ETV Bharat / city

ಜೈಲಿನಲ್ಲಿ‌ ದೋಸ್ತಿ: ಹೊರಗಡೆ ಬಂದು ಮತ್ತೆ ಕಳ್ಳತನಕ್ಕೆ ಕೈ ಹಾಕಿದ ಖದೀಮರ ಬಂಧನ

author img

By

Published : Mar 29, 2022, 1:03 PM IST

ಜೈಲಿನಿಂದ ಹೊರ ಬಂದ ಬಳಿಕವೂ ಮನೆಗಳ್ಳತನ‌ದಲ್ಲಿ ಸಕ್ರಿಯರಾಗಿದ್ದ ಮಂಜುನಾಥ್ ಹಾಗೂ ವೆಂಕಟೇಶ್ ಎಂಬ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.

Kamakshipalya Police arrested two thieves
ಇಬ್ಬರು ಕಳ್ಳರನ್ನು ಬಂಧಿಸಿದ ಕಾಮಾಕ್ಷಿಪಾಳ್ಯ ಪೊಲೀಸರು

ಬೆಂಗಳೂರು: ಜೈಲಿನಿಂದ ಹೊರ ಬಂದ ಬಳಿಕ ಮನೆಗಳ್ಳತನ‌ದಲ್ಲಿ ಸಕ್ರಿಯರಾಗಿದ್ದ ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಜುನಾಥ್ ಹಾಗೂ ವೆಂಕಟೇಶ್ ಎಂದು ಗುರುತಿಸಲಾಗಿದೆ. ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ವೆಂಕಟೇಶ್ ಹಾಗೂ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಮಂಜುನಾಥನಿಗೆ ಜೈಲಿನಲ್ಲಿದ್ದಾಗ ಪರಿಚಯವಾಗಿತ್ತು. ಒಂದೂವರೆ ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದರು.

ಇದನ್ನೂ ಓದಿ: ರಾಯಚೂರು ವಿದ್ಯಾರ್ಥಿನಿ ಕೊಲೆ ಪ್ರಕರಣ : 33 ದಿನಗಳ ನಂತರ ಆರೋಪಿ ಪ್ರಿಯಕರ ಶವವಾಗಿ ಪತ್ತೆ

ಹೊರಬಂದ ಬಳಿಕ ಕಳ್ಳತನದ ಸ್ಕೆಚ್ ರೂಪಿಸಿದ್ದ ಆರೋಪಿಗಳು ಕೋಲಾರ, ತುಮಕೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯಾದ್ಯಂತ ಬೈಕ್​ನಲ್ಲಿ ಸುತ್ತಾಡಿ‌ ಮನೆಗಳನ್ನು ಗುರುತಿಸಿ ಕಳ್ಳತನ ಆರಂಭಿಸಿದ್ದರು. ಆದರೆ, ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಆರೋಪಿಗಳನ್ನು ಬಂಧಿಸುವ ಮೂಲಕ ಸಂಭಾವ್ಯ ಸರಣಿ ಕಳ್ಳತನಕ್ಕೆ ಬ್ರೇಕ್ ಹಾಕಿದ್ದಾರೆ. ಆರೋಪಿಗಳಿಂದ 5 ಲಕ್ಷ 25 ಸಾವಿರ ಮೌಲ್ಯದ 105 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.