ನೆಲಮಂಗಲ : ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಮುರಿದು ಬಿದ್ದ ಮೇಲೆ ಕಾಂಗ್ರೆಸ್ ಒಂದು, ಜೆಡಿಎಸ್ ಮತ್ತೊಂದು ತೀರದಲ್ಲಿದೆ ಎಂದು ನೆಲಮಂಗಲ ಶಾಸಕ ಡಾ.ಶ್ರೀನಿವಾಸ್ ಮೂರ್ತಿಯವರು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕುಲವನಹಳ್ಳಿಯಲ್ಲಿ ರಸ್ತೆ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನೆಲಮಂಗಲ ಶಾಸಕ ಡಾ. ಶ್ರೀನಿವಾಸಮೂರ್ತಿ, ವೇದಿಕೆ ಮೇಲೆ ಬಹಿರಂಗವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕಪಡಿಸಿದರು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅವರ ಬಳಿ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲು ಹೋದಾಗ, ನಮ್ಮ ಪತ್ರಗಳನ್ನು ಗಾಳಿಗೆ ತೂರುತ್ತಿದ್ದರು. ಯಾವುದೇ ಅಭಿವೃದ್ಧಿಗೆ ಸಹಕರಿಸುತ್ತಿರಲಿಲ್ಲ. ಬೇಕಾಬಿಟ್ಟಿಯಾಗಿ ವರ್ತಿಸುತ್ತಿದ್ದರು ಎಂದು ಸಾರ್ವಜನಿಕ ವೇದಿಕೆಯಲ್ಲೇ ಅಸಮಧಾನ ವ್ಯಕ್ತಪಡಿಸಿದರು.
ಯಡಿಯೂರಪ್ಪ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿದ ಶ್ರೀನಿವಾಸಮೂರ್ತಿ, ಸಾರ್ವಜನಿಕರೇ ಈ ಬಿಜೆಪಿ ಸರ್ಕಾರದ ನಡೆ ನೋಡುತ್ತಿದ್ದಾರೆ. ಬಿಜೆಪಿ ಸಚಿವ ಸಂಪುಟ ವಿಸ್ತರಣೆಯಲ್ಲೇ ತೊಡಗಿದೆ. ಮುಂದಿನ ಬಿಜೆಪಿ ನಡೆ ಮತ್ತಷ್ಟು ಜಟಿಲವಾಗಲಿದೆ ಎಂದು ಭವಿಷ್ಯ ನುಡಿದರು.