ಬೆಂಗಳೂರು: ತೆರಿಗೆ ವಂಚನೆ ಆರೋಪದಡಿ ನಗರದ ಆಭರಣದಂಗಡಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿರುವ ಸಿರಿವೈಭವ್ ಜ್ಯೂವೆಲ್ಲರಿ ಅಂಗಡಿ ಮೇಲೆ ಇಂದು ಬೆಳ್ಳಂಬೆಳ್ಳಗೆ ದಾಳಿ ನಡೆಸಲಾಗಿದೆ. ತೆರಿಗೆ ವಂಚನೆ, ಬಿಲ್ಗಳಲ್ಲಿ ಅಕ್ರಮ ಸಂಬಂಧ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
IT ride on Ramojigowda : ಮತ್ತೊಂದೆಡೆ, ಕಾಂಗ್ರೆಸ್ ಮುಖಂಡ ರಾಮೋಜಿಗೌಡ ಎಂಬುವರ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಎಲೆಕ್ಟ್ರಾನಿಕ್ ಸಿಟಿ, ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ರಾಮೋಜಿಗೌಡ ಮನೆ, ಕಚೇರಿ ಮೇಲೆ ಐಟಿ ದಾಳಿ ನಡೆಸಲಾಗಿದೆ. ಬಿಎಸ್ಆರ್ ಡೆವಲಪರ್ಸ್ ಕಂಪನಿ ಮಾಲೀಕರಾಗಿರುವ ರಾಮೋಜಿಗೌಡ ಬೆಂಗಳೂರು ಪದವೀಧರ ಕ್ಷೇತ್ರದಿಂದ ಎಂಎಲ್ಸಿ ಚುನಾವಣೆಗೆ ಸ್ಪರ್ಧಿಸಿದ್ದರು.