ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮಾಜಿ ಸಚಿವ ಬಿ ಝಡ್ ಜಮೀರ್ ಅಹಮದ್ ಖಾನ್ ನೀಡಿದ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ.
ಕಾಂಗ್ರೆಸ್ ಪಕ್ಷದ ವಕ್ತಾರ ಸಂಕೇತ ಏಣಗಿ ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಇದು ಜಮೀರ್ ಅವರ ವೈಯಕ್ತಿಕ ಹೇಳಿಕೆ ಆಗಿದೆ. ಪಕ್ಷದ ಹೇಳಿಕೆ ಅಲ್ಲ. ಈ ಹಿನ್ನೆಲೆ ಜಮೀರ್ ಅವರ ಹೇಳಿಕೆಗೆ ಪಕ್ಷ ಯಾವುದೇ ಸ್ಪಷ್ಟನೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಜಮೀರ್ ಅಹಮದ್ ಉರ್ದು ಭಾಷೆಯಲ್ಲಿ ಅಗೌರವಯುತವಾಗಿ ಪದ ಬಳಸಿ ಅವಹೇಳನ ಮಾಡಿದ್ದರು. ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ. ಕುಮಾರಸ್ವಾಮಿ ಬಗ್ಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನಲ್ಲಿ ಅಪಾರ ಗೌರವವಿದೆ. ಜಮೀರ್ ನೀಡಿದ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಸಹ ಕಾಂಗ್ರೆಸ್ ತಿಳಿಸಿದೆ.
ಇದನ್ನೂ ಓದಿ .. ಮಾಜಿ ಸಚಿವ ಜಮೀರ್ ಅಹ್ಮದ್ ಅವರ ಮನೆ ಮುಂದೆ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ