ETV Bharat / city

ಬೆಂಗಳೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ರಕರ್ತೆ ಮೃತದೇಹ ಪತ್ತೆ.. ಪತಿ ಮೇಲೆ ಗುಮಾನಿ - ಪತ್ರಕರ್ತೆ ಶ್ರುತಿ ಹತ್ಯೆ ಅನುಮಾನ

ರಾಯಿಟರ್ಸ್ ಪತ್ರಿಕಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತೆ ಶ್ರುತಿ ಮೃತದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗಂಡನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಶ್ರುತಿ ಕುಟುಂಬಸ್ಥರು ದೂರು ನೀಡಿದ್ದಾರೆ.

journalist-dead-body
ಪತ್ರಕರ್ತೆ ಮೃತದೇಹ
author img

By

Published : Mar 24, 2022, 7:37 PM IST

ಬೆಂಗಳೂರು: ರಾಯಿಟರ್ಸ್ ಪತ್ರಿಕಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತೆ ಶ್ರುತಿ (35) ಮೃತದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ಅನೀಶ್ ಕೊಯಾಡನ್ ಕೊಲೆ ಮಾಡಿರುವುದಾಗಿ ಶ್ರುತಿ ಕುಟುಂಬಸ್ಥರು ಆರೋಪಿಸಿ ದೂರು ನೀಡಿದ್ದು, ಇದೀಗ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2017ರಲ್ಲಿ ಶ್ರುತಿ ಹಾಗೂ ಅನೀಶ್ ವಿವಾಹವಾಗಿತ್ತು. ದಂಪತಿ ಮದುವೆಯ ನಂತರ ವೈಟ್‌ಫೀಲ್ಡ್‌ನ ನಲ್ಲೂರುಹಳ್ಳಿ ರಸ್ತೆ ಬಳಿಯ ವಸತಿ ಸಮುಚ್ಚಯದಲ್ಲಿ ವಾಸವಾಗಿದ್ದರು. ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಅನೀಶ್, ಪ್ರತಿನಿತ್ಯ ಶ್ರುತಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗ್ತಿದೆ. ಸಂಬಳದ ಹಣವನ್ನು ತವರು ಮನೆಗೆ ಕೊಡುತ್ತೀಯಾ ಎಂದು ಹಲ್ಲೆ ನಡೆಸುತ್ತಿದ್ದನಂತೆ. ಮದ್ಯಪಾನ ಮಾಡಿ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ ಎಂದು ಶ್ರುತಿ ಮನೆಯವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವಾರಾಂತ್ಯದಲ್ಲಿ ಪ್ರವಾಸಕ್ಕೆಂದು ಕರೆದುಕೊಂಡು ಹೋಗಿ ಹಿಂಸಿಸುತ್ತಿದ್ದ. ಈ ವರ್ಷದ ಜನವರಿ 15ರಂದು ಹೆಂಡತಿ ಜೊತೆ ಜಗಳ ಮಾಡಿ ಕೊಲೆಗೆ ಯತ್ನಿಸಿದ್ದ. ಆಕೆಯ ಚೀರಾಟ ಕೇಳಿ ಓಡಿ ಬಂದಿದ್ದ ಭದ್ರತಾ ಸಿಬ್ಬಂದಿ ಪ್ರಾಣ ಉಳಿಸಿದ್ದರು ಎಂಬುದಾಗಿ ಶ್ರುತಿ ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ. ಎರಡು ದಿನಗಳಿಂದ ಶ್ರುತಿ ಅವರಿಗೆ ಅವರ ಕುಟುಂಬಸ್ಥರು ಕರೆ ಮಾಡಿದರೂ ಆಕೆ ಸ್ವೀಕರಿಸಿಲ್ಲ. ಇದರಿಂದ ಅನುಮಾನಗೊಂಡು ಮನೆಗೆ ಬಂದು ಪರಿಶೀಲಿಸಿದ್ದಾರೆ.

ಇಂದು ಮನೆ ಬಳಿ ಬಂದಾಗ ಬೀಗ ಹಾಕಲಾಗಿತ್ತು. ಅನುಮಾನ ಹೆಚ್ಚಾಗಿ ಭದ್ರತಾ ಸಿಬ್ಬಂದಿ ನೆರವಿನಿಂದ ಬಾಲ್ಕನಿಯ ಬಾಗಿಲು ಮುರಿದು ಒಳ ಹೋಗಿ ನೋಡಿದಾಗ ಶ್ರುತಿ ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕೋಣೆಯಲ್ಲಿ ಪತ್ತೆಯಾಗಿದೆ. ಇದರಿಂದ ಕುಪಿತಗೊಂಡ ಆಕೆಯ ಕುಟುಂಬಸ್ಥರು ಆಕೆಯ ಗಂಡನೇ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ಓದಿ: ಮೂರು ವರ್ಷದ ಬಾಲಕಿ ಮೇಲೆ ದೊಡ್ಡಪ್ಪನಿಂದ ಅತ್ಯಾಚಾರ: ಪೈಶಾಚಿಕ ಕೃತ್ಯಕ್ಕೆ ಮಗು ಬಲಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.