ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆರಂಭಗೊಂಡಿರುವ ಕನ್ನಡಕ್ಕಾಗಿ ನಾವು ಅಭಿಯಾನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ವಿಶೇಷ ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮ ನಡೆಯಿತು.
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಕನ್ನಡ ರಾಜ್ಯೋತ್ಸವದ ಲಾಂಛನವನ್ನು ಬಿಡುಗಡೆ ಮಾಡಿ, ಕನ್ನಡದಲ್ಲಿ ಮಾತನಾಡುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ' ಕನ್ನಡಕ್ಕಾಗಿ ನಾವು' ಅಭಿಯಾನವನ್ನು ಆಯೋಜಿಸಿದೆ. ಇದರಲ್ಲಿ ಎಲ್ಲರೂ ಭಾಗವಹಿಸೋಣ. ಕನ್ನಡ ಬಳಸೋಣ, ಬೆಳೆಸೋಣ, ಉಳಿಸೋಣ ಹಾಗೂ ಗೌರವಿಸೋಣ. ಮಾತಾಡ್ ಮಾತಾಡ್ ಕನ್ನಡ ಎಂದು ಮನವಿ ಮಾಡಿದರು.
ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ವಿದ್ಯುಕ್ತವಾಗಿ ಆರಂಭಗೊಂಡಿತು. ಬಳಿಕ ಭರತ ನಾಟ್ಯ, ಯಕ್ಷಗಾನ ಪ್ರಸಂಗ, ಸಮೂಹ ನೃತ್ಯ ಕಾರ್ಯಕ್ರಮ ನಡೆದವು. ಕುವೆಂಪು ಅವರ ಬಾಗಿಲೊಳಗೆ ಕೈಮುಗಿದು ಒಳಗೆ ಬಾ ಯಾತ್ರಿಕನೆ ನೃತ್ಯ ಪ್ರದರ್ಶನ ಜನಮನ ಸೂರೆಗೊಂಡಿತು. ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗು ಇಂಧನ ಸಚಿವರಾದ ಸುನಿಲ್ ಕುಮಾರ್, ಕನ್ನಡ ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳಾದ ಎನ್ ಮಂಜುಳಾ, ಕನ್ನಡ ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ರಂಗಪ್ಪ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಕನ್ನಡಕ್ಕಾಗಿ ನಾವು ಅಭಿಯಾನ; ಕನ್ನಡ ಮಾತನಾಡಿ ಗಮನ ಸೆಳೆದ ರಾಜ್ಯಪಾಲ ಗೆಹ್ಲೋಟ್
66ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನ ಹಮ್ಮಿಕೊಂಡಿದ್ದು, ಈ ಅಭಿಯಾನದ ಅಂಗವಾಗಿ ಮಾತಾಡ್ ಮಾತಾಡ್ ಕನ್ನಡ ಕಾರ್ಯಕ್ರಮ ನಡೆಯಿತು.