ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ಭದ್ರತೆ ಒದಗಿಸಿದ ಪೊಲೀಸ್ ಸಿಬ್ಬಂದಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹಸ್ತಲಾಘವ ನೀಡಿ ಅಭಿನಂದನೆ ಸಲ್ಲಿಸಿದರು.
ದಿ.ನಟ ಪುನೀತ್ ರಾಜ್ ಕುಮಾರ್ ಅಂತ್ಯಸಂಸ್ಕಾರ ಕಾರ್ಯ ಪೂರ್ಣವಾಗುತ್ತಿದ್ದಂತೆ ಸ್ಟುಡಿಯೋ ಹೊರಭಾಗಕ್ಕೆ ಬಂದ ಕಮಲ್ ಪಂತ್ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿ, ಕ್ಷಿಪ್ರ ಕಾರ್ಯಪಡೆ ಸಿಬ್ಬಂದಿಗೆ ಹಸ್ತಲಾಘವ ನೀಡುತ್ತಾ, ಉತ್ತಮವಾಗಿ ಕಾರ್ಯ ನಿರ್ವಹಣೆ ಮಾಡಿದ್ದೀರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ: ಭೂತಾಯಿಯ ಮಡಿಲು ಸೇರಿದ ಭಾಗ್ಯವಂತ: ಮತ್ತೆ ಹುಟ್ಟಿ ಬನ್ನಿ ಅಪ್ಪು
ಶುಕ್ರವಾರದಿಂದ ವಿಶೇಷವಾಗಿ ಇಂದು ಮುಂಜಾನೆಯಿಂದ ಅಂತ್ಯಸಂಸ್ಕಾರ ಮುಗಿಯುವವರೆಗೂ ಭದ್ರತಾ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು ಸ್ಥಳಕ್ಕೆ ಆಗಮಿಸಿದರೂ, ಯಾವುದೇ ರೀತಿಯ ಅಹಿತಕರ ಘಟನೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ಸುಗಮವಾಗಿ ಅಂತ್ಯಸಂಸ್ಕಾರ ನಡೆಸಲು ಭದ್ರತಾ ಸಿಬ್ಬಂದಿ ಅವಕಾಶ ಕಲ್ಪಿಸಿದ್ದರು.