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ..

high court statement on pocso act
ಪೋಕ್ಸೋ ಪ್ರಕರಣಗಳ ಆರೋಪಿಗಳಿಗೆ ಜಾಮೀನು ನೀಡುವ ಮುನ್ನ ಸಂತ್ರಸ್ತರ ವಾದ ಆಲಿಸುವುದು ಕಡ್ಡಾಯ: ಹೈಕೋರ್ಟ್ ಆದೇಶ
author img

By

Published : Mar 14, 2022, 3:09 PM IST

ಬೆಂಗಳೂರು : ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ-2012ರಡಿ ದಾಖಲಾಗುವ ಪ್ರಕರಣಗಳಲ್ಲಿ ಆರೋಪಿಗೆ ಜಾಮೀನು ನೀಡುವ ಮುನ್ನ ಈ ಕುರಿತು ಸಂತ್ರಸ್ತ ಮಗುವಿನ ಪೋಷಕರಿಗೆ ಮಾಹಿತಿ ನೀಡಬೇಕು ಹಾಗೂ ಅವರ ವಾದವನ್ನು ಆಲಿಸಬೇಕು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.

ಈ ಕುರಿತಂತೆ ಬೆಂಗಳೂರಿನ ಮೂವರು ಸಂತ್ರಸ್ತ ಪೋಷಕರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ಧ ವಿಭಾಗೀಯ ಪೀಠ, ಸಂತ್ರಸ್ತ ಮಕ್ಕಳ ರಕ್ಷಣೆ ನಿಟ್ಟಿನಲ್ಲಿ ಹಲವು ನಿರ್ದೇಶನಗಳನ್ನು ನೀಡಿದೆ.

ಪೀಠ ತನ್ನ ಸರಣಿ ನಿರ್ದೇಶನಗಳಲ್ಲಿ, ಪೋಕ್ಸೋ ಪ್ರಕರಣಗಳಲ್ಲಿ ಆರೋಪ ಸಾಬೀತು ಪಡಿಸುವುದು ಸರ್ಕಾರದ ಹೊಣೆಗಾರಿಕೆಯಾಗಿದೆ. ಆದರೆ, ಅಭಿಯೋಜನಾ ವ್ಯವಸ್ಥೆ ಈಗಾಗಲೇ ಅಧಿಕ ಭಾರದಿಂದ ನಲುಗುತ್ತಿದೆ. ಸಂತ್ರಸ್ತ ಮಗು ಹಾಗೂ ದೂರುದಾರರು ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಅಭಿಯೋಜಕರಿಗೆ ಅಗತ್ಯ ನೆರವು ನೀಡಬೇಕಾಗುತ್ತದೆ.

ಆದರೆ, ಸಂತ್ರಸ್ತರಿಗೆ ಆರೋಪಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದಾಗ ಈ ಬಗ್ಗೆ ಮಾಹಿತಿಯೇ ಇರುವುದಿಲ್ಲ. ಹೀಗಾಗಿ, ವಿಶೇಷ ನ್ಯಾಯಾಲಯಗಳು ಪೋಕ್ಸೋ ಪ್ರಕರಣಗಳಲ್ಲಿ ಆರೋಪಿ ಜಾಮೀನು ಕೋರಿ ಅರ್ಜಿ ಸಲ್ಲಿಸುವಾಗ ಸಂತ್ರಸ್ತ ಕುಟುಂಬಕ್ಕೆ, ಪೋಷಕರಿಗೆ ಅಥವಾ ಅವರ ವಕೀಲರಿಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಹೈಕೋರ್ಟ್ ನಿರ್ದೇಶನಗಳು :

* ಪೋಕ್ಸೋ ಪ್ರಕರಣದಲ್ಲಿ ಆರೋಪಿ ಜಾಮೀನು ಕೋರಿ ಅರ್ಜಿ ಸಲ್ಲಿಸುವಾಗ ತನಿಖಾಧಿಕಾರಿಯು ಸಂತ್ರಸ್ತರ ಕುಟುಂಬ, ಪೋಷಕರು ಅಥವಾ ಪಾಲಕರು ಹಾಗೂ ಅಭಿಯೋಜಕರಿಗೆ ಮಾಹಿತಿ ನೀಡಬೇಕು.

* ಸರ್ಕಾರಿ ಅಭಿಯೋಜಕರು ಜಾಮೀನು ಅರ್ಜಿಗೆ ತಕ್ಷಣವೇ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬೇಕು. ಈ ವೇಳೆ ಅಭಿಯೋಜಕರಿಗೆ ತನಿಖಾಧಿಕಾರಿ ಹಾಗೂ ಸಂತ್ರಸ್ತರ ಕುಟುಂಬದವರು ಅಗತ್ಯ ಸಹಕಾರ ಹಾಗೂ ಮಾಹಿತಿ ನೀಡಬೇಕು.

* ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ತನಿಖಾಧಿಕಾರಿಯ ಸಹಾಯ ಪಡೆಯಬೇಕು. ದೊರಕದಿದ್ದರೆ ಆ ಬಗ್ಗೆ ಸೂಕ್ತ ಲಿಖಿತ ಕಾರಣಗಳೊಂದಿಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಬೇಕು.

* ಒಂದು ವೇಳೆ ಇಂತಹ ಪ್ರಕರಣದ ಆರೋಪಿ ಸಂತ್ರಸ್ತ ಕುಟುಂಬಕ್ಕೆ ಪರಿಚಯಸ್ಥ ಆಗಿದ್ದರೆ ಜಾಮೀನಿಗೆ ಸಲ್ಲಿಸಿರುವ ಆಕ್ಷೇಪಣೆ ದಾಖಲೆಗಳನ್ನು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ)ಗಳಿಗೂ ಸಲ್ಲಿಸಬೇಕು.

* ನಂತರ ಸಂಬಂಧಿಸಿದ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಸಂತ್ರಸ್ತರ ಕುಟುಂಬದವರಿಗೆ ನೋಟಿಸ್‌ ಜಾರಿಯಾಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಬೇಕು. ಹಾಗೂ ಸಂತ್ರಸ್ತರ ವಾದವನ್ನು ಆಲಿಸಬೇಕು.

* ಒಂದು ವೇಳೆ ನೋಟಿಸ್ ಜಾರಿಯಾದ ನಂತರವೂ ಸಂತ್ರಸ್ತರ ಕಡೆಯಿಂದ ಯಾರೂ ಹಾಜರಾಗದಿದ್ದರೆ ಆಗ ವಿಶೇಷ ನ್ಯಾಯಾಲಯ ತನ್ನ ವಿಚಾರಣಾ ಪ್ರಕ್ರಿಯೆ ಮುಂದುವರಿಸಬಹುದು ಎಂದು ಹೇಳಿದೆ.

ಓದಿ : ನವೀನ್ ಮೃತದೇಹ ತರುವ ಬಗ್ಗೆ ದಿಲ್ಲಿ ಅಧಿಕಾರಿಗಳ ಜೊತೆ ಮಾತಾಡಿ ಸದನಕ್ಕೆ ಮಾಹಿತಿ ಕೊಡಿ: ಸರ್ಕಾರಕ್ಕೆ ಸಭಾಪತಿ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.