ETV Bharat / city

ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಕಲಬುರಗಿಯಲ್ಲಿ ಜ್ಯುವೆಲರಿ ಪಾರ್ಕ್ - ಬೆಂಗಳೂರು ಸುದ್ದಿ

ಹಿಂದುಳಿದ ಕಲ್ಯಾಣ ಕರ್ನಾಟಕವನ್ನು ಅಭಿವೃದ್ದಿ ಪಥದತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಸುಮಾರು 50 ರಿಂದ 75 ಎಕರೆ ಜಮೀನಿನಲ್ಲಿ ಜ್ಯುವೆಲ್ಲರಿ ಪಾರ್ಕ್ ನಿರ್ಮಿಸಲು ಸರ್ಕಾರ ನಿರ್ಧರಿಸಿದೆ.

Murugesh nirani
Murugesh nirani
author img

By

Published : May 2, 2021, 5:23 PM IST

ಬೆಂಗಳೂರು: ಕಲಬುರಗಿಯಲ್ಲಿ ಆಭರಣ ತಯಾರಿಕೆಯ ಘಟಕ (ಜ್ಯುವೆಲ್ಲರಿ ಪಾರ್ಕ್)ವನ್ನು ಆರಂಭಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಕಲಬುರಗಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕವಾದ ಬೆನ್ನಲ್ಲೇ ನಿರಾಣಿ ಅವರು ಈ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ. ಈ ಹಿಂದೆ ಬೀದರ್ ಇಲ್ಲವೇ ಕಲಬುರಗಿಯಲ್ಲಿ ಜ್ಯುವೆಲ್ಲರಿ ಪಾರ್ಕ್ ಆರಂಭಿಸಲು ಯೋಜನೆ ರೂಪಿಸಲಾಗಿತ್ತು. ಇದೀಗ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವ ಹಿನ್ನೆಲೆಯಲ್ಲಿ ಇದೇ ಜಿಲ್ಲೆಯಲ್ಲಿ ತೆರೆಯಲು ಮುಂದಾಗಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು, ಹಿಂದುಳಿದ ಕಲ್ಯಾಣ ಕರ್ನಾಟಕವನ್ನು ಅಭಿವೃದ್ದಿ ಪಥದತ್ತ ಕೊಂಡೊಯ್ಯುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಸುಮಾರು 50 ರಿಂದ 75 ಎಕರೆ ಜಮೀನಿನಲ್ಲಿ ಜ್ಯುವೆಲ್ಲರಿ ಪಾರ್ಕ್ ನಿರ್ಮಿಸಲಾಗುವುದು. ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಜ್ಯುವೆಲರಿ ಪಾರ್ಕ್ ಪ್ರಾರಂಭಿಸಲಿದ್ದು, ಅಭರಣಗಳ‌ ತಯಾರಿಕೆ, ಗ್ರಾಹಕರು ಒಂದೇ ಸೂರಿನಡಿ ಖರೀದಿ, ಇಲ್ಲಿಂದಲೇ ‌ದೇಶ- ವಿದೇಶಕ್ಕೂ ರಫ್ತಿಗೆ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಹಿಂದುಳಿದ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಒತ್ತು ಕೊಡುವ ಸಂವಿಧಾನದ 371( ಜೆ)ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಈ ಭಾಗದಲ್ಲಿ ಉದ್ಯೋಗ ಸೃಷ್ಟಿಸಿ ನಿರುದ್ಯೋಗ ನಿವಾರಣೆಗೆ ಒತ್ತು ನೀಡಲಾಗುವುದು. ಕಲಬುರಗಿಯಲ್ಲಿ ವಿಮಾನ ನಿಲ್ದಾಣ ಹಾಗೂ ರೈಲ್ವೇ ಸಂಪರ್ಕ ಸಾಕಷ್ಟು ಉತ್ತಮವಾಗಿದೆ. ದೇಶ- ವಿದೇಶಗಳಿಂದ ಬಂದು ಹೋಗುವವರಿಗೆ ಎಲ್ಲಾ ಸೌಲಭ್ಯಗಳಿವೆ. ಜಾಗತಿಕ ಮಟ್ಟದಲ್ಲಿ ಕಲಬುರಗಿ ಜಿಲ್ಲೆಯ ‌ ಹೆಸರು ಇನ್ನಷ್ಟು ಉತ್ತುಂಗಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಜೊತೆಗೆ ರಾಜ್ಯ ಸರಕಾರ ಇನ್ನಷ್ಟು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ಇದೇ ವೇಳೆ ತಮ್ಮ ಮೇಲೆ ವಿಶ್ವಾಸವಿಟ್ಟು ಕಲಬುರಗಿ ಜಿಲ್ಲೆಯ ‌ಉಸ್ತುವಾರಿ ನೀಡಿದ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಸೇರಿದಂತೆ ಪಕ್ಷದ ಪ್ರಮುಖ ನಾಯಕರಿಗೆ ನಿರಾಣಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಈ ಭಾಗದ ಶಾಸಕರು, ಸಂಸದರು ಸೇರಿದಂತೆ ಪಕ್ಷಾತೀತವಾಗಿ‌ ಎಲ್ಲಾ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ‌ಅಭಿವೃದ್ಧಿಗೆ ಪರಿಶ್ರಮಿಸುವುದಾಗಿ ನಿರಾಣಿ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಬಳಿ ಇಂತಹುದೇ ಜಿಲ್ಲೆಯ ಉಸ್ತುವಾರಿ ಕೊಡಬೇಕೆಂದು ಬೇಡಿಕೆ ಇಟ್ಟಿರಲಿಲ್ಲ. ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವಾಗ ಹಾಗೂ ಖಾತೆ ಹಂಚಿಕೆ ಮಾಡುವಾಗಲೂ ಯಾವುದೇ ರೀತಿಯ ಒತ್ತಡ ಹಾಕಿರಲಿಲ್ಲ. ಮೊದಲಿನಿಂದಲೂ ನಾನು ಒಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ ಎಂದು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಹಾಗೂ ಪಕ್ಷದ ನಾಯಕರು ಯಾವುದೇ ಸಂದರ್ಭದಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಕಲ್ಯಾಣ ಕರ್ನಾಟಕ ಪ್ರದೇಶವನ್ನು ಇನ್ನಷ್ಟು ‌ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.