ETV Bharat / city

ನಾಳೆಯಿಂದ ಜೆಡಿಎಸ್ 'ಜನತಾ ಜಲಧಾರೆ' ಆರಂಭ: ಒಟ್ಟು 94 ಕಡೆ ಜಲಸಂಗ್ರಹ - ಜೆಡಿಎಸ್ ಜನತಾ ಜಲಧಾರೆ

ಜೆಡಿಎಸ್‍ ಹಮ್ಮಿಕೊಂಡಿರುವ ಜನತಾ ಜಲಧಾರೆ-ಗಂಗಾ ರಥಯಾತ್ರೆಗೆ ನಾಳೆ ಚಾಲನೆ ಸಿಗಲಿದೆ.

janata jaladhare program begins from tomorrow
ನಾಳೆಯಿಂದ ಜನತಾ ಜಲಧಾರೆ ಆರಂಭ
author img

By

Published : Apr 15, 2022, 5:59 PM IST

ಬೆಂಗಳೂರು: ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಜಾರಿಗೆ ಸಂಕಲ್ಪ ಮಾಡಿ ಜೆಡಿಎಸ್‍ ಹಮ್ಮಿಕೊಂಡಿರುವ ಜನತಾ ಜಲಧಾರೆ-ಗಂಗಾ ರಥಯಾತ್ರೆಗೆ ನಾಳೆ ಚಾಲನೆ ಸಿಗಲಿದೆ. ರಾಜ್ಯದ 15 ಜೀವ ನದಿಗಳ ಪುಣ್ಯಜಲವನ್ನು ಕಲಶಕ್ಕೆ ತುಂಬಿಕೊಳ್ಳುವ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ 15 ಗಂಗಾರಥಗಳು ನಿಗದಿತ ಸ್ಥಳಗಳನ್ನು ತಲುಪಿದ್ದು, ಆಯಾ ಜಿಲ್ಲೆಗಳ ಪಕ್ಷದ ಅಧ್ಯಕ್ಷರು, ಶಾಸಕರು, ಕಾರ್ಯಕರ್ತರು ಅವುಗಳನ್ನು ಬರಮಾಡಿಕೊಂಡಿದ್ದಾರೆ.

ನಾಳೆ ಬೆಳಗ್ಗೆ 11 ಗಂಟೆಗೆ ವೇದ ಮಂತ್ರ ಘೋಷಣೆ, ಪೂಜೆ, ಮಂಗಳ ವಾದ್ಯಗಳ ಸದ್ದು, ಕಲಾ ತಂಡಗಳ ಮೆರವಣಿಗೆ, ಕಲಶ ಪೂಜೆ, ಪಕ್ಷದ ಕಾರ್ಯಕರ್ತೆಯರಿಂದ ಕಲಶ ಮೆರವಣಿಗೆ ಇತ್ಯಾದಿಗಳ ನಡುವೆ ಪುಣ್ಯಜಲವನ್ನು ಸಂಗ್ರಹ ಮಾಡಿಕೊಳ್ಳಲಾಗುತ್ತದೆ.

ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರು, ಮಂಡ್ಯ ಜಿಲ್ಲೆಯ ಕೃಷ್ಣರಾಜ ಸಾಗರದಲ್ಲಿ ಕಾವೇರಿ ಜಲ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದಲ್ಲಿ ಜಲಸಂಗ್ರಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಎಲ್ಲೆಲ್ಲಿ ಜಲ ಸಂಗ್ರಹ?: ಮಾಂಜ್ರಾ ನದಿಯಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್, ಭೀಮಾ ನದಿಯಲ್ಲಿ ನಾಗನಗೌಡ ಕಂದಕೂರ, ತುಂಗಭದ್ರಾ ಜಲಾಶಯದಲ್ಲಿ ವೆಂಕಟರಾವ್ ನಾಡಗೌಡ, ರಾಜಾ ವೆಂಕಟಪ್ಪ ನಾಯಕ, ಎನ್.ಎಂ.ನಬಿ, ಕೊಟ್ಟಿಗೆಹಾರ ಬಳಿಯ ಹೇಮಾವತಿ ನದಿಯಲ್ಲಿ ವಿಧಾನ ಪರಿಷತ್ ಸದಸ್ಯ ಭೋಜೆಗೌಡ, ಮಾಜಿ ಶಾಸಕ ವೈ ಎಸ್ ವಿ ದತ್ತಾ, ಕಾಳಿ ನದಿಯಲ್ಲಿ ಗಣಪಯ್ಯ ಹೆಗಡೆ, ಶಶಿ ಭೂಷಣ ಹೆಗಡೆ, ಯೋಗೇಶ್ ಶೆಟ್ಟಿ, ಸುಧಾಕರ್ ಶೆಟ್ಟಿ, ಸೌಪರ್ಣಿಕಾ ನದಿಯಲ್ಲಿ ಯೋಗೇಶ್ ಶೆಟ್ಟಿ, ತಲಕಾವೇರಿಯಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್, ಕಬಿನಿ ನದಿಯಲ್ಲಿ ಶಾಸಕರಾದ ಅಶ್ವಿನ್ ಕುಮಾರ್, ಮಂಜೇಗೌಡ ಹಾಗೂ ಚಿಕ್ಕಣ್ಣ, ಎತ್ತಿನಹೊಳೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಶಾಸಕರಾದ ಶಿವಲಿಂಗೇಗೌಡ, ಲಿಂಗೇಶ್ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ವಿಧುರಾಶ್ವತ್ಥದಲ್ಲಿ ನಿಖಿಲ್ ಕುಮಾರಸ್ವಾಮಿ, ಶಾಸಕರಾದ ಕೆ.ಎಂ. ಕೃಷ್ಣಾರೆಡ್ಡಿ, ಗೋವಿಂದ ರಾಜು ಅವರುಗಳು ಜಲ ಸಂಗ್ರಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಕಡಿಮೆ ವೆಚ್ಚದಲ್ಲಿ ಪರಿಸರ ಸ್ನೇಹಿ ಮಣ್ಣಿನ ಮನೆಗಳ ನಿರ್ಮಾಣ

ಒಟ್ಟು 94 ಕಡೆ ಜಲ ಸಂಗ್ರಹ: ಮೆ. 8ರವರೆಗೂ ನಡೆಯಲಿರುವ ಜಲಧಾರೆ ಕಾರ್ಯಕ್ರಮದಲ್ಲಿ ಒಟ್ಟು 94 ಕಡೆ ಜಲ ಸಂಗ್ರಹ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಪೂರ್ಣ ಬಹುಮತ ಸಿಕ್ಕಿದರೆ ರಾಜ್ಯದ ನೀರಾವರಿ ಯೋಜನೆಗಳನ್ನು ಐದೇ ವರ್ಷಗಳಲ್ಲಿ ಅನುಷ್ಟಾನಕ್ಕೆ ತರಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ರಾಜ್ಯದ 180ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಜಲಧಾರೆಯ ಗಂಗಾ ರಥಗಳು ಹಾದು ಹೋಗಲಿವೆ ಎಂದು ತಿಳಿಸಿದ್ದಾರೆ. ಇನ್ನೂ 15 ಕಡೆಗಳಲ್ಲಿ ನಾಯಕರೆಲ್ಲರೂ ಜಲ ಸಂಗ್ರಹ ಮಾಡುವ ನೇರ ದೃಶ್ಯಾವಳಿ ನೋಡಲು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೃಹತ್ ಡಿಜಿಟಲ್ ಪರದೆ ಅಳವಡಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.