ಬೆಂಗಳೂರು: ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ದಾಸ ಶ್ರೇಷ್ಠ ಭಕ್ತ ಕನಕದಾಸರ 532ನೇ ಜಯಂತ್ಯುತ್ಸವ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜೆಡಿಎಸ್ ಕಾರ್ಯಾಧ್ಯಕ್ಷ ಎಂ.ಎಸ್.ನಾರಾಯಣರಾವ್, ಕನಕದಾಸರು ಜಾತಿ ಮತ್ತು ವರ್ಗಗಳನ್ನು ಮೀರಿದ ವ್ಯಕ್ತಿಯಾಗಿದ್ದರು. ಅವರ ಜಾತ್ಯಾತೀತ ಮನೋಭಾವನೆಯನ್ನು ಎಲ್ಲಾ ಸಮುದಾಯದವರು ಅರ್ಥ ಮಾಡಿಕೊಂಡು ಜಾರಿಗೆ ತರುವಂತಾಗಬೇಕು ಎಂದರು.
ಇನ್ನು, ಕಾರ್ಯಕ್ರಮಕ್ಕೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ,ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿ ಹಲವಾರು ಮುಖಂಡರು ಭಾಗವಹಿಸಬೇಕಿತ್ತು.ಆದರೆ, ಉಪಚುನಾವಣೆ ಒತ್ತಡದಿಂದಾಗಿ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗಿಲ್ಲವೆಂದು ಜೆಡಿಎಸ್ ಮುಖಂಡರು ತಿಳಿಸಿದ್ದಾರೆ.