ETV Bharat / city

ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಕಾರ್ಯತಂತ್ರಗಳೇನು? - ವಿಧಾನಸಭೆ ಚುನಾವಣೆ

2023ರ ವಿಧಾನಸಭೆ ಚುನಾವಣೆಯಲ್ಲಿ 123 ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಬೇಕೆಂದು ಜೆಡಿಎಸ್ ಪಣತೊಟ್ಟಿದೆ.

hd kumaraswamy
ಹೆಚ್. ಡಿ. ಕುಮಾರಸ್ವಾಮಿ
author img

By

Published : Sep 30, 2021, 2:42 PM IST

ಬೆಂಗಳೂರು: ಜೆಡಿಎಸ್​​ಗೆ 2023ರ ವಿಧಾನಸಭೆ ಚುನಾವಣೆಯೇ ಮುಖ್ಯ ಗುರಿ. ರಾಜ್ಯದಲ್ಲಿ ತೃತೀಯ ಶಕ್ತಿಯಾಗಿ ಹೊರಹೊಮ್ಮಲು ಪಕ್ಷ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.

ಈ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾರ್ಯತಂತ್ರ ರೂಪಿಸುತ್ತಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ 123 ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಬೇಕೆಂದು ತೆನೆ ಪಾರ್ಟಿ ಪಣತೊಟ್ಟಿದೆ.

ಈ ವರ್ಷದ ಆರಂಭದಲ್ಲಿ ನಡೆದಿದ್ದ ಪಶ್ಚಿಮ ಬಂಗಾಳ ರಾಜ್ಯದ ಚುನಾವಣೆಯಲ್ಲಿ 294 ವಿಧಾನಸಭಾ ಕ್ಷೇತ್ರಗಳನ್ನು ಬಿಜೆಪಿ ಎ (ಸುಲಭವಾಗಿ ಗೆಲುವು ಸಾಧಿಸಬಹುದಾದ ಕ್ಷೇತ್ರ), ಬಿ (ಸ್ಪರ್ಧಿಸುವ ಕ್ಷೇತ್ರ) ಮತ್ತು ಸಿ (ಕಠಿಣ ಸ್ಪರ್ಧೆಯ ಕ್ಷೇತ್ರ) ಎಂದು ವಿಂಗಡಿಸಿತ್ತು. ರಾಜ್ಯದಲ್ಲಿ ಜೆಡಿಎಸ್ ಅದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ ಎ+ ವಿಭಾಗವನ್ನು ಸೇರಿಸಿದೆ. ಈ ಮೂಲಕ ಅತ್ಯಂತ ಪ್ರಾಬಲ್ಯ ಹೊಂದಿರುವ ಮತ್ತು ಅತ್ಯುತ್ತಮ ಅಭ್ಯರ್ಥಿಗಳನ್ನು ಹೊಂದಿರುವ ಜೆಡಿಎಸ್‌ ಕ್ಷೇತ್ರಗಳೆಂದು ಪರಿಗಣಿಸಲಾಗುತ್ತದೆ.

ಮಿಷನ್ 272 ಘೋಷವಾಕ್ಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ 2014ರ ಲೋಕಸಭಾ ಚುನಾವಣೆಯನ್ನು ಎದುರಿಸಿದ್ದರು. ಅದೇ ಪರಿಕಲ್ಪನೆಯಲ್ಲಿ ಮಿಷನ್ 123 ಘೋಷವಾಕ್ಯದೊಂದಿಗೆ 2023ರ ವಿಧಾನಸಭೆ ಚುನಾವಣೆಯನ್ನು ಎದುರಿಸಲು ಜೆಡಿಎಸ್ ತಂತ್ರ ರೂಪಿಸುತ್ತಿದೆ. ಜೆಡಿಎಸ್ ಎಲ್ಲಾ 224 ಕ್ಷೇತ್ರಗಳ ಮೇಲೆ ಗಮನಹರಿಸುವುದಿಲ್ಲ. ಗೆಲುವಿಗೆ ಸಾಧ್ಯತೆಯಿರುವ ಕ್ಷೇತ್ರಗಳ ಮೇಲೆ ಗಮನಹರಿಸಲಿದೆ. 20-25 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಲು ವರಿಷ್ಠರು ತೀರ್ಮಾನಿಸಿದ್ದಾರೆ.

ರಾಜ್ಯದಲ್ಲಿರುವ ಕಾರ್ಯಕರ್ತರಿಗೆ, ಮುಖಂಡರಿಗೆ ಚೈತನ್ಯ ತುಂಬುವುದು ಸೇರಿದಂತೆ ಪಕ್ಷವನ್ನು ಬಲಿಷ್ಠಗೊಳಿಸಲು ಹೊಸ ತಂತ್ರಗಳನ್ನು ಅನುಸರಿಸುತ್ತಿದ್ದಾರೆ. ಪಕ್ಷವನ್ನು ಮೇಲೆತ್ತಲು ಅಗತ್ಯ ಇರುವ ಎಲ್ಲ ಕ್ರಮಗಳ ಜೊತೆಗೆ, 'ತಮ್ಮ ಪರಿಕಲ್ಪನೆಯಲ್ಲಿ' ಪಕ್ಷಕ್ಕೆ ಪುನಶ್ಚೇತನ ನೀಡಲು ಕಾರ್ಯತಂತ್ರವನ್ನು ಹೆಚ್​ಡಿಕೆ ರೂಪಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ ಯಾವಾಗ?

ಜನವರಿ ತಿಂಗಳ ಸಂಕ್ರಾಂತಿ ದಿನವೇ 2023ರ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಿರುವ ಹೆಚ್.ಡಿ.ಕುಮಾರಸ್ವಾಮಿ, ಮುಂದಿನ ಅಭ್ಯರ್ಥಿಗಳಿಗೆ 30 ಅಂಶಗಳ ಕಾರ್ಯಕ್ರಮ ಸಿದ್ದಪಡಿಸಿದ್ದಾರೆ. ಆ ಅಜೆಂಡಾ ಪ್ರಕಾರ ಅಭ್ಯರ್ಥಿಗಳು ಕೆಲಸ ಮಾಡಿ ತೋರಿಸಬೇಕು. ಯಶಸ್ವಿಯಾಗಿ ಅನುಷ್ಠಾನ ಮಾಡುವ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಲಾಗುವುದು ಎಂದು ಈಗಾಗಲೇ ಹೆಚ್​ಡಿಕೆ ಹೇಳಿದ್ದಾರೆ. ಪ್ರತಿಯೊಂದು ಕುಟುಂಬದ ಯುವಕರಿಗೆ ಉದ್ಯೋಗ ಸಿಗಬೇಕು ಮತ್ತು ನಿರುದ್ಯೋಗ ತೊಡೆದು ಹಾಕಬೇಕೆನ್ನುವುದು ಜೆಡಿಎಸ್​ನ ಗುರಿ.

ಏನಿದು ಪಂಚರತ್ನ ಯೋಜನೆ?

ಕುಮಾರಸ್ವಾಮಿ ಪಂಚರತ್ನ ಯೋಜನೆ ರೂಪಿಸಿ ಜನರ ಮುಂದೆ ಹೋಗಲು ತೀರ್ಮಾನಿಸಿದ್ದಾರೆ. ಪಂಚರತ್ನ ಯೋಜನೆಗಳಾದ ವಸತಿ, ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿಗೆ ವಿಶೇಷ ಯೋಜನೆ ನೀಡುವುದಾಗಿದೆ. ಈ ಪರಿಕಲ್ಪನೆಯಡಿ ಕಾರ್ಯಕ್ರಮಗಳು ಜಾರಿ ಆಗುತ್ತವೆ. ಈ ಎಲ್ಲ ಸಂಗತಿಗಳನ್ನು ಜನರಿಗೆ ಮನದಟ್ಟು ಮಾಡಲಾಗುವುದು ಹೆಚ್​ಡಿಕೆ ಉದ್ದೇಶವಾಗಿದೆ.

ಪಂಚರತ್ನ ಯೋಜನೆಯ ಉದ್ದೇಶವೇನು?

• ವಸತಿ ಆಸರೆ: ವಸತಿ ಇಲ್ಲದ ಪ್ರತಿ ಕುಟುಂಬಕ್ಕೆ ಸರ್ಕಾರದಿಂದ ಉಚಿತವಾಗಿ ವಸತಿ ನೀಡುವುದು.
• ಶಿಕ್ಷಣವೇ ಆಧುನಿಕ ಶಕ್ತಿ: ಉತ್ತಮ ಗುಣಮಟ್ಟದ ಹಾಗೂ ವ್ಯವಸ್ಥಿತ ಶಿಕ್ಷಣವನ್ನು ಉಚಿತವಾಗಿ ನೀಡುವ ಯೋಜನೆ.
• ಆರೋಗ್ಯ ಸಂಪತ್ತು: ಪ್ರತಿಯೊಂದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 24×7 ಕಾರ್ಯ ನಿರ್ವಹಿಸುವ ಸುಸಜ್ಜಿತ ಹೈಟೆಕ್ ಆಸ್ಪತ್ರೆ ನಿರ್ಮಾಣ.‌
• ರೈತ ಚೈತನ್ಯ: ಆಧುನಿಕ ತಂತ್ರಜ್ಞಾನದ ಕೃಷಿ ಪದ್ದತಿ ಅಳವಡಿಕೆ, ಸರಿಯಾದ ಬೆಳೆ ಶೇಖರಣಾ ವ್ಯವಸ್ಥೆ ಹಾಗೂ ಲಾಭದಾಯಕವಾದ ಮಾರುಕಟ್ಟೆ ವ್ಯವಸ್ಥೆ.
• ಯುವ ನವ ಮಾರ್ಗ ಹಾಗೂ ಮಹಿಳಾ ಸಬಲೀಕರಣ: ಯುವ ಜನತೆ ಹಾಗೂ ಮಹಿಳೆಯರಿಗೆ ಉದ್ಯೋಗ ಪಡೆಯಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ನೀಡುವುದು.

ಇದನ್ನೂ ಓದಿ: ಜಾಗ ತಮ್ಮದೆಂದು ವೃದ್ಧೆಯ ಗುಡಿಸಲು‌‌‌ ಧ್ವಂಸ.. ವಸ್ತುಗಳನ್ನು ಬೀದಿಗೆ ಎಸೆದು ಪುಂಡಾಟ...!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.