ಬೆಂಗಳೂರು: ಕನ್ನಡದ ಬಂಡಾಯ ಸಾಹಿತಿ ಎಂದೇ ಪ್ರಸಿದ್ಧರಾದ ಡಾ. ಸಿದ್ದಲಿಂಗಯ್ಯ ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳಲಾಗದೇ, ವಿಧಿವಶರಾಗಿದ್ದಾರೆ. ಕೋವಿಡ್ ಸೋಂಕು ಕಾಣಿಸಿಕೊಂಡ ನಂತರ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ದಲಿತ ಕವಿ ಎಂದೇ ಪ್ರಸಿದ್ಧರಾಗಿದ್ದ ಸಿದ್ದಲಿಂಗಯ್ಯ ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದ್ದರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ- ಬರವಣಿಗೆಗಳಲ್ಲೇ ತೊಡಗಿಕೊಂಡಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಾಗಡಿಯ ಮಂಚಿನಬೆಲೆಯಲ್ಲಿ 1954ರಲ್ಲಿ ಜನಿಸಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು. ತಮ್ಮ ಸಾಹಿತ್ಯ, ಕವಿತೆಗಳ ಕೊಡುಗೆಗೆ ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಸಿಎಂ ಬಿಎಸ್ವೈ ಸಂತಾಪ
ಡಾ.ಸಿದ್ದಲಿಂಗಯ್ಯ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ.
-
ದಲಿತ ಕವಿ ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ ವಿಧಿವಶರಾದ ಸುದ್ದಿ ತಿಳಿದು ಅತೀವ ನೋವುಂಟಾಗಿದೆ. ಕನ್ನಡ ಸಾಹಿತ್ಯದ ಶ್ರೇಷ್ಠ ಸಾಧಕರೊಬ್ಬರು ನಮ್ಮನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ದೇವರು ಅವರ ಕುಟುಂಬ, ಅಪಾರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ
— B.S. Yediyurappa (@BSYBJP) June 11, 2021 " class="align-text-top noRightClick twitterSection" data="
">ದಲಿತ ಕವಿ ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ ವಿಧಿವಶರಾದ ಸುದ್ದಿ ತಿಳಿದು ಅತೀವ ನೋವುಂಟಾಗಿದೆ. ಕನ್ನಡ ಸಾಹಿತ್ಯದ ಶ್ರೇಷ್ಠ ಸಾಧಕರೊಬ್ಬರು ನಮ್ಮನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ದೇವರು ಅವರ ಕುಟುಂಬ, ಅಪಾರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ
— B.S. Yediyurappa (@BSYBJP) June 11, 2021ದಲಿತ ಕವಿ ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ ವಿಧಿವಶರಾದ ಸುದ್ದಿ ತಿಳಿದು ಅತೀವ ನೋವುಂಟಾಗಿದೆ. ಕನ್ನಡ ಸಾಹಿತ್ಯದ ಶ್ರೇಷ್ಠ ಸಾಧಕರೊಬ್ಬರು ನಮ್ಮನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ದೇವರು ಅವರ ಕುಟುಂಬ, ಅಪಾರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ
— B.S. Yediyurappa (@BSYBJP) June 11, 2021
ದಲಿತ ಕವಿ ಎಂದೇ ಖ್ಯಾತರಾಗಿದ್ದ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ ವಿಧಿವಶರಾದ ಸುದ್ದಿ ತಿಳಿದು ಅತೀವ ನೋವುಂಟಾಗಿದೆ. ಕನ್ನಡ ಸಾಹಿತ್ಯದ ಶ್ರೇಷ್ಠ ಸಾಧಕರೊಬ್ಬರು ನಮ್ಮನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಕೋರುತ್ತಾ, ದೇವರು ಅವರ ಕುಟುಂಬ, ಅಪಾರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.