ETV Bharat / city

ನಾಳೆ ಇನ್ನೂ ಹೆಚ್ಚಿನ ಸಂಚಾರಿ ಪೊಲೀಸರನ್ನು ನಿಯೋಜಿಸುತ್ತೇವೆ: ರವಿಕಾಂತೇಗೌಡ - ಪೌರತ್ವ ತಿದ್ದುಪಡಿ ಸಂವಿಧಾನ ಬಾಹಿರ

ಇಂದಿಗಿಂತ ನಾಳೆ ಇನ್ನೂ ಹೆಚ್ಚಿನ ಟ್ರಾಫಿಕ್ ಪೊಲೀಸರನ್ನು ನಿಯೋಜನೆ ಮಾಡ್ತೇವೆ ಎಂದು ನಗರ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಹೇಳಿದರು.

Joint Police Commissioner of the Urban Traffic Division, Dr BRRikantegowda
ನಗರ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ
author img

By

Published : Dec 19, 2019, 7:09 PM IST

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆ ನಗರದ ಹಲವು ಕಡೆ ಹೆಚ್ಚಿರುವ ಸಂಚಾರ ದಟ್ಟಣೆ ನಿಯಂತ್ರಿಸಿದ್ದೇವೆ ಎಂದು ನಗರ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ತಿಳಿಸಿದ್ದಾರೆ.

ನಾಳೆ ಒಂದು ವೇಳೆ ಪ್ರತಿಭಟನೆ ಹೆಚ್ಚಾದರೆ ಹೆಚ್ಚುವರಿ ಪೊಲೀಸರನ್ನ ನಿಯೋಜಿಸಲು ಕ್ರಮ ಕೈಗೊಂಡಿದ್ದೇವೆ. ಯಾವುದೇ ಕಾರಣಕ್ಕೂ ಸಂಚಾರ ದಟ್ಟಣೆ ಉಂಟಾಗಲು ಬಿಡುವುದಿಲ್ಲ. ಅದಕ್ಕೆ ಬೇಕಾದ ಮುನ್ನೆಚ್ಚರಿಕಾ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.

ನಗರ ಸಂಚಾರಿ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ

ಪ್ರತಿಭಟನೆ ನಡೆದ ಮಾರ್ಗದಲ್ಲಿ ಇಂದು 100ಕ್ಕೂ ಹೆಚ್ಚು ಆ್ಯಂಬುಲೆನ್ಸ್​​ಗಳು ಸಂಚರಿಸಿವೆ. ಅವುಗಳನ್ನು ಬೇರೆ ಬೇರೆ ಮಾರ್ಗಗಳಿಗೆ ವರ್ಗಾಯಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದೇವೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.