ETV Bharat / city

ಸ್ಥಳೀಯ ಮಟ್ಟದಲ್ಲಿ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿ : ಪಕ್ಷ ಸಂಘಟನೆಗೆ ಹೆಚ್​ಡಿಕೆ ಮಾರ್ಗದರ್ಶನ - ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

ಪಕ್ಷ ಸಂಘಟನೆ ಹಿನ್ನೆಲೆ ಜೆಡಿಎಸ್​ ನಡೆಸುತ್ತಿರುವ 'ಜನತಾ ಸಂಗಮ' ಕಾರ್ಯಾಗಾರ (jds janatha sangama workshop) ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಕಾರ್ಯಾಗಾರದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ (HD Kumaraswamy) ಶಾಸಕರು, ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಸ್ಥಳೀಯ ಮಟ್ಟದಲ್ಲಿ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿ ಪಕ್ಷ ಸಂಘಟನೆಗೆ ಮುಂದಾಗುವಂತೆ ಮಾರ್ಗದರ್ಶನ ನೀಡುತ್ತಿದ್ದಾರೆ..

jds-janatha-sangama-workshop
ಜನತಾ ಸಂಗಮ
author img

By

Published : Nov 12, 2021, 3:47 PM IST

ಬೆಂಗಳೂರು : ರಾಜ್ಯದಲ್ಲಿ ಪಕ್ಷ ಬಲವರ್ಧನೆ ಹಾಗೂ 2023ರ ಸಾರ್ವತ್ರಿಕ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಜೆಡಿಎಸ್​​ ನಡೆಸುತ್ತಿರುವ ಎರಡನೇ ಹಂತದ 'ಜನತಾ ಸಂಗಮ'ದ ಕಾರ್ಯಾಗಾರ (jds janatha sangama workshop) ಐದನೇ ದಿನಕ್ಕೆ ಕಾಲಿಟ್ಟಿದೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ (HD Kumaraswamy) ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಕಾರ್ಯಾಗಾರದಲ್ಲಿ ಇಂದು ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳ ಶಾಸಕರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದಾರೆ.

ಶಾಸಕರಾದ ಸಿ.ಎಸ್.ಪುಟ್ಟರಾಜು, ಎಂ. ಶ್ರೀನಿವಾಸ್, ಸುರೇಶ್‌ಗೌಡ, ಡಾ.ಕೆ. ಅನ್ನದಾನಿ, ವಿಧಾನಪರಿಷತ್ ಸದಸ್ಯರಾದ ಶ್ರೀಕಂಠೇಗೌಡ, ಮರಿತಿಬ್ಬೇಗೌಡ, ಅಪ್ಪಾಜಿಗೌಡ, ತಿಪ್ಪೇಸ್ವಾಮಿ ಸೇರಿದಂತೆ ಜಿಲ್ಲೆಗಳ ಅಧ್ಯಕ್ಷರು ಸಭೆಯಲ್ಲಿ ಪಾಲ್ಗೊಂಡಿದ್ದರು. ಮದ್ದೂರು ಶಾಸಕ ಡಿ.ಸಿ.‌ತಮ್ಮಣ್ಣ ಹಾಗೂ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ ಸಭೆಗೆ ಗೈರಾಗಿದ್ದರು.

ಎಲ್ಲ ಹಂತಗಳಲ್ಲೂ ಸಂಘಟನೆ: ಸಂಘಟನೆ ಬಲಕ್ಕೆ ಮುಂದಾಗಿರುವ ಹೆಚ್.ಡಿ.ಕೆ ಅವರು, ಜಿಲ್ಲಾಧ್ಯಕ್ಷರೊಂದಿಗೆ ನಿರಂತರ ಸಂಪರ್ಕ ಮಾಡಿ, ಸ್ಥಳೀಯ ಮಟ್ಟದಲ್ಲಿ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿ ಪಕ್ಷ ಸಂಘಟನೆಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ಅಲ್ಲದೆ ಪ್ರತಿಯೊಬ್ಬರಿಗೂ ಜವಾಬ್ದಾರಿ ಹಂಚಿಕೆ ಮಾಡಿ ಗಡುವನ್ನು ಕೂಡ ನಿಗದಿಪಡಿಸುತ್ತಿದ್ದಾರೆ.

ಎಲ್ಲ ಜಿಲ್ಲೆಗಳಲ್ಲೂ ಪಕ್ಷದ ಅಸ್ತಿತ್ವ ಇರಬೇಕು: ಬೆಂಗಳೂರಿನಲ್ಲಿ ಸಕ್ರಿಯವಾಗಿರುವಂತೆ ಪಕ್ಷದ ಘಟಕಗಳು ಪ್ರತಿ ಜಿಲ್ಲೆಯಲ್ಲೂ ಕಾರ್ಯ ನಿರ್ವಹಿಸಬೇಕು. ಅದಕ್ಕೆ ಬೇಕಾದ ಪೂರಕ ಸಿದ್ದತೆಗಳನ್ನು ಮಾಡಲಾಗುತ್ತಿದೆ. ಪಕ್ಷ ಪ್ರಬಲವಾಗಿರುವ ಕಡೆ ಮತ್ತಷ್ಟು ಬಲ ವೃದ್ಧಿಸುವುದು. ಅಸ್ತಿತ್ವವೇ ಇಲ್ಲದ ಕಡೆ ಪಕ್ಷದ ಅಸ್ತಿತ್ವ ಸ್ಥಾಪನೆ ಮಾಡಿ ಸಂಘಟನೆಗೆ ಒತ್ತು ಕೊಡುವ ನಿಟ್ಟಿನಲ್ಲಿ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಕುಮಾರಸ್ವಾಮಿ ಮಾರ್ಗದರ್ಶನ ಮಾಡುತ್ತಿದ್ದಾರೆ.

ಜನತಾ ಪರ್ವ 1.0 ಎರಡನೇ ಕಾರ್ಯಾಗಾರ ಜನತಾ ಸಂಗಮ ನವೆಂಬರ್ 17ರಂದು ಮುಕ್ತಾಯವಾಗಲಿದೆ. ಈಗಾಗಲೇ 15ಕ್ಕೂ ಹೆಚ್ಚು ಜಿಲ್ಲೆಗಳ ಮುಖಂಡರೊಂದಿಗೆ ಕಾರ್ಯಾಗಾರದ ಮೂಲಕ ಪಕ್ಷ ಸಂಘಟನೆಯನ್ನು ಚುರುಕುಗೊಳಿಸುವಂತೆ ಸಲಹೆ ನೀಡಿದ್ದಾರೆ ಎಂದು ಗೊತ್ತಾಗಿದೆ.

ಪರಿಷತ್ ಚುನಾವಣೆ ಚರ್ಚೆ : ಇದೇ ವೇಳೆ ವಿಧಾನಪರಿಷತ್ ಚುನಾವಣೆಗೆ (Karnataka Legislative Council election) ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆಯೂ ಕುಮಾರಸ್ವಾಮಿ ಅವರು ಶಾಸಕರ ಜೊತೆ ಸಮಾಲೋಚನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಂಡ್ಯದಲ್ಲಿ ಜೆಡಿಎಸ್‍ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕುರಿತು ಮಂಡ್ಯ ಶಾಸಕರ ಜೊತೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.