ಬೆಂಗಳೂರು: ಮುಂದಿನ ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವನ್ನು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಂಘಟಿಸುವ ಸಲುವಾಗಿ ಸೋಮವಾರದಿಂದ ಒಂದು ವಾರದ ಕಾಲ ಜನತಾ ಪರ್ವ 1.O ಎರಡನೇ ಹಂತದ ಕಾರ್ಯಗಾರ 'ಜನತಾ ಸಂಗಮ' ಆರಂಭವಾಗಲಿದೆ.
ಈ ಕಾರ್ಯಾಗಾರ ಪಕ್ಷದ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ನಡೆಯಲಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಪಕ್ಷದ ಶಾಸಕರು, ಮಾಜಿ ಶಾಸಕರು ಸೇರಿದಂತೆ ಅನೇಕ ಹಿರಿಯ ನಾಯಕರು ಭಾಗವಹಿಸಲಿದ್ದಾರೆ. ಹಾಲಿ, ಮಾಜಿ ಶಾಸಕರು, ಪದಾಧಿಕಾರಿಗಳೂ ಪಾಲ್ಗೊಳ್ಳಲಿದ್ದು, ಮುಖ್ಯವಾಗಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಯಲಿದೆ.
ದಿನವೊಂದಕ್ಕೆ ಎರಡು ಜಿಲ್ಲೆಗಳನ್ನು ಒಳಗೊಂಡಂತೆ ಸಭೆಗಳನ್ನು ನಡೆಸಲಾಗುವುದು. ಮೊದಲ ದಿನ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಪ್ರತಿನಿಧಿಗಳ ಜೊತೆ ಸಮಾಲೋಚನೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿರುವ ಅಭ್ಯರ್ಥಿಗಳು ಹಾಗೂ ಮುಖಂಡರು, ಕಾರ್ಯಕರ್ತರ ನಡುವೆ ಸಮನ್ವಯತೆ ಸಾಧಿಸುವುದು ಈ ಕಾರ್ಯಾಗಾರದ ಬಹುಮುಖ್ಯ ಉದ್ದೇಶ.
ಕಾರ್ಯಾಗಾರಕ್ಕೆ ಭರದ ಸಿದ್ಧತೆ:
ನ.8ರಂದು ಚಿಕ್ಕಬಳ್ಳಾಪುರ-ಕೋಲಾರ, ನ.9ರಂದು ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ, ಬೀದರ್, ಯಾದಗಿರಿ.
ಕಲಬುರಗಿ ನ.10ರಂದು ಧಾರವಾಡ, ಹುಬ್ಬಳ್ಳಿ-ಧಾರವಾಡ ನಗರ, ಉತ್ತರ ಕನ್ನಡ, ಗದಗ, ಹಾವೇರಿ, ದಾವಣಗೆರೆ.
ನ.11ರಂದು ವಿಜಯಪುರ, ಬಾಗಲಕೋಟೆ, ದಕ್ಷಿಣ ಕನ್ನಡ, ಉಡುಪಿ, ಕೊಡಗು.
ನ.12ರಂದು ಚಾಮರಾಜನಗರ, ಮಂಡ್ಯ, ಮೈಸೂರು, ಮೈಸೂರು ನಗರ
ನ.13ರಂದು ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ತುಮಕೂರು
ನ.15ರಂದು ಬೆಳಗಾವಿ, ಚಿಕ್ಕೋಡಿ, ಹಾಸನಕ್ಕೆ ಸಂಬಂಧಪಟ್ಟ ಸಭೆಗಳು ನಡೆಯಲಿವೆ.