ETV Bharat / city

ದಾಸ ಸಾಹಿತ್ಯಕ್ಕೆ ಕನಕದಾಸರ ಕೊಡುಗೆ ಅಪಾರ : ಸಿಎಂ ಬಸವರಾಜ ಬೊಮ್ಮಾಯಿ - Kanakadasa Jayanthi

ಸಿಎಂ ಬಸವರಾಜ ಬೊಮ್ಮಾಯಿ(CM Basavaraj Bommai) ಅವರು ಇಂದು ಕನಕದಾಸ ಜಯಂತಿ (Kanakdasa birth anniversary) ಅಂಗವಾಗಿ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪುತ್ಥಳಿಗೆ ಪುಷ್ಟನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕನಕದಾಸರ ಕಾರ್ಯಗಳನ್ನು ನೆನೆದರು. ಅಲ್ಲದೆ, ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸೈನಿಕ ಶಾಲೆಯನ್ನು ನಿರ್ಮಿಸುತ್ತಿರುವುದಾಗಿ ತಿಳಿಸಿದರು.

cm-bommai-recalls-the-life-and-works-of-saint-kanakadasa
ಸಿಎಂ ಬಸವರಾಜ ಬೊಮ್ಮಾಯಿ
author img

By

Published : Nov 22, 2021, 12:27 PM IST

ಬೆಂಗಳೂರು: ಕನಕದಾಸ ಜಯಂತಿಯ (Kanakdasa birth anniversary) ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommai) ಅವರು ಇಂದು ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದರು.

ಕನಕದಾಸರನ್ನು ಸ್ಮರಿಸಿದ ಸಿಎಂ ಬಸವರಾಜ ಬೊಮ್ಮಾಯಿ

ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ದಾಸರಲ್ಲಿ ಅತ್ಯಂತ ಶ್ರೇಷ್ಠ ದಾಸರು ಕನಕದಾಸರು. ದಾಸ ಸಾಹಿತ್ಯದಲ್ಲಿ ಬಹಳ ಕೊಡುಗೆ ನೀಡಿದ್ದಾರೆ. ತತ್ವಜ್ಞಾನಿ, ಸಮಾಜ ಸುಧಾರಕರಾಗಿದ್ದ ಅವರು, ಮಾನವೀಯ ಗುಣಗಳನ್ನು ಪ್ರತಿಪಾದಿಸಿದವರು. ಸಮಾನತೆಯನ್ನು ಸಾರಿದವರು ಮತ್ತು ಸತ್ಯವನ್ನು ಹೇಳಿದವರು ಕನಕದಾಸರು ಎಂದು ಬಣ್ಣಿಸಿದರು.

ಕನಕದಾಸರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನಲ್ಲಿ. ಅವರು ನೆಲೆ ನಿಂತಿದ್ದು ಕಾಗಿನೆಲೆಯಲ್ಲಿ. ಜನರಿಗೆ ಜೀವನ ಸಾರ ಹೇಳಿದರು. ರಾಮಧಾನ್ಯ ಚರಿತೆ, ನಳಚರಿತೆ ಸೇರಿದಂತೆ ಹಲವಾರು ಸಾಹಿತ್ಯಗಳು ಜನರಿಗೆ ದಾರಿ ದೀಪವಾಗಿವೆ. ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ಇದರಿಂದ ಸಮಾಜದಲ್ಲಿ ಸಮಾನತೆ, ಶಾಂತಿ ಪ್ರಗತಿ ಸಾಧಿಸಲು ಸಾಧ್ಯವಾಗಿದೆ. ಪರಿವರ್ತನೆಯ ಹರಿಕಾರರಾದ ಅವರು ದಾಸ ಶ್ರೇಷ್ಠರಾದರು ಎಂದರು. ಅಲ್ಲದೆ, ಕಾಗಿನೆಲೆಯಲ್ಲಿ ಅವರ ಸ್ಮಾರಕಗಳನ್ನು ಮಾಡಿದ್ದಾಗಿ ತಿಳಿಸಿದರು.

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ: ಸಂಗೊಳ್ಳಿ ರಾಯಣ್ಣ ಸಮಾಧಿಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಮುಖ್ಯವಾಗಿ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆಯನ್ನು ಮಾಡುತ್ತಿದ್ದೇವೆ. ಈಗಾಗಲೇ 180 ಕೋಟಿ ರೂ. ಖರ್ಚು ಮಾಡಲಾಗಿದೆ. ಇನ್ನೂ 50 ಕೋಟಿ ರೂ. ಖರ್ಚು ಮಾಡಿ ಸೈನಿಕ ಶಾಲೆಯನ್ನು ಪೂರ್ಣಗೊಳಿಸಲಾಗುವುದು. ಯುವಕರಿಗೆ ಆದರ್ಶಪ್ರಾಯವಾಗಲಿ ಎಂಬುದು ನಮ್ಮ ಉದ್ದೇಶ. ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆಯಲಾಗಿದ್ದು, ಸೈನಿಕ ಶಾಲೆಯನ್ನು ಡಿಫೆನ್ಸ್ ಗೆ ತೆಗೆದುಕೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಸಿಎಂ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.