ಬೆಂಗಳೂರು : ರಾಷ್ಟ್ರಕವಿ ಕುವೆಂಪುರವರು ರಚಿಸಿರುವ ನಾಡಗೀತೆಯನ್ನು ತಿರುಚಿ ಮತ್ತು ಕುವೆಂಪುರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ರಾಜ್ಯ ಸರ್ಕಾರ ನೇಮಿಸಿರುವ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ಬಂಧಿಸುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರು ಮಹಾನಗರ ಜನತಾದಳ (ಜಾತ್ಯಾತೀತ) ಪಕ್ಷದ ವತಿಯಿಂದ ಶೇಷಾದ್ರಿಪುರದಲ್ಲಿರುವ ಜೆಡಿಎಸ್ ಕಚೇರಿ ಸಮೀಪದ ವೃತ್ತದಲ್ಲಿ ಕಾರ್ಯಕರ್ತರು ಪ್ರತಿಭಟಿಸಿದರು, ಸರ್ಕಾರ ಹಾಗೂ ರೋಹಿತ್ ಚಕ್ರತೀರ್ಥ ವಿರುದ್ಧ ಘೋಷಣೆ ಕೂಗಿದರು.
ವಿಧಾನಪರಿಷತ್ ಸದಸ್ಯ ಟಿ.ಎ. ಶರವಣ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೋಹಿತ್ ಚಕ್ರತೀರ್ಥ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಪ್ರತಿಭಟನೆ ಮಾಡುತ್ತಿದ್ದ ಕೆಲವು ಜೆಡಿಎಸ್ ಮುಖಂಡರುಗಳನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
ಇದನ್ನೂ ಓದಿ:ಶನೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜಮೀರ್ ಅಹ್ಮದ್ ಖಾನ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ