ETV Bharat / city

ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ 125ನೇ ಜಯಂತಿ ಆಚರಣೆ: ಸಿಎಂ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ (ಜನವರಿ 23) ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಮೂಲಕ ಸಭೆ ನಡೆಸಿದ ಸಿಎಂ,‌ ಜಕ್ಕೂರಿನ ವೈಮಾನಿಕ ತರಬೇತಿ ಶಾಲೆಯ ಆವರಣದಲ್ಲಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಮಾಡಲು ನಿರ್ಧರಿಸಲಾಗಿದೆ ಎಂದರು.

ನೇತಾಜಿ ಸುಭಾಷ್ ಚಂದ್ರ ಬೋಸ್ 125ನೇ ಜಯಂತಿ
ನೇತಾಜಿ ಸುಭಾಷ್ ಚಂದ್ರ ಬೋಸ್ 125ನೇ ಜಯಂತಿ
author img

By

Published : Jan 18, 2022, 9:21 PM IST

ಬೆಂಗಳೂರು: ಅಪ್ರತಿಮ ದೇಶ ಭಕ್ತ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜೀವನ ಸಾಧನೆ ಸ್ಮರಣೀಯ ಹಾಗೂ ಯುವ ಜನರಿಗೆ ಪ್ರೇರಣೆ. ಹೀಗಾಗಿ ಅವರ 125ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ (ಜನವರಿ 23) ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಮೂಲಕ ಸಭೆ ನಡೆಸಿದ ಸಿಎಂ,‌ ಬೆಂಗಳೂರಿನ ಜಕ್ಕೂರಿನ ವೈಮಾನಿಕ ತರಬೇತಿ ಶಾಲೆಯ ಆವರಣದಲ್ಲಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಗೆ ಸಿದ್ಧತೆ ನಡೆದಿದೆ ಎಂದರು.

ಈ ಕಾರ್ಯಕ್ರಮದಲ್ಲಿ ನೂರು ಜನ ಎನ್​ಸಿಸಿ ಕೆಡೆಟ್ ಮತ್ತು ಕಮಾಂಡರ್​ಗಳು ಭಾಗಿಯಾಗಲಿದ್ದಾರೆ. ಕೇಂದ್ರ ಸಚಿವ ರಾಜೀವ್​ ಚಂದ್ರಶೇಖರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲು ನಿರ್ಧರಿಸಲಾಗಿದೆ. ಇದು ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತಿ. ಹೀಗಾಗಿ ರಾಜ್ಯದ ಎಲ್ಲಾ ಶಾಲೆ ಮತ್ತು ಕಾಲೇಜುಗಳಲ್ಲಿ ವರ್ಷವಿಡಿ ಸುಭಾಷ್ ಚಂದ್ರ ಬೋಸ್ ಅವರ ಕುರಿತಾದ ಕಾರ್ಯಕ್ರಮಗಳನ್ನು ಆಚರಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ವಿಶೇಷವಾದ ಹಾಗೂ ಅರ್ಥಪೂರ್ಣ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಕರ್ನಾಟಕ ಗೋವಾ ಎನ್ ಸಿಸಿ ನಿರ್ದೇಶನಾಲಯದ ಮುಖ್ಯಸ್ಥ ಏರ್ ಕಮಾಂಡರ್ ಬಿ ಎಸ್ ಕನ್ವರ್ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ:ಜೆಡಿಎಸ್‌ನ 'ಜನತಾ ಜಲಧಾರೆ' ಕಾರ್ಯಕ್ರಮ ಮುಂದೂಡಿಕೆ: ಹೆಚ್.ಡಿ.ಕುಮಾರಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.