ETV Bharat / city

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ: ಹೆಚ್.ಕೆ. ಕುಮಾರಸ್ವಾಮಿ - ಅಗತ್ಯ ವಸ್ತುಗಳ ಬೆಲೆ ಏರಿಕೆ

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ತೈಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದಕ್ಕೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ. ಜೂನ್ 28 ರಂದು ಬೆಲೆ ಏರಿಕೆ ವಿರೋಧಿಸಿ ಎಲ್ಲ ಜಿಲ್ಲೆಗಳಲ್ಲೂ ಜೆಡಿಎಸ್​​​​​​ನಿಂದ ಬೃಹತ್​ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

JDS
ನಿಖಿಲ್ ಕುಮಾರಸ್ವಾಮಿ
author img

By

Published : Jun 26, 2021, 4:16 PM IST

ಬೆಂಗಳೂರು : ತೈಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಜೂನ್ 28 ರಂದು ಪ್ರತಿಭಟನೆ ನಡೆಸಲು ಜೆಡಿಎಸ್ ನಿರ್ಧರಿಸಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಕೆ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ

ಪಕ್ಷದ ಕಚೇರಿಯಲ್ಲಿಂದು ಪ್ರತಿಭಟನೆಯ ರೂಪುರೇಷೆಗಳ ಬಗ್ಗೆ ಪೂರ್ವಭಾವಿ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ದಿನದಿಂದ ದಿನಕ್ಕೆ ತೈಲ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಈ ಹಿನ್ನೆಲೆ ಸೋಮವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಬೆಳಗ್ಗೆ 11 ಗಂಟೆಗೆ ಜೆಪಿ ಭವನದಿಂದ ಮೌರ್ಯ ಸರ್ಕಲ್​ನಲ್ಲಿರುವ ಗಾಂಧಿ ಪ್ರತಿಮೆವರೆಗೂ ರ‍್ಯಾಲಿ ನಡೆಯಲಿದೆ. ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡುತ್ತೇವೆ ಎಂದು ತಿಳಿಸಿದರು.

ಸರ್ಕಾರ ಸತ್ತಿದೆ: ರಾಜ್ಯದಲ್ಲಿ ಸರ್ಕಾರ ಸತ್ತು ಹೋಗಿದೆ. ನಾಯಕತ್ವಕ್ಕಾಗಿ ಕಚ್ಚಾಡುತ್ತಿದ್ದಾರೆ. ಕಾರ್ಯಕ್ರಮಗಳು ಮರೆತು ಹೋಗಿವೆ. ನಿಜವಾಗಿ ಕ್ವಾರಂಟೈನ್​ನಲ್ಲಿರುವುದು ಬಿಜೆಪಿ ಸರ್ಕಾರ ಎಂದು ಟೀಕಿಸಿದರು.

ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಎಲ್ಲ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆಯಲಿದೆ. ನಿತ್ಯ ಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಕೊರೊನಾ ಸಮಯದಲ್ಲಿ ಜನರು ಆರ್ಥಿಕವಾಗಿ, ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಜನರ ಮೇಲೆ ಹೊರೆ ಹೊರಿಸಲಾಗಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.