ETV Bharat / city

ಉಪ ಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ. ಫಣೀಂದ್ರ

ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಫಣೀಂದ್ರ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ..

Justice Fhaneendra took oath as deputy lokayukta
ಉಪ ಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ. ಫಣೀಂದ್ರ
author img

By

Published : Mar 29, 2022, 11:21 AM IST

ಬೆಂಗಳೂರು: ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಫಣೀಂದ್ರ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇಂದು ರಾಜ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಅವರಿಗೆ ಪ್ರಮಾಣ ವಚನವನ್ನು ಬೋಧಿಸಿದರು.

ಉಪ ಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ. ಫಣೀಂದ್ರ

2020ರ ಡಿಸೆಂಬರ್ 16ರಂದು ನಿವೃತ್ತ ನ್ಯಾಯಮೂರ್ತಿ ಎನ್‌.ಆನಂದ್‌ ಉಪ ಲೋಕಾಯುಕ್ತ ಹುದ್ದೆಯಿಂದ ನಿವೃತ್ತರಾದಾಗಿನಿಂದಲೂ ಈ ಹುದ್ದೆ ಖಾಲಿ ಇತ್ತು. ಮಾರ್ಚ್ 22ರಂದು ನ್ಯಾಯಮೂರ್ತಿ ಫಣೀಂದ್ರ ಅವರ ಹೆಸರನ್ನು ಉಪ ಲೋಕಾಯುಕ್ತ ಹುದ್ದೆಗೆ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದರು.‌ ಇಂದು ನ್ಯಾ. ಫಣೀಂದ್ರ ಅವರು ತಮ್ಮ ಅಧಿಕಾರ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ಮುಟ್ಟಾಲೆ ಧರಿಸಿ 'ಪದ್ಮಶ್ರೀ' ಪ್ರಶಸ್ತಿ ಸ್ವೀಕರಿಸಿದ ಅಮೈ ಮಹಾಲಿಂಗ ನಾಯ್ಕ್

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ, ಗೃಹ ಸಚಿವ ಆರಗ ಜ್ಞಾನೆಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್​, ಶಾಸಕ ಸುರೇಶ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಇತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.