ಬೆಂಗಳೂರು: ಸೆಪ್ಟೆಂಬರ್ 17 ರಂದು ಕಲಬುರಗಿಯಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಅಂದು ಬೆಳಗ್ಗೆ 7 ಗಂಟೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ತೆರಳಲಿರುವ ಸಿಎಂ 8.15 ಕ್ಕೆ ಕಲಬುರಗಿ ವಿಮಾನ ನಿಲ್ದಾಣವನ್ನು ತಲುಪಲಿದ್ದಾರೆ. ಎಸ್.ವಿ.ಪಿ ವೃತ್ತದಲ್ಲಿ 8.35ಕ್ಕೆ ಸರ್ದಾರ್ ವಲ್ಲಭ್‌ಭಾಯಿ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.
ಬಳಿಕ 9 ಗಂಟೆಗೆ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜತೆಗೆ ಇದೇ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಹಾಗೂ ಕೆಲವು ಯೋಜನೆಗಳ ಲೋಕಾರ್ಪಣೆ ಮಾಡಲಿದ್ದಾರೆ.
ಬೃಹತ್ ಪ್ರಮಾಣದಲ್ಲಿ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಅದೇ ದಿನ ಕಲಬುರಗಿಯಿಂದಲೇ ಸಿಎಂ ಚಾಲನೆ ನೀಡಲಿದ್ದು, ಮಧ್ಯಾಹ್ನ 1.15 ಕ್ಕೆ ಕಾಳನೂರು ಗ್ರಾಮದಲ್ಲಿ ನಿರ್ಮಿಸಲಾಗಿರುವ ಕಾಳಿಂಗೇಶ್ವರ ದೇವಸ್ಥಾನದ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ.
ಮಧ್ಯಾಹ್ನ 1.45 ಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೊರಡಲಿದ್ದು, ಮಧ್ಯಾಹ್ನ 3 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸ್ಸಾಗಲಿದ್ದಾರೆ.