ETV Bharat / city

ದೆಹಲಿಗೆ ಜಗದೀಶ್‌ ಶೆಟ್ಟರ್ ದೌಡು.. ಬಿಜೆಪಿ ಪಾಳಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ.. - ಕರ್ನಾಟಕ ಬಿಟ್ ಕಾಯಿನ್ ಹಗರಣ

ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಯಿಂದ ವಾಪಸ್ಸಾಗುತ್ತಿದ್ದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್( Jagadesh Shetter) ಅವರು ಹುಬ್ಬಳ್ಳಿಯಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ರಾಜ್ಯದಲ್ಲಿ ಬಿಟ್ ಕಾಯಿನ್ ಪ್ರಕರಣ (Bitcoin scam) ಸರ್ಕಾರಕ್ಕೆ ಮುಜುಗರವನ್ನುಂಟು ಮಾಡುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಮಧ್ಯೆ ಹೈಕಮಾಂಡ್ ಜೊತೆ ನಾಯಕರ ಭೇಟಿ ತೀವ್ರ ಸಂಚಲನ ಮೂಡಿಸಿದೆ..

shettar
shettar
author img

By

Published : Nov 12, 2021, 4:44 PM IST

ಹುಬ್ಬಳ್ಳಿ/ಬೆಂಗಳೂರು : ಬಿಟ್ ಕಾಯಿನ್ ಹಗರಣ (Bitcoin Scam) ಸದ್ದು ಮಾಡುತ್ತಿರುವ ಮಧ್ಯದಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadeesh Shettar) ದಿಢೀರ್ ದೆಹಲಿಗೆ ತೆರಳಿರುವುದು ರಾಜ್ಯ ಬಿಜೆಪಿ ಪಾಳಯದಲ್ಲಿ ಮಿಂಚಿನ ಸಂಚಲನ ಮೂಡಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ನವದೆಹಲಿಯಿಂದ ವಾಪಸ್ಸಾಗುತ್ತಿದ್ದಂತೆ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಿದ್ದಾರೆ.

ಹುಬ್ಬಳ್ಳಿ-ಗಾಜಿಯಾಬಾದ್ ವಿಮಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಮಾಜಿ ಸಿಎಂ ತೆರಳಿದ್ದಾರೆ. ಹೈಕಮಾಂಡ್ ಬುಲಾವ್ ಹಿನ್ನೆಲೆ ದೆಹಲಿಗೆ ಜಗದೀಶ್ ಶೆಟ್ಟರ್ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗುತ್ತಿದೆ.

ಬಿಟ್ ಕಾಯಿನ್ ಪ್ರಕರಣದಲ್ಲಿ (Bitcoin issue) ಬೊಮ್ಮಾಯಿ ಹೆಸರು ಸೇರಿಸಿ ಕಾಂಗ್ರೆಸ್ ಆರೋಪ ಮಾಡುತ್ತಿದೆ. ಇದರಿಂದಾಗಿ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದೆ. ಯಡಿಯೂರಪ್ಪ ನಾಯಕತ್ವ ಬದಲಾದ ನಂತರ ಬೊಮ್ಮಾಯಿ ನಾಯಕತ್ವ ಒಪ್ಪದ ಮೂಲ ಬಿಜೆಪಿಗರು ಬೊಮ್ಮಾಯಿ ವಿರುದ್ಧ ಬಂಡೆದ್ದಿದ್ದಾರೆ ಎನ್ನಲಾಗಿದೆ. ಹಾಗಾಗಿಯೇ, ಬೊಮ್ಮಾಯಿ ದೆಹಲಿಗೆ ಹೋಗಿ ವರಿಷ್ಠರಿಗೆ ಬಿಟ್ ಕಾಯಿನ್ ಪ್ರಕರಣ ಮಾಹಿತಿ ನೀಡಿ ಬಂದಿದ್ದಾರೆ ಎನ್ನಲಾಗಿದೆ.

ಸಿಎಂ ಪ್ರವಾಸದ ನಂತರ ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಆಗಲಿದೆ ಎನ್ನುವ ಮಾತುಗಳು ಮತ್ತೆ ಚರ್ಚೆಗೆ ಬಂದಿವೆ. ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಸದ್ಯದಲ್ಲೇ ಬರಲಿದ್ದಾರೆ ಎಂದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜಗದೀಶ್ ಶೆಟ್ಟರ್ ದೆಹಲಿಗೆ ತೆರಳಿರುವುದು ರಾಜ್ಯ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ.

(ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಬೊಮ್ಮಾಯಿ; ಬಿಟ್ ಕಾಯಿನ್ ಹಗರಣದ ಕುರಿತು ನಮೋಗೆ ಮಾಹಿತಿ?)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.